ಬಿಎಸ್‌ವೈ ಕೊಟ್ಟ ಮಾತು ಉಳಿಸಿಕೊಳ್ಳಲಿ


Team Udayavani, Jun 29, 2020, 6:31 AM IST

bsy-maatu

ಮೈಸೂರು: ಮುಖ್ಯಮಂತ್ರಿ ಯಡಿಯೂರಪ್ಪ ಮಾತಿನ ಮೇಲೆ ನಿಂತ ನಾಯಕರಾಗಿದ್ದು, ಅವರು ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದು ಮಾಜಿ ಸಚಿವ ಎಚ್‌.ವಿಶ್ವನಾಥ್‌ ಹೇಳಿದರು. ನಗರದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣದಲ್ಲಿ ಕೊಟ್ಟ ಮಾತು ಉಳಿಸಿ ಕೊಂಡ ನಾಯಕ ಇದ್ದರೆ ಅದು ಬಿಎಸ್‌ ವೈ ಮಾತ್ರ. ಈ ಮಾತಿಗೆ ನೀವು ಅಪವಾದ ಆಗಬೇಡಿ. ನನಗೆ ಸಚಿವ ಸ್ಥಾನ ಕೊಡಬೇಕು ಎಂದು ಹೇಳುತ್ತಿಲ್ಲ. ಅದು  ನಿಮಗೆ ಬಿಟ್ಟ ವಿಚಾರ. ಆದರೆ ನನ್ನ ಅನುಭವ ಬಳಸಿಕೊಳ್ಳಿ ಎಂದು ಕೇಳುತ್ತಿದ್ದೇನೆ ಎಂದು ತಿಳಿಸಿದರು.

ಮಾತು ತಪ್ಪಬೇಡಿ: ದೇಶದ ರಾಜಕಾರಣ ನಡೆಯುತ್ತಿರುವುದು ಭಾವನೆ ಮತ್ತು ನಂಬಿಕೆ ಮೇಲೆ. ಆ ಎರಡೂ ಮುಗಿದು ಹೋದರೆ ರಾಜಕಾರಣ ಇರೋದೇ ಇಲ್ಲ. ಜನನಾಯಕರು ಈ ಭಾವನೆ ಮತ್ತು ನಂಬಿಕೆ ಉಳಿಸಿಕೊಳ್ಳಬೇಕಿದೆ.  ಯಡಿಯೂರಪ್ಪನವರೇ ತಾವು ಮಾತು ತಪ್ಪದ ಮಗನಾಗಿ. ಮಾತು ತಪ್ಪಿದ ಮಗನಾಗಬಾರದು ಎಂಬುದು ಜನರ ಅಭಿಪ್ರಾಯ ಎಂದು ಹೇಳಿದರು.

ನನ್ನ ಆಶಯ: ನನಗೆ ಈಗಾಗಲೇ ಸಾಕಷ್ಟು ಅನುಭವ ಆಗಿದೆ. ಜನರು ನೆನಪಿಟ್ಟುಕೊಳ್ಳುವಂತಹ ಕೆಲಸಗಳನ್ನು ಮಾಡಿದ್ದೇನೆ. ಅಷ್ಟು ಸಾಕು. ನನಗೆ ಎಂಎಲ್ಸಿ ಸ್ಥಾನ ಸಿಕ್ಕಾಕ್ಷಣ ನನ್ನ ಕೀರ್ತಿ ಯೇನು ಅಟ್ಟಕ್ಕೇರುವುದಿಲ್ಲ. ಸ್ಥಾನ ಸಿಗದಾಕ್ಷಣ  ನನಗೇನೂ ಬೇಸರವಾಗುವುದಿಲ್ಲ. ಆದರೆ ಅವರು ಕೊಟ್ಟ ಮಾತನ್ನು ಉಳಿಸಿ  ಕೊಳ್ಳಲಿ, ಮಾತು ತಪ್ಪದ ಮಗನಾಗದಿರಲಿ ಎಂಬುದು ನನ್ನ ಆಶಯ ಎಂದು ಹೇಳಿದರು.

