ಹುಣಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಪ್ರಾಂತ ರೈತ ಸಂಘದ ಪ್ರತಿಭಟನೆ
Team Udayavani, Aug 5, 2022, 12:48 PM IST
ಹುಣಸೂರು: ಬಗರ್ ಹುಕ್ಕುಂಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಬೇಕು. ಸಾಗುವಳಿ ಪತ್ರಕ್ಕೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಬೇಕು. ಗೊಬ್ಬರ ಅಭಾವ ನೀಗಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಮುಂದಿಟ್ಟು ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚಿಕ್ಕಣ್ಣೇಗೌಡ ಮಾತನಾಡಿ, ಅಗತ್ಯ ವಸ್ತುಗಳ ಬೆಲೆ ಕೂಡಲೇ ಇಳಿಸಬೇಕು. ಕಳೆದ 50-60 ವರ್ಷಗಳಿಂದ ಗೋಮಾಳ, ಗುಂಡು ತೋಪು, ಅರಣ್ಯ ಭೂಮಿಗಳಲ್ಲಿ ಬಡ ಬಗರ್ ಹುಕುಂ ಸಾಗುವಳಿದಾರರು ಉಳುಮೆ ಮಾಡುತ್ತಾ ತಮ್ಮ ಜೀವನ ನಡೆಸುತ್ತಾ ಬಂದಿದ್ದಾರೆ. ಸರಕಾರಗಳು ಬಡ ಬಗರ್ ಹುಕುಂ ಸಾಗುವಳಿದಾರರನ್ನು ಮರೆತಿವೆ. ಅಲ್ಲದೆ ಸಾಗುವಳಿ ಪತ್ರ ಇಲ್ಲದ ಕಾರಣ ಸರಕಾರಿ ಸವಲತ್ತುಗಳು, ಸಾಲ ಸೌಲಭ್ಯ, ಬರ ಪರಿಹಾರ ಇತ್ಯಾದಿ ಸೌಲಭ್ಯಗಳು ಸಿಗದೇ ರೈತರು ವಂಚಿತರಾಗಿದ್ದಾರೆ.
ಈ ಹಿಂದೆ ಫಾರಂ ನಂಬರ್ 50-52 ರಲ್ಲಿ ಅರ್ಜಿ ಸಲ್ಲಿಸಿದ್ದರೂ, ಆ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಅಲ್ಲದೆ ಕರ್ನಾಟಕ ಪಾಂತ್ರ ರೈತ ಸಂಘದ ಹೋರಾಟದ ಒತ್ತಡಕ್ಕೆ ಮಣಿದು ಫಾರಂ ನಂಬರ್ 57 ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು. ಲೋಕಸಭೆ ಚುನಾವಣೆ ಬಂದಿದ್ದರಿಂದ ಸಾಕಷ್ಟು ರೈತರಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಈಗ ಮತ್ತೋಮ್ಮ ಫಾರಂ ನಂಬರ್ 57ರಲ್ಲಿ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ನೀಡಿದೆ. ಆದರೆ ತಾಲೂಕಿನಲ್ಲಿ ಇನ್ನೂ ಅರ್ಜಿ ಪಡೆಯುತ್ತಿಲ್ಲ.
ಮತ್ತೊಂದೆಡೆ ಅರ್ಜಿ ಸಲ್ಲಿಸಿದ ರೈತರಿಗೆ ಇಲ್ಲಿಯವರಿಗೂ ಸಾಗುವಳಿ ನೀಡಿಲ್ಲ. ಅಲ್ಲದೆ ಒಂದೆಡೆ ರೈತರು ಸಾಗುವಳಿ ಪತ್ರ ನೀಡಬೇಕೆಂದು ಒತ್ತಾಯಿಸುತ್ತಿದ್ದರೆ, ಬಿಜೆಪಿ ಸರ್ಕಾರ ಸಾಗುವಳಿ ಪತ್ರ ನೀಡುವ ಬದಲು ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ರೈತರಿಗೆ ನೀಡಲು ಹೊರಟಿರುವುದು ರೈತರಿಗೆ ಮಾಡಿರುವ ಅನ್ಯಾಯವಾಗಿದೆ. ಆದ್ದರಿಂದ ಕೂಡಲೇ ಫಾರಂ ನಂಬರ್ 57ರಲ್ಲಿ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ನೀಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯಿಸುತ್ತದೆ ಎಂದರು.
ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ ಮಾತನಾಡಿ, ಕೇಂದ್ರವು ಹಾಲು ಮತ್ತು ಹಾಲಿನ ಉತ್ಪನ್ನಗಳು ಹಾಗೂ ಯಂತ್ರೋಪಕರಣಗಳ ಮೇಲೆ ಜಿ.ಎಸ್.ಟಿ. ತೆರಿಗೆಯ ಹೊರೆ ಹಾಕಿದ್ದು, ದೇಶದ 9 ಕೋಟಿ ಹಾಲು ಉತ್ಪಾದಕರ ಕುಟುಂಬಗಳ ಮೇಲೆ ಎರಡು ರೀತಿಯ ತೆರಿಗೆಗಳು ಸೇರಿ ಶೇ.17 ರಿಂದ ಶೇ.30 ತೆರಿಗೆ ಭಾರ ಏರಿದಂತಾಗಿದೆ. ರೈತರ ಆಧಾಯವನ್ನು ದುಪ್ಪಟ್ಟು ಮಾಡುವ ಭರವಸೆ ನೀಡಿದ ಮೋದಿ ಸರ್ಕಾರ ವಂಚಿಸಿದೆ ಎಂದು ಆರೋಪಿಸಿ, ಹಾಲಿನ ಉತ್ಪನ್ನಗಳಿಗೆ ವಿಸಿರು ಜಿಎಸ್‌ಟಿ ವಾಪಾಸು ಪಡೆಯಬೇಕು ಹಾಗೂ ರಸಗೊಬ್ಬರ ಕೊರತೆ ಉಂಟಾಗದಂತೆ ಸಮರ್ಪಕ ಪೂರೈಕೆಗೆ ಕ್ರಮ ವಹಿಸುವಂತೆ ಆಗ್ರಹಿಸಿ, ತಹಸೀಲ್ದಾರ್ ಡಾ. ಅಶೋಕ್‌ರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಅಭಿಮಾನ್ ಚಂದರಾಜ್, ಪುಟ್ಟರಾಜು, ಚಂದ್ರಶೇಖರ್, ಮನಹದೇವು, ಅನುಸೂಯ, ಉಪೇಂದ್ರ ಕುಮಾರ್, ವಜೀರ್ ಸಾಬ್, ಚೇತನ್, ಜವರೇಗೌಡ, ವಿನೋದ್, ಸುರೇಶ್ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.