![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 21, 2020, 5:15 AM IST
ಮೈಸೂರು: ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗುವ ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ಮಾಡಲಾದ ತಿದ್ದುಪಡಿಯನ್ನು ವಾಪಸ್ ಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಭಾರತ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್ವಾದಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಡೀಸಿ ಕಚೇರಿ ಮುಂಭಾಗ ಪ್ರತಿಭಟಿಸಿದ ಪ್ರತಿಭಟನಕಾರರು, ಕೊರೊನಾದಿಂದ ಕೃಷಿಕರು, ಕಾರ್ಮಿಕರು, ಬಡವರು ಬಿಕ್ಕಟ್ಟಿಗೆ ಸಿಲುಕಿದ್ದು, ಇವರನ್ನು ಮೇಲೆತ್ತಲು ಕ್ರಮ ಕೈಗೊಳ್ಳಲು ಸರ್ಕಾರಗಳು ಕೈಗೊಂಡ ಕ್ರಮಗಳು ನಿರಾಶಾದಾಯಕವಾಗಿದೆ. ರಾಜ್ಯವನ್ನು ಆರ್ಥಿಕ ಬಿಕ್ಕಟ್ಟಿನಿಂದ ಮೇಲೆತ್ತುವ ದೂರದೃಷ್ಟಿಯಿಂದ ಕೂಡಿದವಲ್ಲ,
ಬದಲಿಗೆ ಶ್ರೀಮಂತರನ್ನು ಮತ್ತು ಕಾರ್ಪೋರೇಟ್ ಕಂಪನಿಗಳನ್ನು ಸಂರಕ್ಷಿಸುವ ಪ್ರಯತ್ನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತರ ಬೆಳೆನಷ್ಟ, ನಿರುದ್ಯೋಗ, ಆರ್ಥಿಕ ಸಂಕಷ್ಟದ ಕಾರಣದಿಂದ ರೈತರ, ಗೇಣಿದಾರರ, ಮಹಿಳೆಯರ ಸಾಲಗಳನ್ನು ಮೈಕ್ರೋ ಸಂಸ್ಥೆಗಳದ್ದು ಸೇರಿದಂತೆ ಮನ್ನಾ ಮಾಡಬೇಕು. ಬೆಳೆನಷ್ಟ ಪರಿಹಾರ ನೀಡಬೇಕು.
ಕಾರ್ಮಿಕರಿಗೆ ಲಾಕ್‌ಡೌನ್ ಅವಧಿಯ ಬಾಕಿ ವೇತನವನ್ನು ಸರ್ಕಾರವೇ ಭರಿಸಬೇಕು ಎಂದರು. ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ. ಬಸವರಾಜು, ಮುಖಂಡರಾದ ಲ. ಜಗನ್ನಾಥ್, ಜಯರಾಂ, ಜಗದೀಶ್ ಸೂರ್ಯ, ವಿಜಯಕುಮಾರ್, ರಾಜೇಂದ್ರ ಇದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.