7 ಪುಸ್ತಕ ಬರೆದಿದ್ದೇನೆ: ನಾನು ಸಾಹಿತಿಯೂ ಹೌದು, ರಾಜಕಾರಣಿಯೂ ಹೌದು. 7 ಪುಸ್ತಕಗಳನ್ನು ಬರೆದಿದ್ದೇನೆ. ಚುನಾವಣೆ ವಿಡಂಬನೆ, ತುರ್ತು ಪರಿಸ್ಥಿತಿ ಬಗ್ಗೆಯೂ ಬರೆದಿದ್ದೇನೆ. ಚಾಣಕ್ಯನ ಕಾಲದಲ್ಲಿ ಹೇಗೆಲ್ಲ ಚುನಾವಣೆ ನಡೆ  ಯುತ್ತಿತ್ತು ಎಂಬುದನ್ನು ಉಲ್ಲೇಖೀಸಿದ್ದೇನೆ ಎಂದು ಹೇಳಿದರು. ನಾನು ಮತ್ತೂಂದು ರಾಜಕೀಯ ಪುಸ್ತಕ ಬರೆಯಲು ಮುಂದಾಗಿ ದ್ದೇನೆ. ಆ ಪುಸ್ತಕಕ್ಕೆ “ದಿ ಬಾಂಬೆ ಡೇಸ್‌’ ಎಂದು ಹೆಸರು ಕೊಟ್ಟಿದ್ದೇನೆ. ಈ ಪುಸ್ತಕ ಮೂರು  ಭಾಷೆಯಲ್ಲಿರಲಿದ್ದು, ದೆಹಲಿಯಲ್ಲಿ ಬಿಡುಗಡೆ ಮಾಡುತ್ತೆನೆ. ಬಾಂಬೆಯಲ್ಲಿ ಏನಾಯಿತು, ಅದೆಲ್ಲವನ್ನು ಬರೆಯುತ್ತಿದ್ದೇನೆ. ಒಂದು ಸರ್ಕಾರ ಹೋಗಿ ಮತ್ತೂಂದು ಸರ್ಕಾರ ಬರಲೇಬೇಕಿದೆ. ಜನ ತಂತ್ರ ವ್ಯವಸ್ಥೆ ಯಲ್ಲಿ ಭಾವನೆ,  ನಂಬಿಕೆ ಮೇಲಿನ ತಲ್ಲಣ ವೇನು. ಇದೆಲ್ಲ ವನ್ನು ಅಕ್ಷರದ ಮೂಲಕ ಜನರಿಗೆ ತಿಳಿಸು ತ್ತೇನೆ ಎಂದು ಹೇಳಿದರು.

ಕುಮಾರಸ್ವಾಮಿ ವಿರುದ್ಧ ವ್ಯಂಗ್ಯ: ನಾನು ಯಾವ ಪಕ್ಷದಲ್ಲೇ ಇದ್ದರು ಆ ಪಕ್ಷವನ್ನ ಪ್ರೀತಿ ಮಾಡುತ್ತೇನೆ. ಪಕ್ಷದ ನಾಯಕತ್ವದ ನಡವಳಿಕೆ ವಿರುದ್ಧವೂ ದಂಗೆ ಎದ್ದಿದ್ದೇನೆ. ಬಂಗಾರಪ್ಪ, ವೀರಪ್ಪ ಮೊಯ್ಲಿ ಹಾಗೂ ನಾವೇ ಕರೆತಂದ  ಸಿದ್ದರಾಮಯ್ಯನ ವಿರುದ್ಧವೂ ದಂಗೆ ಎದ್ದಿದ್ದೆ. ಸಮ್ಮಿಶ್ರ ಸರ್ಕಾರದ ಕುಮಾರಸ್ವಾಮಿ ವಿರುದ್ಧ ದಂಗೆ ಎದ್ದವನು ನಾನು. ಈ ಎಲ್ಲ ಸಂಗತಿಗಳಿಗೆ ಪುಸ್ತಕ ರೂಪ ನೀಡಲು ಅಣಿಯಾಗುತ್ತಿದ್ದೇನೆ ಎಂದು ವಿಶ್ವನಾಥ್‌ ಹೇಳಿದರು. 2006ರಲ್ಲಿ  ಕುಮಾರಸ್ವಾಮಿ ಅವರು ಧರ್ಮ ಸಿಂಗ್‌ ಸರ್ಕಾರ ಬೀಳಿಸಿದ್ದು ಕ್ಷಿಪ್ರ ಕ್ರಾಂತಿಯಂತೆ. ಆದರೆ, ಈಗ ನಾವು ಮಾಡಿದ್ದು ಪಕ್ಷಕ್ಕೆ ದ್ರೋಹ ಅಂತೆ ಎಂದು ಮಾಜಿ ಸಿಎಂ ಎಚ್‌ಡಿಕೆ ವಿರುದ್ಧ ಕಿಡಿಕಾರಿದರು.

ಸಾರಾ ಹೇಳಿಕೆಗೆ ತಿರುಗೇಟು: ವಿಶ್ವನಾಥ್‌ ಅಧ್ಯಾಯ ಮುಗಿಯಿತು ಎಂಬ ಸಾ.ರಾ.ಮಹೇಶ್‌ ಹೇಳಿಕೆಗೆ ತಿರುಗೇಟು ನೀಡಿದ ಅವರು, ನಾನು ಯಾರಿಗೂ ಉತ್ತರ ಕೊಡಬೇಕಿಲ್ಲ. ಅವರ್ಯಾರೂ ನನ್ನ ಮಟ್ಟ ಅಲ್ಲ. ಅವರು ಗ್ರಾಮ ಪಂಚಾಯತಿ  ಮಟ್ಟದವರು. ಅದಕ್ಕೆ ನಾನು ಉತ್ತರ ಕೊಡಬೇಕಿಲ್ಲ ಎಂದು ತಿರುಗೇಟು ನೀಡಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.