ದ್ವಿತೀಯ ಸಂಪರ್ಕಿತರ ಪರೀಕ್ಷೆ ಕಡ್ಡಾಯ

ಜ್ಯುಬಿಲಿಯಂಟ್‌ನ 1,350 ಮಂದಿಗೆ ಪರೀಕ್ಷೆ , ಮೈಸೂರು, ನಂಜನಗೂಡಲ್ಲಿ ಫಿವರ್‌ ಕ್ಲಿನಿಕ್‌

Team Udayavani, Apr 17, 2020, 4:43 PM IST

ದ್ವಿತೀಯ ಸಂಪರ್ಕಿತರ ಪರೀಕ್ಷೆ ಕಡ್ಡಾಯ

ಮೈಸೂರು: ಜಿಲ್ಲೆಯಲ್ಲಿ ಕಂಡುಬರುವ ಎಲ್ಲಾ ಸೀವಿಯರ್‌ ಅಕ್ಯೂಟ್‌ ರೆಸ್ಪರೇಟ್ರಿ ಇಲ್ನಸ್‌ ಪ್ರಕರಣಗಳನ್ನು ಕಡ್ಡಾಯವಾಗಿ ಕೋವಿಡ್‌ ಕೇಂದ್ರದ ಗಮನಕ್ಕೆ ತರಬೇಕು ಎಂದು ಡೀಸಿ ಅಭಿರಾಮ್‌ ಜಿ. ಶಂಕರ್‌ ತಿಳಿಸಿದರು. ಗುರುವಾರ ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಬುಧವಾರ ನಜರ ಬಾದ್‌ನಲ್ಲಿ ವೃದ್ಧರೊಬ್ಬರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಇವರದ್ದು ಸರಿ ಪ್ರಕರಣ ಎಂದು ಗುರುತಿಸಲಾಗಿದ್ದು, ಈ ಪ್ರಕರಣದಲ್ಲಿ ಕೋವಿಡ್-19 ದೃಢಪಟ್ಟಿರುವುದು ಇದೇ ಮೊದಲು. ಈ ಹಿಂದೆಯೂ ಕೂಡ ಸರಿ ಪ್ರಕರಣಗಳ ಮಾದರಿ ಪರೀಕ್ಷೆ ಮಾಡಲಾಗುತ್ತಿತ್ತು. ಮುಂದೆಯೂ ಕಡ್ಡಾಯವಾಗಿ ಈ ಕುರಿತು ವರದಿಯನ್ನು ಕೋವಿಡ್‌ ಗಮನಕ್ಕೆ ತರಬೇಕು ಎಂದು ಸೂಚಿಸಿದರು. ಜ್ಯುಬಿಲಿಯಂಟ್‌ ಕಾರ್ಖಾನೆ ಸೋಂಕಿತ ನೌಕರರ ಪ್ರಾಥಮಿಕ ಸಂಪರ್ಕದಲ್ಲಿದ್ದ 1,350 ಮಂದಿಯ ಪರೀಕ್ಷೆ ನಡೆದಿದೆ. ಇನ್ನು ದ್ವಿತೀಯ ಸಂಪರ್ಕಿತರ ಮಾದರಿ ತೆಗೆಯಲಾಗುತ್ತಿದೆ. ಬಲ್ಕ್ ಅಲ್ಲಿ ಪರೀಕ್ಷೆ ನಡೆಸಿ ನಿಮ್ಹಾನ್ಸ್‌ ಗೆ ಕಳುಹಿಸುತ್ತಿದ್ದೇವೆ ಎಂದರು.

ಫಿವರ್‌ ಕ್ಲಿನಿಕ್‌ ತೆರೆಯಲಾಗುತ್ತಿದೆ: ಈಗಾಗಲೇ ಮೈಸೂರು ನಗರದ ಮತ್ತು ನಂಜನಗೂಡಿನಲ್ಲಿ ಈ ಕ್ಲಿನಿಕ್‌ ಕಾರ್ಯಾರಂಭ ಮಾಡಿದೆ. ಇದು ಕೋವಿಡ್‌ ಕ್ಲಿನಿಕ್‌ ಅಲ್ಲ. ಬದಲಿಗೆ ಇದೊಂದು ಸ್ಕ್ರೀನಿಂಗ್‌ ಅಷ್ಟೆ. ಕೆಮ್ಮು, ಜ್ವರ ಕಾಣಿಸಿಕೊಂಡರೆ ಬಂದು ಪರೀಕ್ಷೆಗೆ ಒಳಪಡಬಹುದು. ಕೋವಿಡ್-19 ಹೊರತಾಗಿ ಇತರೆ ಕಾರಣದಿಂದ ಬಂದಿದ್ದರೆ ಚಿಕಿತ್ಸೆ ನೀಡಿ ಕಳುಹಿಸುತ್ತಾರೆ. ಉಸಿರಾಟದ ತೊಂದರೆ, ಜ್ವರ ಮತ್ತು ಒಣಕೆಮ್ಮು ಇದ್ದರೆ ಮಾತ್ರ ಕೋವಿಡ್‌ ಆಸ್ಪತ್ರೆಗೆ ಕಳುಹಿಸಲಾಗುತ್ತದೆ ಎಂದರು. ಇತರೆ ಕಾಯಿಲೆಗೆ ಫಿವರ್‌ ಕ್ಲಿನಿಕ್‌ನಲ್ಲಿ ಪರೀಕ್ಷೆ ಮಾಡುವುದಿಲ್ಲ. ಅವರನ್ನು ಬೇರೆಡೆಗೆ ಕಳುಹಿಸಲು ಸೂಚಿಸಲಾಗಿದೆ. ನಂಜನಗೂಡಿನಲ್ಲಿ ಒಂದು ಪಿಎಚ್‌ಸಿ ಮಾತ್ರ ಪ್ರಾರಂಭಿಸಲಾಗಿದೆ. ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ ಯಾವ ಪ್ರದೇಶದಲ್ಲಿ ಸೋಂಕಿತರು ಇದ್ದಾರೆ ಎಂಬ ಮ್ಯಾಪ್‌ ಸಿದ್ಧಪಡಿಸಿದ್ದೇವೆ ಎಂದರು.

