ಸಂಡೇ ಲಾಕ್‌ಡೌನ್‌: ಸಾಂಸ್ಕೃತಿಕ ನಗರಿ ಮೈಸೂರು ಸ್ತಬ್ಧ!


Team Udayavani, Jul 6, 2020, 5:41 AM IST

stabhda

ಮೈಸೂರು: ಕೋವಿಡ್‌ 19 ಸೋಂಕು ಹರಡುವಿಕೆ ನಿಯಂತ್ರಿಸಲು ರಾಜ್ಯ ಸರ್ಕಾರ ಘೋಷಿಸಿರುವ ಸಂಪೂರ್ಣ ಲಾಕ್‌ಡೌನ್‌ನಿಂದಾಗಿ ಸಾಂಸ್ಕೃತಿಕ ನಗರಿ ಮೈಸೂರು ಭಾನುವಾರ ಸ್ತಬ್ಧಗೊಂಡಿತ್ತು. ನಗರದಲ್ಲಿ ಭಾನುವಾರ ಅಗತ್ಯ  ಸೇವೆಗಳು ಹೊರತುಪಡಿಸಿ ಬಹುತೇಕ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡಿತ್ತು. ಆರ್ಥಿಕ ಸಂಕಷ್ಟದ ನಡುವೆಯೂ ವ್ಯಾಪಾಸ್ಥರು ಆರ್ಥಿಕ ಚಟುವಟಿಕೆ ಸ್ಥಗಿತಗೊಳಿಸಿ ಸರ್ಕಾರದ ಆದೇಶ ಪಾಲಿಸಿದರು. ಶನಿವಾರ ಸಂಜೆ 6 ಗಂಟೆಯಿಂದಲೇ  ಸ್ವಯಂ ನಿರ್ಬಂಧ ವಿಧಿಸಿಕೊಂಡ ಕಾರಣ, ನಗರಾದ್ಯಂತ ಸಂಚಾರ ಪೂರ್ಣ ಬಂದ್‌ ಆಗಿತ್ತು.

ಅಗತ್ಯ ಸೇವೆ: ಭಾನುವಾರ ರಜೆ ಹಿನ್ನೆಲೆಯಲ್ಲಿ ಮಾಂಸದಂಗಡಿಗಳಿಗೆ ವಿನಾಯಿತಿ ನೀಡಲಾಗಿತ್ತು. ದೇವರಾಜ ಮಾರುಕಟ್ಟೆ ಬಳಿಯ ಮಟನ್‌ ಮಾರುಕಟ್ಟೆ ಹೊರತುಪಡಿಸಿ, ಬೇರೆ ಕಡೆ ಮಾಂಸದಂಗಡಿ ಎದುರು ಸರದಿಯಲ್ಲಿ ನಿಂತಿದ್ದರು.  ಉಳಿದಂತೆ ಆಸ್ಪತ್ರೆ, ಔಷಧ, ಹಾಲು, ತರಕಾರಿ, ಹಣ್ಣು, ಪೆಟ್ರೋಲ್‌ ಬಂಕ್‌ಗಳು ತೆರೆದು ಸಾರ್ವಜನಿಕರಿಗೆ ಸೇವೆ ಕಲ್ಪಿಸಿ ಕೊಟ್ಟವು. ಆದರೂ, ಗ್ರಾಹಕರ ಪ್ರತಿಕ್ರಿಯೆ ನೀರಸವಾಗಿತ್ತು. ಸಾರ್ವಜನಿಕರ ಸಂಚಾರ, ವಾಣಿಜ್ಯ ಮಳಿಗೆಗಳು, ಬಾರ್‌,  ಸಲೂನ್‌, ಉದ್ಯಾನ, ಆಟೋ, ಟ್ಯಾಕ್ಸಿ, ಕ್ಯಾಬ್‌ ಸೇವೆ ಬಂದ್‌ ಆಗಿದ್ದವು. ಎರಡೂವರೆ ತಿಂಗಳ ಲಾಕ್‌ಡೌನ್‌ ನಂತರ ಇತ್ತೀಚೆಗಷ್ಟೇ ನಗರದಲ್ಲಿ ವ್ಯಾಪಾರ ವಹಿವಾಟಿಗೆ ವಿನಾಯಿತಿ ನೀಡಲಾಗಿತ್ತು.

