ಜ್ಯುಬಿಲಿಯಂಟ್‌ ತನಿಖೆ ಪಾರದರ್ಶಕವಾಗಿಲ್ಲ: ಶಾಸಕ

Team Udayavani, May 27, 2020, 6:32 AM IST

jubliyant

ಮೈಸೂರು: ಜ್ಯುಬಿಲಿಯಂಟ್‌ ಔಷಧ ಕಂಪನಿ ಮೈಸೂರಿನಲ್ಲಿ ಕೊರೊನಾ ಹರಡಲು ಕಾರಣವಾಗಿದ್ದರೂ, ಕಾರ್ಖಾನೆ ಪುನಾರಂಭಕ್ಕೆ ಸರ್ಕಾರ ಅನುಮತಿ ನೀಡಿರುವುದು ಹಲವು ಅನುಮಾನಗಳಿಗೆ ಕಾರಣ ವಾಗಿದೆ ಎಂದು ವಿಧಾನ   ಪರಿಷತ್‌ ಸದಸ್ಯ ಆರ್‌. ಧರ್ಮಸೇನಾ ಅನುಮಾನ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕಂಪನಿ ಇದ್ದಕ್ಕಿದ್ದಂತೆ ಹಳ್ಳಿಗಳನ್ನು ದತ್ತು ಪಡೆಯಲು, ಕಿಟ್‌ ವಿತರಿಸಲು ಕಾರಣವೇನು ಎಂದು ಪ್ರಶ್ನಿಸಿ, ಇದರ ಹಿಂದೆ  ಸರ್ಕಾರ ಮುಚ್ಚಿಡುತ್ತಿರುವ ಯಾವುದೋ ರಹಸ್ಯ ಇದೆ. ಕಂಪನಿಗೆ ಕೊರೊನಾ ತಗುಲಿದ್ದು ಹೇಗೆ ಎಂಬುದರ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಅಷ್ಟರಲ್ಲೇ ಮತ್ತೆ ಕಂಪನಿ ಪುನಾರಾ ರಂಭ ಮಾಡಲಾಗಿದೆ.

ಕಂಪನಿ ಹಳ್ಳಿ ದತ್ತು ತೆಗೆದುಕೊಳ್ಳುವ ಬಗ್ಗೆ, ಕಿಟ್‌ ವಿತರಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಇದಕ್ಕೆ ಕಾರಣವೇನು ಎಂಬುದು ಯಾರಿಗೂ ಗೊತ್ತಿಲ್ಲ ಎಂದು ಹೇಳಿದರು. ಬಿಜೆಪಿ ನಾಯಕರಲ್ಲೇ ಗೊಂದಲ ಇದೆ. ಒಬ್ಬೊಬ್ಬರು ಒಂದೊಂದು ಹೇಳಿಕೆ  ನೀಡುತ್ತಿದ್ದಾರೆ. ಆರಂಭದಲ್ಲಿ ಶಾಸಕ ಹರ್ಷವರ್ಧನ್‌ ಈ ಬಗ್ಗೆ ಧ್ವನಿ ಎತ್ತಿದರು. ನಂತರ ಅವರೂ ಸುಮ್ಮನಾಗಿದ್ದಾರೆ.

ಅಲ್ಲದೆ ಅಂತಹ ತುರ್ತು ಪರಿಸ್ಥಿತಿಯಲ್ಲಿ ಸೋಮಣ್ಣನವರನ್ನು ವರ್ಗಾವಣೆ ಮಾಡಿದರು. ಇದಕ್ಕೆ ಕಾರಣವೇನು ಎಂಬುದು ಗೊತ್ತಿಲ್ಲ. ಸರ್ಕಾರ ತನಿಖೆ  ಯನ್ನು ಪಾರದರ್ಶಕವಾಗಿ ನಡೆಸುತ್ತಿಲ್ಲ  ಎಂದು ಆರೋಪಿಸಿದರು. ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಾ.ಬಿ.ಜೆ.ವಿಜಯ ಕುಮಾರ್‌ ಮಾತನಾಡಿ, ಅಧಿವೇಶನದಲ್ಲಿ ಜ್ಯುಬಿಲಿ ಯಂಟ್‌ ಬಗ್ಗೆ ಮಾತನಾಡಬೇಕು ಎಂದು ಕಾಂಗ್ರೆಸ್‌ ನಾಯಕರಿಗೆ  ಮನವಿ ಮಾಡಿದ್ದೇವೆ.

ಕಂಪನಿ ವಿರುದ ಸರ್ಕಾರ ಏಕೆ ಕ್ರಮ ಕೈಗೊಂಡಿಲ್ಲ ಎಂಬುದನ್ನು ತಿಳಿಯಬೇಕು. ಚೀನಾ ಹಾಗೂ ಇತರೆ ದೇಶಗಳ ಜೊತೆ ಕಂಪನಿಗೆ ನಂಟಿದೆ. ಎಲ್ಲವನ್ನೂ ಬಯಲಿಗೆಳೆಯಬೇಕು ಎಂದು  ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಹೆಡತಲೆ ಮಂಜುನಾಥ್‌, ಕಾಂಗ್ರೆಸ್‌ ನಗರಾಧ್ಯಕ್ಷ ಆರ್‌.ಮೂರ್ತಿ ಹಾಜರಿದ್ದರು.

ಟಾಪ್ ನ್ಯೂಸ್

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

2-hunsur

Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.