Hunsur: ನಾಗರಹೊಳೆ ವಲಯದಲ್ಲಿ ಜು.31ರವರೆಗೆ ಸಫಾರಿ ಬಂದ್
Team Udayavani, Jul 29, 2023, 10:14 AM IST
ಹುಣಸೂರು: ನಾಗರಹೊಳೆ ಉದ್ಯಾನವನದಲ್ಲಿ ಸತತ ಮಳೆಯಿಂದಾಗಿ ಜು.31ರವರೆಗೆ ನಾಗರಹೊಳೆ ವನ್ಯಜೀವಿ ವಲಯಕ್ಕೆ ಸಫಾರಿ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಹರ್ಷ ಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.
ಉದ್ಯಾನವನದ ಎಲ್ಲ ವಲಯಗಳಲ್ಲೂ ಉತ್ತಮ ಮಳೆಯಾಗಿದ್ದು, ಬಿರುಗಾಳಿ ಸಹಿತ ಮಳೆಗೆ ನಾಗರಹೊಳೆ ಸಫಾರಿ ಲೈನ್‌ಗಳಲ್ಲಿ ಮರಗಳು ಬಿದ್ದಿರುವುದರಿಂದ ಜೊತೆಗೆ ಮಳೆಯಿಂದಾಗಿ ಸಫಾರಿ ರಸ್ತೆಗಳಲ್ಲಿ ವಾಹನ ಸಂಚಾರ ಮಾಡಲು ಸಾಧ್ಯವಿಲ್ಲ.
ವನ್ಯಧಾಮ ವೀಕ್ಷಣೆಗೆ ಬರುವ ವನ್ಯಪ್ರಿಯರ ಸುರಕ್ಷತೆಯ ಹಿತದೃಷ್ಟಿಯಿಂದ ನಾಗರಹೊಳೆ ವನ್ಯಜೀವಿ ವಲಯದ ನಾಣಚ್ಚಿ ಗೇಟ್ ಹಾಗೂ ವೀರನಹೊಸಹಳ್ಳಿ ಗೇಟ್‌ನಿಂದ ಆರಂಭಗೊಳ್ಳುತ್ತಿದ್ದ ಸಫಾರಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.
ದಮ್ಮನಕಟ್ಟೆಯಲ್ಲಿ ಸಫಾರಿ ಇದೆ:
ಆದರೆ ನಾಗರಹೊಳೆ ಉದ್ಯಾನ ವ್ಯಾಪ್ತಿಯ ದಮ್ಮನಕಟ್ಟೆ(ಕಾಕನಕೋಟೆ) ಸಫಾರಿ ಕೇಂದ್ರವು ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.