ಮಣ್ಣು, ಜಲ ಸಂರಕ್ಷಣೆಗೆ ಆದ್ಯತೆ
Team Udayavani, May 25, 2020, 6:42 AM IST
ಕೆ.ಆರ್.ನಗರ: ರೈತರ ಜಮೀನುಗಳಲ್ಲಿ ಮಣ್ಣು, ಜಲ ಸಂರಕ್ಷಣೆಗೆ ಆದ್ಯತೆ ನೀಡುವ ಉದ್ದೇಶದಿಂದ ಉದ್ಯೋಗ ಖಾತರಿ ಯೋಜನೆಯಡಿ ತಾಲೂಕಿನ ಎಲ್ಲಾ ಗ್ರಾಪಂನಲ್ಲೂ ಬದು ನಿರ್ಮಾಣ ಕಾಮಗಾರಿ ಮಾಸಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ತಾಪಂ ಇಒ ಎಂ.ಎಸ್.ರಮೇಶ್ ಹೇಳಿದರು.
ತಾಲೂಕಿನ ಮಾವತ್ತೂರು ಗ್ರಾಪಂ ವ್ಯಾಪ್ತಿಯ ಮಾರಗೌಡನಹಳ್ಳಿ ಗ್ರಾಮದ ರೈತ ವಿಶ್ವೇಶ್ವರಯ್ಯ ಅವರ ಜಮೀನಿನಲ್ಲಿ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, 1 ತಿಂಗಳವರೆಗೆ 34 ಗ್ರಾಪಂಗಳಲ್ಲಿ 710 ಬದು ನಿರ್ಮಾಣ ಕಾಮಗಾರಿ ಮಾಡುವ ಗುರಿ ಹೊಂದಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲಾಗುವುದು.
ಕೆರೆ ಅಭಿವೃದ್ಧಿ, ಪ್ರವಾಹ ನಿಯಂತ್ರಣ ಕಾಮಗಾರಿ, ನಮ್ಮ ಹೊಲ ನಮ್ಮ ದಾರಿ, ಸ್ಮಶಾನ ಅಭಿವೃದ್ಧಿ ಮತ್ತು ವೈಯಕ್ತಿಕ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು. ಕುರಿ, ದನದ ಕೊಟ್ಟಿಗೆ, ಕೃಷಿ ಹೊಂಡ, ಜಲ ಮರುಪೂರಣ ಘಟಕ ಸೇರಿದಂತೆ ಇತರ ಮುಂತಾದ 21 ಅಂಶಗಳ ಒಟ್ಟು 4,362 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.
ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಗ್ರಾಮೀಣರಿಗೆ ಉದ್ಯೋಗ ಕಲ್ಪಿಸಲು 4 ಲಕ್ಷ ಮಾನವ ದಿನಗಳನ್ನು ಸೃಷ್ಟಿ ಮಾಡಲು ಗುರಿ ನಿಗದಿಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ತಾಪಂ ಅಧ್ಯಕ್ಷ ಎಂ.ನಾಗರಾಜು, ಸದಸ್ಯ ಕೆ.ಎಲ್. ಲೋಕೇಶ್, ಸಹಾಯಕ ಕೃಷಿ ನಿರ್ದೇಶಕ ಶಶಿಧರ್, ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪ್ರಸನ್ನ, ಪಿಡಿಒ ಭವ್ಯ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ
Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Ajekar: ಎಣ್ಣೆಹೊಳೆ ಏತ ನೀರಾವರಿ ಪವರ್ ಕಟ್!
Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.