ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಿದ ಚಿರತೆಗಳ ಹಾವಳಿ: ಶೀಘ್ರ ಕಡಿವಾಣ ಹಾಕಲು ಸಿಎಂಗೆ ಮನವಿ
ಸಿಎಂಗೆ ಮನವಿ ಮಾಡಿದ ಶಾಸಕ ದಿನೇಶ್ ಗೂಳಿಗೌಡ; ಆಯಕಟ್ಟಿನ ಪ್ರದೇಶಗಳಲ್ಲಿ ಬೋನುಗಳನ್ನು ಇಡಲು ಸಲಹೆ
Team Udayavani, Nov 8, 2022, 5:42 PM IST
ಮಂಡ್ಯ: ಜಿಲ್ಲೆಯಲ್ಲಿ ಚಿರತೆ ಹಾವಳಿ ಹೆಚ್ಚಿದ್ದು, ಇದನ್ನು ತುರ್ತಾಗಿ ತಡೆಗಟ್ಟಬೇಕಿದೆ. ಅಲ್ಲದೆ, ಇದು ಗ್ರಾಮೀಣ ಭಾಗ ಸೇರಿದಂತೆ ಜನರ ಜೀವದ ಪ್ರಶ್ನೆಯಾಗಿದೆ. ಹೀಗಾಗಿ ವಿಶ್ವವಿಖ್ಯಾತ ಕೆಆರ್‌ಎಸ್ ಸೇರಿದಂತೆ ಎಲ್ಲ ಕಡೆ ಆಯಕಟ್ಟಿನ ಪ್ರದೇಶಗಳಲ್ಲಿ ಹೆಚ್ಚಿನ ಬೋನುಗಳನ್ನು ಇಟ್ಟು ಚಿರತೆಗಳನ್ನು ಸೆರೆಹಿಡಿಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜತೆಗೆ ಸಾರ್ವಜನಿಕರಿಗೆ ಅಗತ್ಯ ಜಾಗೃತಿ ಮತ್ತು ಅರಿವು ಮೂಡಿಸಬೇಕು ಎಂದು ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್ ಗೂಳಿಗೌಡ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಪತ್ರ ಬರೆದು ಕೋರಿದ್ದಾರೆ.
ಅರಣ್ಯ ಇಲಾಖೆಯು ಪ್ರಸ್ತುತ ಮುಖ್ಯಮಂತ್ರಿಯವರ ಬಳಿಯೇ ಇರುವುದರಿಂದ ತುರ್ತಾಗಿ ಕ್ರಮ ಕೈಗೊಂಡು ಸಾರ್ವಜನಿಕರ ಜೀವ ರಕ್ಷಣೆಗೆ ಮುಂದಾಗಬೇಕಿದೆ. ಜತೆಗೆ ಚಿರತೆಗಳು ಕಾಣಿಸಿಕೊಂಡಾಗ ಯಾವ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರಿಗೆ ಸೂಕ್ತ ಅರಿವು ಮೂಡಿಸುವ ಕೆಲಸವೂ ಆಗಬೇಕು ಎಂದು ಪತ್ರದ ಮೂಲಕ ಕೇಳಿಕೊಂಡಿದ್ದಾರೆ.
ಪತ್ರದ ಸಾರಾಂಶ ಹೀಗಿದೆ:
ಮಂಡ್ಯ ಜಿಲ್ಲೆಯ ಎಲ್ಲ ತಾಲೂಕುಗಳ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಕೆಲವು ಗ್ರಾಮೀಣ ಪ್ರದೇಶಗಳ ಗ್ರಾಮಗಳಿಗೂ ಪ್ರವೇಶಿಸಿ ಜನ ಜಾನುವಾರುಗಳಿಗೆ ಉಪಟಳ ನೀಡುತ್ತಿವೆ. ನಿಯಮಿತವಾಗಿ ಚಿರತೆಗಳು ಸಾರ್ವಜನಿಕ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರು, ರೈತರು ತಮ್ಮ ಜಮೀನುಗಳಿಗೆ ಹೋಗಲು ಭಯಭೀತರಾಗಿದ್ದು, ಸಾಕು ಪ್ರಾಣಿಗಳ ರಕ್ಷಣೆ ಮಾಡಲು ಕಷ್ಟಪಡುತ್ತಿದ್ದಾರೆ.