ಭಣಗುಟ್ಟಿದ ರಸ್ತೆಗಳು: ಪ್ರತಿದಿನ ಸಾವಿರಾರು ವಾಹನಗಳಿಂದ ಗಿಜಿಗುಡುತ್ತಿದ್ದ ನಗರದ ದೇವರಾಜ ಅರಸು ರಸ್ತೆ, ಸಯ್ನಾಜಿರಾವ್‌ ರಸ್ತೆ, ನ್ಯೂ ಕಾಂತರಾಜ ಅರಸು ರಸ್ತೆ, ಅರಮನೆ ಸುತ್ತ-ಮುತ್ತ, ಅಶೋಕ ರಸ್ತೆ, ಬೆಂಗಳೂರು ರಸ್ತೆ, ಊಟಿ  ರಸ್ತೆ, ಕೆ.ಡಿ.ರೋಡ್‌, ಹುಣಸೂರು ರಸ್ತೆ, ಬನ್ನೂರು ರಸ್ತೆ, ರಿಂಗ್‌ ರಸ್ತೆ, ಕೆ.ಟಿ.ಸ್ಟ್ರೀಟ್‌, ಎನ್‌.ಆರ್‌.ಮೊಹಲ್ಲಾ, ಅಗ್ರಹಾರ, ದೇವರಾಜ ಮೊಹಲ್ಲಾ, ಸರಸ್ವತಿಪುರಂ ರಸ್ತೆಗಳು ಖಾಲಿಯಾಗಿದ್ದವು.

ರಸ್ತೆಗಿಳಿಯದ ಬಸ್‌ಗಳು: ಕೆಎಸ್‌ಆರ್‌ಟಿಸಿ, ಖಾಸಗಿ ಬಸ್‌, ಲಾರಿಗಳು ರಸ್ತೆಗಿಳಿಯದ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ನಗರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ  ಹೆದ್ದಾರಿಗಳು ಜೀರೋ ಟ್ರಾಫಿಕ್‌ ಇದ್ದಂತೆ ಇತ್ತು. ಗೂಡ್ಸ್‌ ಗಾಡಿಗಳು ಮಾತ್ರ ಓಡಾಡುತ್ತಿದ್ದವು. ಗ್ರಾಮೀಣ ಪ್ರದೇಶ ಹಾಗೂ ತಾಲೂಕು ಕೇಂದ್ರಗಳಿಂದ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಂತೂ ಬಿಕೋ ಎನ್ನುತ್ತಿದ್ದವು. ನಗರ ರೈಲ್ವೆ ನಿಲ್ದಾಣ  ಹಾಗೂ ಬಸ್‌ ನಿಲ್ದಾಣಗಳು ಸಂಪೂರ್ಣ ಸ್ತಬ್ಧಗೊಂಡಿದ್ದವು. ಕೆಎಸ್‌ಆರ್‌ಟಿಸಿ ಬಸ್‌ಗಳೂ ರಸ್ತೆಗಿಳಿಯಲಿಲ್ಲ. ಇದರಿಂದ ಗ್ರಾಮಾಂತರ, ನಗರ ಬಸ್‌ ನಿಲ್ದಾಣಗಳು ಬಿಕೋ ಎನ್ನುತ್ತಿದ್ದವು.

ಟಾಪ್ ನ್ಯೂಸ್

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

7-uv-fusion

UV Fusion: ಮಾತಲ್ಲಿರಲಿ ಗಮ್ಮತ್ತು; ಅಳತೆ ಮೀರಿದರೆ ಆಪತ್ತು…

2

Uppinangady: ಮಕ್ಕಳಿಗೆ ಚರಂಡಿ ಕೊಳಚೆಯಿಂದ ಮುಕ್ತಿ ಎಂದು?

1(1)

Puttur: ಸಜ್ಜಾಗುತ್ತಿದೆ ಆನೆಮಜಲು ಕೋರ್ಟ್‌ ಸಂಕೀರ್ಣ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

6-uv-fusion

Development: ಭಾರತದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪ್ರಾಮುಖ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.