ಅರಮನೆ ಆವರಣದಲ್ಲಿ ಅಂತಿಮ ತಾಲೀಮು
ಎಲ್ಲಾ ರೀತಿಯ ಸಿದ್ಧತೆ ಪೂರ್ಣಗೊಂಡಿದೆ. ನಾಲ್ಕು ಕಡೆ ಪ್ರವೇಶ ಕಲ್ಪಿಸಲಾಗಿದೆ.
Team Udayavani, Jun 20, 2022, 5:33 PM IST
ಮೈಸೂರು: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಕಳೆದೊಂದು ತಿಂಗಳಿನಿಂದ ಪ್ರತಿ ಭಾನುವಾರ ಬೆಳಗ್ಗೆ ನಡೆಯುತ್ತಿದ್ದು, ಅಂತಿಮ ಹಂತದ ಯೋಗ ತಾಲೀಮು ಭಾನುವಾರ ಅರಮನೆ ಆವರಣದಲ್ಲಿ ಸಾಂಘವಾಗಿ ನೆರವೇರಿತು.
ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ನಿರ್ದೇಶಕ ಈಶ್ವರ ಬಸವರಡ್ಡಿ ಅವರ ನೇತೃತ್ವದಲ್ಲಿ 12 ಸಾವಿರ ಮಂದಿ ಯೋಗಾಸಕ್ತರು 45 ನಿಮಿಷಗಳ ಕಾಲ ವಿವಿಧ ಆಸನಗಳನ್ನು ಪ್ರದರ್ಶಿಸಿದರು. ಈ ಸಂದರ್ಭ ಹಿಂದಿ ಮತ್ತು ಕನ್ನಡ ಭಾಷೆಯಲ್ಲಿ ಸಲಹೆ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಅಂತಿಮ ಹಂತದ ತಾಲೀಮ ಅನ್ನು ವೀಕ್ಷಿಸಿದರು.
ಯೋಗ ಕಾರ್ಯಕ್ರಮದ ಅಂಗವಾಗಿ ವೇದಿಕೆ ಸಿದ್ಧತೆ, ಯೋಗಪಟುಗಳಿಗೆ ಸ್ಥಳಾವಕಾಶ, ಕುಡಿಯುವ ನೀರಿನ ವ್ಯವಸ್ಥೆ, ಎಲ್ಲೆಲ್ಲಿ ಪ್ರವೇಶ ಕಲ್ಪಿಸಲಾಗಿದೆ ಎಂಬುದನ್ನು ಪರಿಶೀಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂ.5 ಮತ್ತು 11ರಂದು ಯೋಗ ತಾಲೀಮು ನಡೆಸಲಾಗಿದೆ. 19ರಂದು ಅಂತಿಮ ಹಂತದ ತಾಲೀಮು ನಡೆಸಲಾಗಿದೆ ಎಂದು ಹೇಳಿದರು. 51 ವಿವಿಧ ವರ್ಗದ ಜನತೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಯೋಗ ಮಾಡಲಿದ್ದಾರೆ.
ಪ್ರಧಾನಿ ಪಾಲ್ಗೊಳ್ಳುವ ಕಾರ್ಯಕ್ರಮಕ್ಕೆ
ಎಲ್ಲಾ ರೀತಿಯ ಸಿದ್ಧತೆ ಪೂರ್ಣಗೊಂಡಿದೆ. ನಾಲ್ಕು ಕಡೆ ಪ್ರವೇಶ ಕಲ್ಪಿಸಲಾಗಿದೆ. ಬೆಳಗ್ಗೆ 5.30ಕ್ಕೆ ಪ್ರವೇಶದ್ವಾರ ಬಂದ್ ಆಗಲಿದೆ. ಯೋಗ ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡುತ್ತಿದ್ದೇನೆ ಎಂದರು.
ಜತೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅರಮನೆ ಆವರಣಕ್ಕೆ ಭೇಟಿ ನೀಡಿ ಭದ್ರತಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿವೀಕ್ಷಣೆ ನಡೆಸಿದರು. ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ, ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ಇದ್ದರು.
ಯೋಗ ದಿನಾಚರಣೆ: ರಾಜವಂಶಸರಿಗೆ ಅಧಿಕೃತ ಆಹಾನ
ಮೈಸೂರು: ವಿಶ್ವ ಯೋಗ ದಿನದಲ್ಲಿ ಪಾಲ್ಗೊಳ್ಳುವಂತೆ ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್, ಯದುವೀರ್ ಕೃಷ್ಣರಾಜ ಒಡೆಯರ್ ಅವರಿಗೆ ಆಹ್ವಾನ ನೀಡಲಾಯಿತು. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಭಾನುವಾರ ಅಂಬಾ ವಿಲಾಸ ಅರಮನೆಗೆ ಭೇಟಿ ನೀಡಿ ಫಲತಾಂಬೂಲ, ಆಹ್ವಾನ ಪತ್ರಿಕೆ ನೀಡಿ ಅರಮನೆ ಅವರಣದಲ್ಲಿ ನಡೆಯಲಿರುವ ವಿಶ್ವ ಯೋಗ ದಿನದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ್ದಾರೆ.
ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ. ರಾಮದಾಸ್, ಎಲ್.ನಾಗೇಂದ್ರ, ಮೇಯರ್ ಸುನಂದಾ ಫಾಲನೇತ್ರ, ಮುಡಾ ಅಧ್ಯಕ್ಷ ಎಚ್.ವಿ. ರಾಜೀವ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ್ ರೆಡ್ಡಿ ಉಪಸ್ಥಿತರಿದ್ದರು. ಪ್ರಧಾನಿ ಭಾಗವಹಿಸುವ ಮುಖ್ಯ ವೇದಿಕೆ ಕಾರ್ಯಕ್ರಮದಲ್ಲಿ ರಾಜವಂಶಸ್ಥರಿಗೆ ಅವಕಾಶ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಕೇಳಿಬಂದಿತ್ತು. ವೇದಿಕೆಯಲ್ಲಿ ಅವಕಾಶ ಇಲ್ಲ ಎಂಬ ಸಂಸದ ಪ್ರತಾಪ ಸಿಂಹ ಹೇಳಿಕೆಗೂ ವಿರೋಧ ವ್ಯಕ್ತವಾಗಿತ್ತು. ಈಗ ರಾಜವಂಶಸ್ಥರು ಪ್ರಧಾನಿಯೊಂದಿಗೆ ಯೋಗ ಮಾಡಲು ಅಧಿಕೃತ ಆಹ್ವಾನ ನೀಡಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.