ಮೈಸೂರು ಜಿಲ್ಲೆ: 59 ಮಂದಿಗೆ ಸೋಂಕು


Team Udayavani, Jul 9, 2020, 5:24 AM IST

ifity nine

ಮೈಸೂರು: ಜಿಲ್ಲೆಯಲ್ಲಿ ಪ್ರತಿನಿತ್ಯ ಕೋವಿಡ್‌ 19 ಸೋಂಕಿತರು ಮೃತಪಡುತ್ತಿದ್ದು, ಬುಧವಾರವೂ ಮಹಿಳೆಯೊಬ್ಬರು ಸೋಂಕಿನಿಂದ ಚಿಕಿತ್ಸೆ ಫ‌ಲಿಸದೇ ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಪ್ರತಿದಿನವೂ ಸೋಂಕಿತರ ಸಂಖ್ಯೆ ದ್ವಿಗುಣವಾಗುತ್ತಲೇ ಇರುವುದು ಒಂದೆಡೆಯಾದರೆ, ಸೋಂಕಿಗೆ ಮೃತಪಡುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಬುಧವಾರ ಶೀತ, ಜ್ವರ, ಎದೆನೋವು, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.

ಕಲ್ಯಾಣಗಿರಿ ರಾಜಕುಮಾರ್‌ ರಸ್ತೆಯ 48 ವರ್ಷದ ಮಹಿಳೆ ಜ್ವರದಿಂದ ಬಳಲುತ್ತಿದ್ದರು. ಜ್ವರ, ಉಸಿರಾಟದ ತೊಂದರೆಯಿಂದ ಜು.6ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫ‌ಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತ ಸೋಂಕಿತ ಮಹಿಳೆಗೆ ಸಕ್ಕರೆ ಕಾಯಿಲೆ, ಅಸ್ತಮಾ ಸಮಸ್ಯೆ ಇತ್ತು. ಮೃತರ ಅಂತ್ಯಕ್ರಿಯೆಯನ್ನು ಜಿಲ್ಲಾಡಳಿತವೇ ಗೌರವಯುತವಾಗಿ ನೆರವೇರಿಸಿದ್ದು, ಜಿಲ್ಲೆಯಲ್ಲಿ ಸೋಂಕಿಗೆ ಮೃತರ ಸಂಖ್ಯೆ 14ಕ್ಕೇರಿದೆ.

59 ಮಂದಿಗೆ ಸೋಂಕು: ಬುಧವಾರ ಜಿಲ್ಲೆಯ 59 ಮಂದಿಗೆ ಪಾಸಿಟಿವ್‌ ಆಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 589ಕ್ಕೆ ಏರಿಕೆಯಾಗಿದೆ. ಜೊತೆಗೆ ಬುಧವಾರ  18 ಮಂದಿ ಸೋಂಕಿತರು ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು,  ಈವರೆಗೆ 322 ಸೋಂಕಿತರು ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 253 ಸಕ್ರಿಯ ಸೋಂಕಿತರು ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ. ಇವರಲ್ಲಿ 12 ಮಂದಿ ಖಾಸಗಿ ಆಸ್ಪತ್ರೆಯಲ್ಲಿ, ಇಬ್ಬರು ವಿವಿ  ಪುರಂನ ಹೆರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಬುಧವಾರದ ಪ್ರಕರಣಗಳಲ್ಲಿ 23 ಮಂದಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದ್ದರೆ, 15 ಮಂದಿಗೆ ಐಎಲ್‌ಐ, 4 ಎಸ್‌ ಎಆರ್‌ಐ (ಸಾರಿ) 8 ಮಂದಿ  ಅಂತರ ಜಿಲ್ಲಾ ಪ್ರವಾಸದ ಹಿನ್ನೆಲೆ ಹೊಂದಿದ್ದಾರೆ. ನಾಲ್ವರು ಆರೋಗ್ಯ ಕಾರ್ಯಕರ್ತರು, ಮೂವರು ಪೊಲೀಸರು, ಓರ್ವ ಗರ್ಭಿಣಿ, ಬಾಣಂತಿಗೂ ಸೋಂಕು ದೃಢಪಟ್ಟಿದೆ. ಜಿಲ್ಲೆಯ ಎಲ್ಲಾ ಸೋಂಕಿತರನ್ನು ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ  ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಮನೆ, ರಸ್ತೆ, ಗ್ರಾಮ, ಬಡಾವಣೆಗಳನ್ನು ಸೀಲ್‌ಡೌನ್‌ ಮಾಡಲಾಗಿದೆ.

