ಶಾಲೆಯನ್ನೇ ಮರೆತ ಹಾಡಿಯ ಮಕ್ಕಳು
ಹಾಡಿಗಳಲ್ಲಿ ತಿರುಗಾಡುತ್ತಾ ಕಾಲಹರಣ ಮಾಡುತ್ತಿರುವ ಚಿಣ್ಣರು
Team Udayavani, Nov 11, 2021, 11:43 AM IST
ಎಚ್.ಡಿ.ಕೋಟೆ: ಶಾಲೆಗಳು ಶುರುವಾಗಿ ತಿಂಗಳು ಕಳೆದರೂ ಕೆಲ ಹಾಡಿಗಳ ಮಕ್ಕಳು ಶಾಲೆಯನ್ನೇ ಮರೆತು ಕಾಲಹರಣ ಮಾಡುತ್ತಿದ್ದಾರೆ. ತಾಲೂಕಿನ ಭೀಮನಹಳ್ಳಿ ಆಶ್ರಮ ಶಾಲೆಯ ರಾಜೇಗೌಡನಹುಂಡಿ ಹಾಡಿಯ ಆದಿವಾಸಿ ಮಕ್ಕಳು ಶಾಲೆಗೆ ಹೋಗದೇ ಹಾಡಿಯಲ್ಲೇ ಕಾಲ ಕಳೆಯುತ್ತಿದ್ದಾರೆ.
ಇವರನ್ನು ಮನವೊಲಿಸಿ ಶಾಲೆಗೆ ಕಳುಹಿಸಲು ಯಾರೊಬ್ಬರೂ ಯಾವುದೇ ಕ್ರಮ ವಹಿಸಿಲ್ಲ. ರಾಜೇಗೌಡನಹುಂಡಿ ಹಾಡಿಯಿಂದ ಕೇವಲ 1 ಕಿ.ಮೀ. ದೂರದ ಭೀಮನಹಳ್ಳಿ ಆಶ್ರಮ ಶಾಲೆಯಲ್ಲಿ ಹಾಡಿಯ ಮಕ್ಕಳು ಪ್ರವೇಶ ಪಡದಿವೆಯಾದರೂ ಇಲ್ಲಿಯ ತನಕ ತರಗತಿಗೆ ಹಾಜರಾಗಿಲ್ಲ. ಆದಿವಾಸಿ ಮಕ್ಕಳು ಶಾಲೆಗೆ ಹೋಗದೇ ರಸ್ತೆಯಲ್ಲಿ ಅಡ್ಡಾತ್ತಿರುವ ದೃಶ್ಯಗಳು ಕಂಡು ಬರುತ್ತಿವೆ. ಮಕ್ಕಳು ಗುಂಪು ಕಟ್ಟಿಕೊಂಡು ಆಟೋ ಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಇದನ್ನೂ ಓದಿ:- ನ.19ರಂದು “100′ ಚಲನಚಿತ್ರ ತೆರೆಗೆ: ರಮೇಶ ಅರವಿಂದ್
ಈ ಕುರಿತು ಮಕ್ಕಳನ್ನು ಪ್ರಶ್ನಿಸಿದರೆ, “ನಾವು ಶಾಲೆಗೆ ಹೋಗಲ್ಲ, ನಮಗೆ ಓದಕ್ಕೆ ಇಷ್ಟನೂ ಇಲ್ಲ’ ಎಂದು ನಿರುತ್ಸಾಹದ ಮಾತುಗಳನ್ನಾಡಿದರು. ದಿನಪೂರ್ತಿ ಗಿರಿಜನ ಮಕ್ಕಳು ಹಾಡಿಯಲ್ಲಿ ಬೀದಿ ಬೀದಿಗಳನ್ನು ಸುತ್ತುತ್ತಾ ಶಾಲೆಯ ಪರಿವೇ ಇಲ್ಲದಂತೆ ವರ್ತಿಸುತ್ತಿ ದ್ದಾರೆ. ಇವರ ಪೋಷಕರು ಅನಕ್ಷರಸ್ಥರಾಗಿದ್ದು, ಶಾಲೆ ಮಹತ್ವ ಇವರಿಗೆ ಗೊತ್ತಿಲ್ಲ.
ಹೀಗಾಗಿ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಉತ್ಸಾಹ ತೋರುತ್ತಿಲ್ಲ. ಹಾಡಿಯಲ್ಲಿ ಇದೇ ಪರಿಸ್ಥಿತಿ ಮುಂದುವರಿದರೆ ಮಕ್ಕಳು ದಾರಿ ತಪ್ಪಿ ದುಶ್ಚಟಗಳಿಗೆ ಬಲಿಯಾಗುವ ಸಾಧ್ಯತೆ ಇದೆ. ಹೀಗಾಗಿ ಶಿಕ್ಷಣ ಇಲಾಖೆ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆ ಯರು ಕಾಳಜಿ ವಹಿಸಿ ಹಾಡಿಗಳ ಮಕ್ಕಳು ಶಾಲೆಗೆ ಹೋಗುವಂತೆ ಮನವೊಲಿ ಸಬೇಕು. ಮೇಲಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡ ಈ ಬಗ್ಗೆ ಗಮನ ಹರಿಸಿ ಆಶ್ರಮ ಶಾಲೆಗೆ ಮಕ್ಕಳು ಬರುವಂತೆ ಕ್ರಮ ವಹಿಸ ಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.