ಚಾಮುಂಡೇಶ್ವರಿಗೆ ಆಷಾಢ ವಿಶೇಷ ಪೂಜೆ
Team Udayavani, Jun 27, 2020, 4:51 AM IST
ಮೈಸೂರು: ಮೊದಲ ಆಷಾಢ ಶುಕ್ರವಾರದ ಅಂಗವಾಗಿ ನಗರದ ಚಾಮುಂಡಿ ಬೆಟ್ಟದಲ್ಲಿ ದೇವಿಗೆ ವಿಶೇಷ ಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಗಳು ನೆರವೇರಿತು. ಕೋವಿಡ್ 19 ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರದಂದು ಭಕ್ತರಿಲ್ಲದೆ ಚಾಮುಂಡೇಶ್ವರಿ ದೇವಿಗೆ ಎಂದಿನಂತೆ ಪೂಜೆ ಪುನಸ್ಕಾರಗಳು ನಡೆದವು.
ಆಷಾಢ ಬಂತೆಂದರೆ ಚಾಮುಂಡಿಬೆಟ್ಟದಲ್ಲಿ ಸಂಭ್ರಮ ಮನೆ ಮಾಡುತ್ತಿತ್ತು. ಪ್ರತಿ ಆಷಾಢ ಶುಕ್ರವಾರಗಳಂದು ಲಕ್ಷಾಂತರ ಜನ ಚಾಮುಂಡಿಬೆಟ್ಟಕ್ಕೆ ಆಗಮಿಸಿ ದೇವಿ ದರ್ಶನ ಪಡೆಯುತ್ತಿದ್ದರು. ಆದರೆ ಕೋವಿಡ್ 19ದಿಂದಾಗಿ ಈ ಬಾರಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶ ನಿಷೇಧಿಸಿರುವ ಹಿನ್ನೆಲೆ ಯಾವುದೇ ಸಂಭ್ರಮವಿರಲಿಲ್ಲ.
ಕೋವಿಡ್ 19 ಸೋಂಕು ಹೆಚ್ಚಳದಿಂದ ಈಗಾಗಲೇ ಎಲ್ಲಾ ಆಷಾಢ ಶುಕ್ರವಾರ ಮತ್ತು ವರ್ಧಂತಿಯಂದು ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಿದ್ದು, ದೇವಿಗೆ ನಾಗಲಕ್ಷ್ಮೀ ಅಲಂಕಾರ ಮಾಡಿ ಬೆಳಗ್ಗೆ 4.30ಕ್ಕೆ ಚಾಮುಂಡಿಬೆಟ್ಟದ ದೇವಾಲಯದಲ್ಲಿ ಪ್ರಧಾನ ಆಗಮಿಕ ಡಾ.ಎನ್.ಶಶಿಶೇಖರ್ ದೀಕ್ಷಿತ್, ಅರ್ಚಕ ದೇವಿಪ್ರಸಾದ್ ನೇತೃತ್ವದಲ್ಲಿ ಚಾಮುಂಡೇಶ್ವರಿಗೆ ಮಹಾನ್ಯಾಸ ಪೂರ್ವಕ ಅಭಿಷೇಕ, ರುದ್ರಾಭಿಷೇಕ, ಅರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯ ನಡೆಸಲಾಯಿತು.
ಬೆಳಗ್ಗೆ 7.20ಕ್ಕೆ ದೇವಾಲಯದ ಆವರಣದಲ್ಲಿಯೇ ಚಾಮುಂಡಿ ತಾಯಿ ಉತ್ಸವ ಮೂರ್ತಿ ಮೆರವಣಿಗೆ ನಡೆಸಲಾಯಿತು. ಬಳಿಕ 8ಕ್ಕೆ ದೇಗುಲದ ಬಾಗಿಲು ಮುಚ್ಚಲಾಯಿತು. ಈ ಸಂದರ್ಭ ಡಿಸಿಪಿ ಪ್ರಕಾಶ್‌ಗೌಡ ದೇವಾಲಯದ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.