ವಿವಿಗಳಲ್ಲಿ ಏಕರೂಪ ಪಠ್ಯಕ್ರಮ ಅವೈಜ್ಞಾನಿಕ

Team Udayavani, Jun 13, 2020, 5:16 AM IST

mys akaroopa

ಮೈಸೂರು: ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಏಕರೂಪ ಪಠ್ಯಕ್ರಮ ಜಾರಿಗೆ ತರುವ ರಾಜ್ಯ ಸರ್ಕಾರದ ಚಿಂತನೆ ಅವೈಜ್ಞಾನಿಕವಾಗಿದ್ದು, ಇದು ವಿವಿಗಳ ಸ್ವಾಯತ್ತತೆಗೆ ಮಾರಕವಾಗಲಿ ದೆ ಎಂದು ಕರ್ನಾಟಕ ರಾಜ್ಯ ವಿಶ್ರಾಂತ ಕುಲಪತಿಗಳ  ಸಂಘದ ಸದಸ್ಯರು ಹಾಗೂ ವಿಶ್ರಾಂತ ಕುಲಪತಿ ಪ್ರೊ.ಎಸ್‌.ಎನ್‌. ಹೆಗಡೆ ಹೇಳಿದರು.

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಒಂದೇ ರೀತಿಯ ಪಠ್ಯಕ್ರಮ ಅಳವಡಿಸುವ ಸರ್ಕಾರದ ಚಿಂತನೆ ವಿಶ್ವವಿದ್ಯಾಲಯಗಳ ಪರಿಕಲ್ಪನೆಗೆ  ವ್ಯತಿರಿಕ್ತವಾದುದು. ವಿಶ್ವವಿದ್ಯಾಲಯಗಳು ಸ್ವಾಯತ್ತತೆಯಿಂದ ಕೂಡಿದ ಹಾಗೂ ವೈವಿಧ್ಯತೆಯಿಂದ ಕೂಡಿದ ಸಂಸ್ಥೆಗಳು. ಇವುಗಳನ್ನು ಕೇಂದ್ರಿಕೃತ ವ್ಯವಸ್ಥೆಗೆ ಒಳಪಡಿಸುವುದು ಸರಿಯಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಸರ್ಕಾರಕ್ಕೆ  ಸಲಹೆ ನೀಡಿದರು.

ಬೋಧಕರ ಕೊರತೆ: ವಿಶ್ವವಿದ್ಯಾಲಯದಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಬೋಧಕರ ಅವಶ್ಯಕತೆಯಿದೆ. ಆದರೆ ವಾಸ್ತವದಲ್ಲಿ ರಾಜ್ಯದ ಎಲ್ಲಾ ವಿವಿಗಳಲ್ಲೂ ಬೋಧಕರ ಗಣನೀಯ ಕೊರತೆ ಎದ್ದು ಕಾಣುತ್ತಿದೆ. ಸರ್ಕಾರ ಮೊದಲು  ಬೋಧಕರ ಕೊರತೆ ನೀಗಿಸಲು ಪ್ರಯತ್ನಿಸಬೇಕು. ಇಲ್ಲವಾದರೆ ನಮ್ಮ ವಿವಿಗಳು ಸ್ಪರ್ಧಾತ್ಮಕ ಯುಗದಲ್ಲಿ ಹಿಂದೆ ಬೀಳಲಿವೆ ಎಂದರು.