ಜಿಲ್ಲೆಯ ವಿಶ್ವ ವಿಖ್ಯಾತ ಪ್ರವಾಸಿ ತಾಣ ಕೆ.ಆರ್.ಎಸ್‌ನ ಬೃಂದಾವನದ ಸಾರ್ವಜನಿಕ ಪ್ರದೇಶದಲ್ಲಿ ಹಗಲು ವೇಳೆಯಲ್ಲಿಯೇ ಚಿರತೆ ಕಾಣಿಸಿಕೊಂಡು ಪ್ರವಾಸಿಗರು ಮತ್ತು ಸ್ಥಳೀಯ ಜನರಲ್ಲಿ ಆತಂಕ ಮೂಡಿದೆ. ಚಿರತೆ ಸಂಚರಿಸಿದ ಚಹರೆ ಬೃಂದಾವನದಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಈ ಬಗ್ಗೆ ದಿನಪತ್ರಿಕೆಗಳು ಮತ್ತು ವಿದ್ಯುನ್ಮಾನ ವಾಹಿನಿಗಳಲ್ಲಿ ಪ್ರಚಾರವಾಗುತ್ತಿದೆ. ಇದರಿಂದ ಬೃಂದಾವನದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು, ಅಣೆಕಟ್ಟೆಯ ಭದ್ರತೆಗೆ ನಿಯೋಜಿಸಿರುವ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿಯು ಸಹ ಭಯಭೀತರಾಗಿದ್ದಾರೆ. ಚಿರತೆ ಕಾಣಿಸಿಕೊಂಡಾಗ ಮಾತ್ರ ಕೆ.ಆರ್.ಎಸ್. ಪ್ರವೇಶಿಸದಂತೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗುತ್ತದೆ. ನಂತರ ಕೆಲವು ದಿನಗಳ ಕಾಲ ಶೋಧ ಕಾರ್ಯ ನಡೆಸಿ ಚಿರತೆ ಪತ್ತೆಯಾಗಿಲ್ಲವೆಂದು ಪುನಃ ಪ್ರವಾಸಿಗರಿಗೆ ಕೆ.ಆರ್.ಎಸ್ ವೀಕ್ಷಿಸಲು ಅನುಮತಿ ನೀಡಲಾಗುತ್ತದೆ.
ಗ್ರಾಮೀಣ ಪ್ರದೇಶಗಳಲ್ಲಿ ಆಗಿಂದಾಗ್ಗೆ ಚಿರತೆ ಕಾಣಿಸಿಕೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಆತಂಕವುಂಟಾಗಿದ್ದು, ಅರಣ್ಯ ಇಲಾಖೆಯಿಂದ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ಬಗ್ಗೆ ಕ್ರಮಕೈಗೊಳ್ಳಬೇಕಾಗಿರುತ್ತದೆ. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಸೇರಿದಾಗ ಆಕಸ್ಮಿಕವಾಗಿ ಚಿರತೆ ದಾಳಿ ಮಾಡಿದರೆ ಸಾರ್ವಜನಿಕರ ಜೀವ ಹಾನಿಯಾಗುತ್ತದೆ. ಈ ರೀತಿಯಾದಲ್ಲಿ ಇದಕ್ಕೆ ಯಾರು ಹೊಣೆ ಎಂಬ ಪ್ರಶ್ನೆಗೆ ಇದುವರೆವಿಗೂ ಉತ್ತರವಿಲ್ಲ. ಮಂಡ್ಯ ಜಿಲ್ಲೆಯಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಆಗಿಂದಾಗ್ಗೆ ಕಾಣಿಸಿಕೊಳ್ಳುತ್ತಿರುವ ಚಿರತೆಯನ್ನು ಹಿಡಿಯಲು ಆಯಾ ಕಟ್ಟಿನ ಪ್ರದೇಶಗಳಲ್ಲಿ ಹೆಚ್ಚಿನ ಬೋನುಗಳನ್ನು ಇಡುವ ಮೂಲಕ ಚಿರತೆಯನ್ನು ಸೆರೆ ಹಿಡಿಯಲು ತುರ್ತು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದವರಿಗೆ ಆದೇಶಿಸಬೇಕೆಂದು ಈ ಮೂಲಕ ತಮ್ಮಲ್ಲಿ ಕೋರುತ್ತೇನೆ ಎಂದು ಶಾಸಕ ದಿನೇಶ್ ಗೂಳಿಗೌಡ ಅವರು ಪತ್ರದ ಮೂಲಕ ಮುಖ್ಯಮಂತ್ರಿಯವರನ್ನು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.