Road Mishap: ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು, ಬಾಲಕಿ ಸ್ಥಿತಿ ಗಂಭೀರ
Team Udayavani, Sep 7, 2023, 10:43 AM IST
ಹುಣಸೂರು: ಕಾರು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಬೈಕ್ ನಲ್ಲಿದ್ದ ಬಾಲಕಿ ಗಂಭೀರ ಗಾಯಗೊಂಡಿರುವ ಘಟನೆ ಕೋಟ್ ೯ ಸರ್ಕಲ್ ನಲ್ಲಿ ಬುಧವಾರ ಸಂಭವಿಸಿದೆ.
ಮೃತ ಯುವಕನನ್ನು ನಗರದ ಮಾರಿಗುಡಿ ಬೀದಿಯ ಮಂಜುನಾಥ್ (26) ಎನ್ನಲಾಗಿದ್ದು ಈತ ಎಚ್ ಡಿ ಎಫ್ ಸಿ ಬ್ಯಾಂಕ್ ನ ಉದ್ಯೋಗಿಯಾಗಿದ್ದ ಎನ್ನಲಾಗಿದೆ.
ಏನಿದು ಘಟನೆ: ಮಂಜುನಾಥ್ ತನ್ನ ತಂಗಿ ಮಗಳು ಪೂರ್ವಿಕಾಳೊಂದಿಗೆ ಬುಲೆಟ್ ಬೈಕಿನಲ್ಲಿ ಬೈಪಾಸ್ ರಸ್ತೆ ಕಡೆ ತೆರಳುತ್ತಿದ್ದ ವೇಳೆ ಮೈಸೂರು ಕಡೆಯಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರೊಂದು ಕೋಟ್೯ ಸರ್ಕಲ್ ನಲ್ಲಿ ಡಿಕ್ಕಿ ಹೊಡೆದಿದೆ ಪರಿಣಾಮ ಮಂಜುನಾಥ್ ಹಾಗೂ ಪೂರ್ವಿಕಾ ಗಂಭೀರ ಗಾಯಗೊಂಡಿದ್ದರು, ಕೂಡಲೇ ಇಬ್ಬರನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಬುಧವಾರ ಮಧ್ಯರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ್ ಮೃತಪಟ್ಟಿದ್ದಾರೆ.
ಬಾಲಕಿಯ ಸ್ಥಿತಿ ಚಿಂತಾಜನಕವಾಗಿಯಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Mohan Bhagwat: ಸಮಾಜದಲ್ಲಿ ಅಸಮಾನತೆ ಇರೋವವರೆಗೂ ಮೀಸಲಾತಿ ಮುಂದುವರಿಯಬೇಕು: ಭಾಗವತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.