ಮೈಸೂರಿನ ವಿವಿಧೆಡೆ:  ರಾಜೀವ್‌ನಗರ, ಶ್ರೀರಾಂಪುರದ ಸೂರ್ಯ ಲೇಔಟ್‌, ಕೆ.ಜಿ.ಕೊಪ್ಪಲಿನ ನ್ಯೂ ಕಾಂತರಾಜ ಅರಸ್‌ ರಸ್ತೆ, ಶಾಂತಿನಗರ, ಆಜಾದ್‌ ನಗರ, ಮಾರುತಿ ಲೇಔಟ್‌, ಸಿಹೆಚ್‌ಸಿ ಜಯನಗರ, ಕುವೆಂಪುನಗರ, ಶಾಂತಿನಗರದ  ಅಜೀಜ್‌ ಮುಖ್ಯ ರಸ್ತೆ, ಗಾಯತ್ರಿಪುರಂ, ಜಾಕಿ ಕ್ವಾಟ್ರಸ್‌, ಜ್ಯೋತಿನಗರ, ರಾಮಕೃಷ್ಣನಗರ, ಕೆಆರ್‌ಎಸ್‌ ರಸ್ತೆಯ ಜಯದೇವನಗರ, ರಾಘವೇಂದ್ರನಗರ, ಕಲ್ಯಾಣಗಿರಿ, ಹಿನಕಲ್‌ನ ಹೊಸ ರಸ್ತೆ, ಆನಂದನಗರದ ಎಂಎಂಸಿ  ಪದವಿಪೂರ್ವ ಹಾಸ್ಟೆಲ್‌, ವಿವಿ ಮೊಹಲ್ಲಾ, ಬನ್ನಿಮಂಟಪದ ಕೆಎಸ್‌ಆರ್‌ಟಿಸಿ ಡಿಪೋ ಹಾಗೂ ಜಗನ್‌ ಮೋಹನ ಪ್ಯಾಲೆಸ್‌ ಹತ್ತಿರದ ರಸ್ತೆಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಸೀಲ್‌ಡೌನ್‌ ಪ್ರದೇಶಗಳು: ಬನ್ನಿಮಂಟಪದ 2ನೇ ಮೇನ್‌, ರಾಜಕುಮಾರ್‌ ರಸ್ತೆ, ಬಂಬೂ ಬಜಾರ್‌, ಜಲಪುರಿ ಪೊಲೀಸ್‌ ಕ್ವಾಟ್ರಸ್‌, ದಟ್ಟಗಳ್ಳಿ, ಶಾರದಾದೇವಿನಗರ, ಕುವೆಂಪುನಗರ ಮೊದಲನೇ ಹಂತ, ಬನ್ನಿ ಮಂಟಪ ಸಿ ಲೇಔಟ್‌, ಲಷ್ಕರ್‌  ಮೊಹ ಲ್ಲಾದ ಪಾರ್ಕ್‌ ರಸ್ತೆ, ವಿಜಯನಗರ 2ನೇ ಹಂತದದ ಹೈ ಟೆನ್ಶನ್‌ ಡಬಲ್‌ ರೋಡ್‌, ಸಿದಾಟಛಿರ್ಥ ಲೇಔಟ್‌, ರಾಮಕೃಷ್ಣನಗರದ ವಾಸು ಲೇಔಟ್‌  ನಲ್ಲಿನ ನಿವಾಸಿಗೆ ಪಾಸಿಟಿವ್‌ ಆಗಿದೆ. ಈ ಎಲ್ಲಾಬಡಾವಣೆಗಳನ್ನು ಸೀಲ್‌ಡೌನ್‌ ಮಾಡಲಾಗಿದೆ.

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

5

Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.