ಆಯಾ ರಸ್ತೆ ಲಾಕ್‌ ಡೌನ್‌: ಕೋವಿಡ್-19 ಸೋಂಕಿತರಿರುವ ರಸ್ತೆಯ 3 ಕಿ.ಮೀ. ಪ್ರದೇಶ ವನ್ನು ಕಂಟೈನ್ಮೆಂಟ್‌ ಜೋನ್‌ ಆಗಿ ಪರಿಗಣಿಸುತ್ತೇವೆ. ಮುಖ್ಯವಾಗಿ ಅಂತಹ ರಸ್ತೆಯನ್ನು ಬ್ಯಾರಿಕೇಡ್‌ ಹಾಕಿ ಮುಚ್ಚುತ್ತೇವೆ. ಆ ಪ್ರದೇಶದಲ್ಲಿ ಪೊಲೀಸ್‌ ಬಂದೋಬಸ್ತ್ ಹೆಚ್ಚಿಸಲಾಗುವುದು. ನಂಜನ ಗೂಡು, ಹೆಬ್ಯಾ, ಸೋಮೇಶ್ವರಪುರ ಕಂಟೈನ್ಮೆಂಟ್‌ ಜೋನ್‌ ಆಗಿ ಪರಿವರ್ತಿತವಾಗಿದೆ ಎಂದರು. ಕೇಂದ್ರದ ಸೂಚನೆಯಂತೆ ಮೇ 3ರವರೆಗೆ ಎಲ್ಲವೂ ಬಂದ್‌ ಆಗಿರುತ್ತದೆ. ಶವ ಸಂಸ್ಕಾರಕ್ಕೆ 20ಕ್ಕಿಂತ ಹೆಚ್ಚು ಜನ ತೆರಳದಂತೆ ಸೂಚಿಸಲಾಗಿದೆ.

ನಿರ್ಗತಿಕರಿಗೆ, ನಿರಾಶ್ರಿತರಿಗೆ ನೆರವು ನೀಡಿ
ಮೈಸೂರಿನವರು ನಿರ್ಗತಿಕರಿಗೆ, ನಿರಾಶ್ರಿತರಿಗೆ ನೆರವು ನೀಡಬೇಕು. ನಗರಪಾಲಿಕೆಯು ದಾನಿಗಳ ನೆರವಿನಿಂದ ನಿತ್ಯ 10 ಸಾವಿರ ಮಂದಿಗೆ ಊಟ ಪೂರೈಸುತ್ತಿದ್ದೇವೆ ಎಂದು ನಗರ ಪಾಲಿಕೆ ಆಯುಕ್ತ ಗುರುದತ ಹೆಗಡೆ ತಿಳಿಸಿದರು. ನಗರದ 17ರಿಂದ 18 ಕೇಂದ್ರಗಳಲ್ಲಿ ನಿರಾಶ್ರಿತರು, ಬಡವರು ಹಾಗೂ ಅಸಹಾಯಕರಿಗೆ ಊಟದ ಸೌಲಭ್ಯ ಕಲ್ಪಿಸಲಾಗಿದೆ. ಸುಮಾರು 3500 ಮಂದಿಗೆ ಪಡಿತರ ಕಾರ್ಡ್‌ ಇಲ್ಲ. ಅಂದರೆ ಅಸಂಘಟಿತ ಕಾರ್ಮಿಕರು ಮತ್ತು ವಲಸೆ
ಕಾರ್ಮಿಕರಿದ್ದಾರೆ. ಅವರಿಗೆ ಸೌಲಭ್ಯ ನೀಡುತ್ತಿದ್ದೇವೆ. ಇನ್ನೂ ಲಾಕ್‌ಡೌನ್‌ ಇರುವುದರಿಂದ ಈಗ ದಾನಿಗಳ ಅಗತ್ಯ ಹೆಚ್ಚಿದೆ. ನೀವು ನೀಡುವ ಸಹಾಯ 1 ಕೆಜಿ ಅಕ್ಕಿ ಇರಬಹುದು ಅಥವಾ 1 ಸಾವಿರ ಕೆಜಿ ಇರಬಹುದು. ನಾವು ಅದನ್ನು ಗೌರವಿಸುತ್ತೇವೆ ಎಂದರು. ನಗರ ಪಾಲಿಕೆಯಿಂದ ಯೋಗ್ಯರು ಮತ್ತು ಕಷ್ಟದಲ್ಲಿರುವವರಿಗೆ ಸೌಲಭ್ಯ ಮುಟ್ಟಿಸಲು ಸಹಾಯ ಮಾಡಿ. ಅಂತಹ ವ್ಯಕ್ತಿಗಳು ಕೂಡಲೇ ಮೊ. 94486 66380 ಸಂಪರ್ಕಿಸಿ. ಯಾರಿಗೆ ಪಡಿತರ ಲಭಿಸಿಲ್ಲವೋ, ಊಟಕ್ಕೆ ತೊಂದರೆ ಆಗಿದೆಯೋ ಅಂತವರಿಗೆ ಆಸರೆ ಸಹಾಯವಾಣಿ ತೆರೆಯಲಾಗಿದ್ದು, ಅವರು ದೂ. 0821- 2440890ಗೆ ಕರೆ ಮಾಡಬಹುದು ಎಂದರು.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.