Hunsur: ಟ್ಯ್ರಾಕ್ಟರ್ ಕಳ್ಳತನ ; ಓರ್ವ ಬಂಧನ
Team Udayavani, Sep 23, 2023, 8:25 AM IST
ಹುಣಸೂರು: ಟ್ಯ್ರಾಕ್ಟರ್ ಕಳ್ಳತನ ಮಾಡಿದ್ದ ಓರ್ವನ್ನು ಟ್ರೇಲರ್ ಸಹಿತ ಟ್ಯ್ರಾಕ್ಟರ್ ವಶಪಡಿಸಿಕೊಳ್ಳುವಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಪರಸನಹಳ್ಳಿಯ ಸುನಂದೇಗೌಡರ ಪುತ್ರ ಕಾರ್ತಿಕ್ ಬಂಧಿತ ಆರೋಪಿ.
ಘಟನೆಯ ವಿವರ:
ಹಾಸನ ಜಿಲ್ಲೆಯ ಜಗದೀಶ್ ಎಂಬವರು ಹುಣಸೂರು ತಾಲೂಕಿನ ತಿಪ್ಪಲಾಪುರ ಗ್ರಾಮದಲ್ಲಿ ಬಾಡಿಗೆಗೆ ಬಿಟ್ಟಿದ್ದ ಟ್ರೇಲರ್ ಸಹಿತ ಟ್ಯ್ರಾಕ್ಟರ್ ಕಳ್ಳತನವಾಗಿದ್ದು, ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್.ಪಿ.ಸೀಮಾ ಲಾಟ್ಕರ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಮಹೇಶ್ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಸಿ.ವಿ.ರವಿ ಹಾಗೂ ಸಿಬ್ಬಂದಿಗಳ ತಂಡ ರಚಿಸಲಾಗಿತ್ತು. ತನಿಖೆಯಲ್ಲಿ ಆರೋಪಿ ಕಾರ್ತಿಕ್ ಕಳ್ಳತನ ಮಾಡಿದ್ದನ್ನು ಪತ್ತೆ ಹಚ್ಚಿ ಹೆಚ್ಚಿನ ವಿಚಾರಣೆ ನಡೆಸಿದ ವೇಳೆ ಇದೇ ಆರೋಪಿ 2022ರ ಜುಲೈ 13ರಂದು ಕಟ್ಟೆಮಳಲವಾಡಿಯಲ್ಲೂ ಸಹ ಒಂದು ಟ್ಯ್ರಾಕ್ಟರ್ -ಟ್ರೇಲರ್ ಕಳ್ಳತನ ಮಾಡಿ, ಚನ್ನಪಟ್ಟಣ ತಾಲೂಕಿನ ನುಗ್ಗೆಹಳ್ಳಿಯಲ್ಲಿ ಮಾರಾಟ ಮಾಡಿದ್ದನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಎಸ್.ಐ.ಸಿದ್ದರಾಜು, ಎಎಸ್‌ಐ ಅಂತೋಣಿಕ್ರೂಸ್, ಸಿಬ್ಬಂದಿಗಳಾದ ವಿಜಯರಘು, ಇಸ್ರಾರ್ ಅಹಮದ್, ಮೆಹರಾಜ್, ಇಮ್ರಾನ್ ಷರೀಫ್ ಬಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.