ಉದ್ಯೋಗ ಖಾತ್ರಿ ಸದ್ಬಳಕೆಯಾಗಲಿ
Team Udayavani, May 24, 2020, 4:47 AM IST
ಪಿರಿಯಾಪಟ್ಟಣ: ಗ್ರಾಮೀಣರು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬದು ನಿರ್ಮಾಣ ಕಾಮಗಾರಿಗೆ ಆದ್ಯತೆ ನೀಡಲಾಗಿದೆ. ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಕೆ ಮಹದೇವ್ ತಿಳಿಸಿದರು.
ತಾಲೂಕಿನ ಚಿಟ್ಟೇನಹಳ್ಳಿ ಗ್ರಾಮದಲ್ಲಿ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಗೆ ಉತ್ತೇಜನ ನೀಡಿದೆ. ಇದರಿಂದ ಕೆಲಸಕ್ಕಾಗಿ ನಗರಗಳಿಗೆ ತೆರಳುವ ಜನತೆಗೆ ಸ್ಥಳೀಯವಾಗಿಯೇ ಉದ್ಯೋಗ ಸೃಷ್ಟಿ ಮಾಡುವುದು ಹೆಮ್ಮೆಯ ಸಂಗತಿ.
ಇದರ ಮುಖ್ಯ ಉದ್ದೇಶ ಗ್ರಾಮೀಣರಿಗೆ ಉದ್ಯೋಗ ಕಲ್ಪಿಸಿ ಅವರ ಜೀವನ ಮಟ್ಟ ಸುಧಾರಿಸುವುದಾಗಿದೆ. ಇಂದಿನ ದಿನಗಳಲ್ಲಿ ಅತ್ಯಂತ ಉಪಯುಕ್ತ ಯೋಜನೆ ಇದಾಗಿದೆ. ಹೊಲಗಳಲ್ಲಿ ಬದು ನಿರ್ಮಾಣದಿಂದ ಅಂತರ್ಜಾಲ ಹೆಚ್ಚಾಗುವುದರ ಜೊತೆಗೆ ಇಳುವರಿ ಹೆಚ್ಚಾಗುತ್ತದೆ ಎಂದರು.
ತಹಶೀಲ್ದಾರ್ ಶ್ವೇತಾ ಎನ್.ರವೀಂದ್ರ, ತಾಪಂ ಅಧ್ಯಕ್ಷೆ ಕೆ.ಆರ್.ನಿರೂಪ, ಇಒ ಡಿ.ಸಿ.ಶೃತಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಸಿದ್ದರಾಜು, ಗ್ರಾಪಂ ಅಧ್ಯಕ್ಷೆ ಮಮತಾ, ಉಪಾಧ್ಯಕ್ಷೆ ಜಯಮ್ಮ, ಪಿಡಿಒ ನರಸಿಂಹ ಮೂರ್ತಿ, ಸಿ.ಎನ್.ರವಿ, ಚಂದ್ರಶೇಖರಯ್ಯ, ಸಂಜೀವ್ ಕುಮಾರ್, ಚಿಕ್ಕೀರಯ್ಯ, ಸ್ವಾಮಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.