ಆನ್‌ಲೈನ್‌ ಶಿಕ್ಷಣಕ್ಕೆ ಸಿದ್ಧತೆ ಅಗತ್ಯ: ವಿಶ್ರಾಂತ ಕುಲಪತಿ ಪ್ರೊ.ಪಿ.ವೆಂಕಟರಾಮಯ್ಯ ಮಾತ ನಾಡಿ, ಇತ್ತೀಚೆಗೆ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದ ವರೆಗೆ ಆನ್‌ಲೈನ್‌ ಶಿಕ್ಷಣ ಅಳವಡಿಸಿ ಕೊಳ್ಳಬೇಕು ಎಂಬ ಚರ್ಚೆ ನಡೆಯುತ್ತಿದೆ.  ನಮ್ಮ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಕೆಲವನ್ನು ಹೊರತುಪಡಿಸಿದರೆ ಉಳಿದ ಸಂಸ್ಥೆಗಳು ಈ ಬದಲಾವಣೆಗೆ ಸಿದ್ಧತೆ ಮಾಡಿಕೊಂಡಿಲ್ಲ. ಸಾಮಾನ್ಯ ಪದವಿ ತರಗತಿ ವಿದ್ಯಾ ರ್ಥಿಗಳು ಈ ವಿಧಾನ ಅನುಸರಿಸಿ ಪಾಠಗಳನ್ನು ಕೇಳುವ  ಕೌಶಲ್ಯ ಪಡೆದುಕೊಂಡಿಲ್ಲ.

ಜೊತೆಗೆ ಅವರಲ್ಲಿ ಅದಕ್ಕೆ ಬೇಕಾದ ಸೌಕರ್ಯಗಳೂ ಇಲ್ಲ. ಆನ್‌ಲೈನ್‌ ಮೂಲಕ ಪಾಠ ಗಳೆಲ್ಲವನ್ನೂ ಮಾಡಲಾಗುವುದಿಲ್ಲ. ಜೊತೆಗೆ ವಿಜ್ಞಾನ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ಇದರಿಂದ  ಮಾಡಲಾಗದು. ಈ ಬಗ್ಗೆ ಶಿಕ್ಷಣ ತಜ್ಞರ ಜೊತೆ ಗಂಭೀರ ಚರ್ಚೆ ಅವಶ್ಯಕ. ಎಲ್ಲಕ್ಕಿಂತ ಮಿಗಿಲಾಗಿ ಕಾಲೇಜು ಗಳಲ್ಲಿ ಕೆಲಸ ನಿರ್ವಹಿಸು ತ್ತರುವ ನಮ್ಮ ಹಿರಿಯ ಅಧ್ಯಾಪಕ ವೃಂದ ಆನ್‌ಲೈನ್‌ ಶಿಕ್ಷಣ ನೀಡುವ ತರಬೇತಿ ಪಡೆದಿರುವುದಿಲ್ಲ  ಎಂದು ತಿಳಿಸಿದರು. ಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ವಿಶ್ರಾಂತ ಕುಲಪತಿಗಳ ಸಂಘದ ಸದಸ್ಯರಾದ ಪ್ರೊ.ಜೆ.ಎ.ಕೆ.ತರೀಕ್‌, ಅಂಬಳಿಕೆ ಹಿರಿಯಣ್ಣ ಇತರರಿದ್ದರು.

ಮೆಂಟರ್‌ ಶಿಪ್‌ ಅಳವಡಿಕೆ ಅಸಾಧ್ಯ:  ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೆಂಟರ್‌ಶಿಪ್‌ ಅಳವಡಿಕೆ ಉತ್ತಮ ವಿಧಾನವಾ  ಗಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಅದು ಸಫ‌ಲವಾಗುವುದಿಲ್ಲ. ಏಕೆಂದರೆ ನಮ್ಮಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿಗಳ ಅನುಪಾತ ಹೆಚ್ಚಿದೆ. ಪದವಿ ತರಗತಿಗಳಲ್ಲಿ 80ರಿಂದ 90 ವಿದ್ಯಾರ್ಥಿಗಳು ಇರುವುದರಿಂದ ಮೆಂಟರ್‌ಶಿಪ್‌ ಅಳವಡಿಕೆ ಮಾಡುವುದು ಅಸಾಧ್ಯ ಎಂದು ಮುಕ್ತ ವಿವಿ ವಿಶ್ರಾಂತ ಕುಲಪತಿ ಪ್ರೊ.ರಾಮೇಗೌಡ ಹೇಳಿದರು.

ಟಾಪ್ ನ್ಯೂಸ್

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.