ಸಕ್ಕರೆ ಕಾರ್ಖಾನೆಗಳ ಆರಂಭಿಸಲು ಮನವಿ


Team Udayavani, Apr 30, 2020, 3:12 PM IST

ಸಕ್ಕರೆ ಕಾರ್ಖಾನೆಗಳ ಆರಂಭಿಸಲು ಮನವಿ

ಚಾಮರಾಜನಗರ: ಕೋವಿಡ್‌ 19 ಸಂದರ್ಭದಲ್ಲಿ ತಲೆ ದೋರಿರುವ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿ ಮಾಜಿ ಸಂಸದ, ಕೆಪಿಸಿಸಿ ವಕ್ತಾರ ಧ್ರುವ ನಾರಾಯಣ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಮಾಜಿ ಸಂಸದರು ಮತ್ತು ಮುಖಂಡರು, ಕೆಪಿಸಿಸಿ ರಚಿಸಲ್ಪಟ್ಟಿರುವ ಮೈಸೂರು ಪ್ರಾದೇಶಿಕ ಕಾರ್ಯಪಡೆಯಿಂದ ಗಮನಿಸಲ್ಪಟ್ಟಿರುವ ನ್ಯೂನತೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಲುಪಿಸುವಂತೆ ಮನವಿ ಸಲ್ಲಿಸಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧ್ರುವನಾರಾಯಣ, ಕುಂತೂರು, ಅಳಗಂಚಿ ಬಣ್ಣಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆಗಳನ್ನು ತಕ್ಷಣದಲ್ಲಿ ಪ್ರಾರಂಭಿಸಿ ಸುಮಾರು 14-15 ತಿಂಗಳಾದರೂ ಕಬ್ಬನ್ನು ಕಟಾವು ಮಾಡದೆ ಸಂಕಷ್ಟದಲ್ಲಿರುವ ಕಬ್ಬು ಬೆಳೆಗಾರರು ಕಬ್ಬನ್ನು ಕಟಾವು ಮಾಡಲು ಅವಕಾಶ ನೀಡಬೇಕು. ಲಾಕ್‌ಡೌನ್‌ನಿಂದ ಮನೆಯಲ್ಲೇ ಇರುವ ಕೂಲಿ ಕಾರ್ಮಿಕರಿಗೆ ನರೇಗಾ
ಯೋಜನೆಯಡಿ ನಿರುದ್ಯೋಗ ಭತ್ಯೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ತೋಟಗಾರಿಕೆ ಬೆಳಗಳಾದ ಹೂ, ಹಣ್ಣು, ತರಕಾರಿ, ಕೃಷಿ ಬೆಳೆಗಳಾದ ಕೋಸು, ಬಾಳೆ, ಕಲ್ಲಂಗಡಿ ಟೊಮೆಟೋ ಇತರೆ ಕಟಾವು ಮಾಡದೆ ನಷ್ಟವಾಗಿದೆ. ಇದರ ಬಗ್ಗೆ ತೋಟಗಾರಿಕೆ ಅಧಿಕಾರಿಗಳಿಂದ ಸರ್ವೆ ಮಾಡಿಸಿ ಮಾರುಕಟ್ಟೆ ದರದಲ್ಲಿ ರಾಷ್ಟ್ರೀಯ ತೋಟ ಗಾರಿಕಾ ಮಿಷನ್‌ಯೋಜನೆಯಡಿಯಲ್ಲಿ ಪರಿಹಾರ ಕೊಡಿಸಬೇಕು. ಸಂಕಷ್ಟದಲ್ಲಿರುವ ರೈತರು, ವೃದ್ದಾಪ್ಯ
ಪಿಂಚಿಣಿದಾರ ರಿಗೆ, ಅಸಂಘಟಿತ ವಲಯದಲ್ಲಿರುವವರಿಗೆ ಮತ್ತು ಜನ್‌ಧನ್‌ ಖಾತೆ ಹೊಂದಿರುವ ಎಲ್ಲಾ ಬಡವರ ಖಾತೆಗೆ 5 ಸಾವಿರ ರೂ. ಹಾಕಬೇಕು. ಸೆಸ್ಕ್ನಿಂದ ಮನೆ ಮನೆಗೆ ತೆರಳಿ ವಿದ್ಯುತ್‌ ಬಿಲ್‌ ವಸೂಲಿಯನ್ನು ತಕ್ಷಣವೇ ನಿಲ್ಲಿಸಬೇಕು. ಶ್ರಮಿಕ ವರ್ಗಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದರು. ಶಾಸಕ ಪುಟ್ಟರಂಗಶೆಟ್ಟಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಪಂ ಪ್ರಭಾರ ಅಧ್ಯಕ್ಷ ಮಹೇಶ್‌, ಮಾಜಿ ಶಾಸಕರಾದ ಕೃಷ್ಣಮೂರ್ತಿ, ಬಾಲ ರಾಜ್‌, ಜಿಪಂ ಸದಸ್ಯ ಕೆ.ಪಿ.ಸದಾಶಿವಮೂರ್ತಿ, ಎಪಿಎಂಸಿ ಮಾಜಿ ಅಧ್ಯಕ್ಷ ರವಿಕುಮಾರ್‌, ವಕೀಲ ಅರುಣ್‌ಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Karnataka: ವಿದ್ಯುತ್‌ ದರದಂತೆ ವರ್ಷವೂ ಬಸ್‌ ಯಾನ ದರ ಹೆಚ್ಚಳ?

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.