ಮೈಸೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ
Team Udayavani, Jun 24, 2020, 5:53 AM IST
ಮೈಸೂರು: ಕೋವಿಡ್-19 ಹಿನ್ನೆಲೆ ಲಾಕ್‌ಡೌನ್ ನಿಂದಾಗಿ ಮುಂದೂಡಲಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಾಳೆಯಿಂದ ನಡೆಯಲಿದ್ದು, ಜಿಲ್ಲಾದ್ಯಂತ ಹಲವು ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆಗೆ ಸಿದ್ಧತೆ ಮಾಡಲಾಗಿದೆ. ಜಿಲ್ಲೆಯಲ್ಲಿ ಜೂ.25ರಿಂದ ಜುಲೈ 4ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಶಿಕ್ಷಣ ಇಲಾಖೆ ಸಕಲವೂ ಸಿದ್ಧತೆ ಮಾಡಿಕೊಂಡಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳನ್ನೂ ಸ್ಯಾನಿಟೈಸ್ ಮಾಡಲಾಗಿದೆ.
ಜಿಲ್ಲೆಯಲ್ಲಿ 39,822 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿದ್ದು, ಅವರಲ್ಲಿ 20,631 ಬಾಲಕರು ಹಾಗೂ 19,191 ಬಾಲಕಿಯರಿದ್ದು, ಇವರಿಗೆ ಒಟ್ಟು 139 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 849 ವಿದ್ಯಾರ್ಥಿಗಳು ಹೊರ ಜಿಲ್ಲೆಗೆ ಪರೀಕ್ಷಾ ಕೇಂದ್ರ ಬದಲು ಮಾಡಿಕೊಂಡಿದ್ದರೆ, 320 ವಿದ್ಯಾರ್ಥಿಗಳು ಬೇರೆ ಜಿಲ್ಲೆಯಿಂದ ಮೈಸೂರಿಗೆ ಬದಲು ಮಾಡಿಕೊಂಡಿ ದ್ದಾರೆ. ನಗರದಲ್ಲಿ 46 ಪರೀಕ್ಷಾ ಕೇಂದ್ರಗಳಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿ 93 ಕೇಂದ್ರಗಳನ್ನು ತೆರೆಯಲಾಗಿದೆ. ಇದಲ್ಲದೇ ಹೆಚ್ಚುವರಿಯಾಗಿ 12 ಬ್ಲಾಕ್ ಪರೀಕ್ಷಾ ಕೇಂದ್ರ ತೆರೆಯಲಾಗಿದೆ.
ಪ್ರತ್ಯೇಕ ಕೊಠಡಿ: ಈಗಾಗಲೇ ನಗರ ಮತ್ತು ತಾಲೂಕು ಕೇಂದ್ರಗಳಲ್ಲಿ ಕಂಟೈನ್ಮೆಂಟ್ ಜೋನ್‌ಗೆ ಒಳಪಟ್ಟ ಪ್ರದೇಶದಿಂದ ಬರುವ ವಿದ್ಯಾರ್ಥಿಗಳನ್ನು ಪರೀಕ್ಷಿಸಿ, ಅವರು ಪ್ರತ್ಯೇಕ ಕೊಠಡಿಯಲ್ಲಿ ಕುಳಿತು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಕಂಟೈನ್ಮೆಂಟ್ ಜೋನಲ್ಲಿರುವ ಪರೀಕ್ಷಾ ಕೇಂದ್ರಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಸಂಘ, ಸಂಸ್ಥೆಗಳಿಂದ ಮಾಸ್ಕ್: ಎಸ್ಸೆಸ್ಸೆಲ್ಸಿ ಬರೆಯುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಗರದ ಹಲವು ಸಂಘ ಸಂಸ್ಥೆಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಮಾಸ್ಕ್ಗಳನ್ನು ನೀಡಿವೆ. ಜೊತೆಗೆ ಇಲಾಖೆಯಿಂದ ಪ್ರತಿ ಪರೀಕ್ಷಾ ಕೇಂದ್ರಗಳಿಗೆ 2ರಿಂದ 3ರಂತೆ ಥರ್ಮಲ್ ಸ್ಕ್ರೀನಿಂಗ್ ಮಾಪನ ಹಾಗೂ ಸ್ಯಾನಿಟೈಸರ್ ನೀಡಲಾಗಿದೆ. ಮಂಗಳವಾರವೇ ಎಲ್ಲಾ ಕೊಠಡಿಗಳಿಗೆ ಸ್ಯಾನಿಟೈಸ್ ಮಾಡಲಾಗಿದೆ. ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಮಕ್ಕಳ ತಪಾಸಣೆ: ಪರೀಕ್ಷಾ ದಿನದಂದು ಬೆಳಗ್ಗೆ 7.30ಕ್ಕೆ ಪರೀಕ್ಷಾ ಕೇಂದ್ರಗಳನ್ನು ತೆರೆಯ ಲಾಗುವುದು. ವಿದ್ಯಾರ್ಥಿಗಳು ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸ್‌ಗೆ ಒಳಪಡಿಸಿದ ಬಳಿಕ ತಮ್ಮ ನಿಗದಿತ ಆಸನದಲ್ಲಿ ಕುಳಿತು ಓದಿಕೊಳ್ಳು ವಂತೆ ತಿಳಿಸಲಾಗಿದೆ. ಅಲ್ಲದೇ ಜೂ.24ರಂದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಿ ತಮ್ಮ ಆಸನದ ಸ್ಥಳ ಮತ್ತು ಕೊಠಡಿ ನೋಡಿಕೊಂಡು ಹೋಗಲು ಅನುವು ಮಾಡಿಕೊಡಲಾಗಿದೆ.
ಉಚಿತ ಸಾರಿಗೆ: ವಿದ್ಯಾರ್ಥಿಗಳನ್ನು ಅವರವರ ಮನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಶಿಕ್ಷಣ ಇಲಾಖೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಜತೆಗೆ ಒಪ್ಪಂದ ಮಾಡಿಕೊಂಡಿದೆ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗಾಗಿ 54 ಬಸ್‌ಗಳನ್ನು ಬಳಸಿಕೊಳ್ಳ ಲಾಗುವುದು. ಎಲ್ಲಾ ವಿದ್ಯಾರ್ಥಿಗಳ ಮಾಹಿತಿಯೂ ಸಾರಿಗೆ ಸಂಸ್ಥೆಗೆ ನೀಡಿ ಉಚಿತವಾಗಿ ಪರೀಕ್ಷಾ ಕೇಂದ್ರ ಗಳಿಗೆ ಕರೆತರುವ ವ್ಯವಸ್ಥೆ ಮಾಡಲಾಗಿದೆ.
ಸಹಾಯವಾಣಿ: ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ಮತ್ತು ಗೊಂದಲ ನಿವಾರಣೆಗೆ ಈಗಾಗಲೇ ಎಲ್ಲಾ ತಾಲೂಕು ಮತ್ತು ನಗರ ಕೇಂದ್ರಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ವಿದ್ಯಾರ್ಥಿಗಳ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ನೀಡುವ ವ್ಯವಸ್ಥೆ ಮಾಡಲಾಗಿದೆ.
ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ, ಮಾಸ್ಕ್, ಸ್ಯಾನಿಟೈ ಸರ್, ತಪಾಸಣೆ, ಆರೋಗ್ಯ ಸಿಬ್ಬಂದಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಪೋಷಕರಿಗೆ ಆತಂಕ ಬೇಡ, ಗೊಂದಲ ವಿಲ್ಲದೇ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಿ ನಿರಾತಂಕ ವಾಗಿ ಪರೀಕ್ಷೆ ಬರೆಯಬಹುದು. ಒಂದು ವೇಳೆ ಸಮಸ್ಯೆ ಗಳಿದ್ದಲ್ಲಿ ಸಹಾಯವಾಣಿ ಅಥವಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬಹುದು.
-ಪಾಂಡುರಂಗ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.