ದ್ವಿದಳ ಧಾನ್ಯ ಉತ್ಪಾದನೆಯಲ್ಲಿ ಉತ್ತಮ ಅಭಿವೃದ್ಧಿ ಕಾಣಲು ಕೃಷಿ ಇಲಾಖೆಯಿಂದ ಹೊಸ ತಂತ್ರಜ್ಞಾನ

New technology in agricultural field

Team Udayavani, Sep 17, 2020, 3:31 PM IST

ದ್ವಿದಳ ಧಾನ್ಯ ಉತ್ಪಾದನೆಯಲ್ಲಿ ಉತ್ತಮ ಅಭಿವೃದ್ಧಿ ಕಾಣಲು ಕೃಷಿ ಇಲಾಖೆಯಿಂದ ಹೊಸ ತಂತ್ರಜ್ಞಾನ

ಬಾಗಲಕೋಟೆ: ದ್ವಿದಳ ಧಾನ್ಯಗಳ ಉತ್ಪಾದನೆಯಲ್ಲಿ ನಮ್ಮ ರೈತರು ಹೊಸ ಕೃಷಿ ವಿಜ್ಞಾನ ಹಾಗೂ ತಂತ್ರಜ್ಞಾನ ಅಳವಡಿಸಿಕೊಳ್ಳಲು ಹೊಸ ತಂತ್ರಜ್ಞಾನವೊಂದು ಬಂದಿದೆ.

ಇಡೀ ದೇಶದ ದ್ವಿದಳ ಧಾನ್ಯಗಳ ಉತ್ಪಾದನೆಯಲ್ಲಿ ಕರ್ನಾಟಕವೂ ಮುಂಚೂಣಿ ಪಟ್ಟಿಯಲ್ಲಿರುವುದರಿಂದ ನಮ್ಮ ರಾಜ್ಯವೂ ದೇಶವನ್ನು ದ್ವಿದಳ ಧಾನ್ಯಗಳ ಉತ್ಪಾದನೆಯಲ್ಲಿ ಸ್ವಪರ್ಯಾಪ್ತತೆ ದೊರಕಿಸಿಕೊಡಲು ಮುಖ್ಯ ಪಾತ್ರ ವಹಿಸಬಹುದು. ಈ ವಾಸ್ತವ ಮನಗಂಡು ಬಾಗಲಕೋಟೆ ಕೃಷಿ ಇಲಾಖೆಯು ಜಿಲ್ಲೆಯ ರೈತರ ತೊಗರಿ ಬೆಳೆಯ ಉತ್ಪತ್ತಿಯಲ್ಲಿ ಗಣನೀಯ ಅಭಿವೃದ್ಧಿ ಕಾಣಬಹುದಾದ ತಂತ್ರಜ್ಞಾನ ರೈತರಿಗೆ ಪರಿಚಯಿಸಲು ಮುಂದಾಗಿದೆ.

ಜಿಲ್ಲೆಯ ಕೃಷಿ ಇಲಾಖೆ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಡಿಎಂಎಸಿ (ಹನಿಯಿಂದ ಮಾರುಕಟ್ಟೆಗೆ ಕೃಷಿ ಮಾರ್ಗ) ಎಂಬ ಯೋಜನೆಯಡಿ ತೊಗರಿ ಬೆಳೆ ಕುಡಿ ಚಿವುಟುವ ಯಂತ್ರ ಪರಿಚಯಿಸಲಾಗಿದ್ದು, ಸುಮಾರು 30ಕ್ಕಿಂತ ಹೆಚ್ಚು ರೈತರು ಈಗಾಗಲೇ ಇದರ ಉಪಯೋಗ ಪಡೆದಿದ್ದಾರೆ.

ಇದನ್ನೂ ಓದಿ:ಟೀ ಸ್ಟಾಲ್‌ಗೆ ಸುಧಾಮೂರ್ತಿ ಅಮ್ಮ ಎಂದು ಹೆಸರು : ಮಾಲೀಕನಿಗೆ ಕರೆ ಮಾಡಿದ ಸುಧಾಮೂರ್ತಿ

ಕುಡಿ ಚಿವುಟುವುದು ಅಥವಾ ನಿಪ್ಪಿಂಗ್‌ ಎಂದು ಕರೆಯಲ್ಪಡುವ ಈ ಕ್ರಿಯೆ ದ್ವಿದಳ ಧಾನ್ಯಗಳು, ಹಾಗೂ ಇತರ ಮುಂಗಾರು ಬೆಳೆಗಳನ್ನು ಬಿತ್ತನೆ ಮಾಡಿದ 40 ರಿಂದ 50 ದಿನಗಳಲ್ಲಿ ಬೆಳೆಯ ಮೇಲ್ಭಾಗದ ಕುಡಿಯನ್ನು 5-8 ಸೆಂ.ಮೀದಷ್ಟು ಚಿವುಟುವುದಾಗಿದೆ. ಕುಡಿ ಚಿವುಟುವುದರಿಂದ ಈ ಬೆಳೆಗಳು ಎತ್ತರಕ್ಕೆ ಬೆಳೆಯುವುದು ಕುಂಠಿತವಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಕವಲೊಡೆಯಲು ಸಹಕಾರಿಯಾಗುತ್ತದೆ. ಇದರಿಂದ ಕಾಯಿಗಳ ಸಂಖ್ಯೆ ಹೆಚ್ಚಾಗಿ, ಇಳುವರಿ ಹೆಚ್ಚಾಗುತ್ತದೆ. ಮಾತ್ರವಲ್ಲದೇ ಬೆಳೆ ಎತ್ತರಕ್ಕೆ ಬೆಳೆಯುವು ಹತೋಟಿಗೆ ಬರುವುದರಿಂದ ಔಷಧಿ ಸಿಂಪಡಿಸಲು ಅನುಕೂಲವಾಗುತ್ತದೆ.

ಇದರೊಂದಿಗೆ, ದ್ವಿದಳ ಧಾನ್ಯಗಳು ತಮ್ಮ ಬೇರು ಗಂಟುಗಳಲ್ಲಿ ರೈಜೋಬಿಯಂ ಬ್ಯಾಕ್ಟೀರಿಯಾ ಮೂಲಕ ಸಂಗ್ರಹಿಸಿಡುವ ಸಸಾರಜನಕವನ್ನು ಕುಡಿ ಚಿವುಟಿದ ನಂತರವಿರುವ ಎಲೆಗಳಿಗಷ್ಟೇ ಪೂರೈಕೆ ಮಾಡುವುದರಿಂದ ಹೂ, ಮೊಗ್ಗು, ಕಾಯಿ ಬಿಡುವುದನ್ನು ಇದು ಉತ್ತೇಜಿಸುತ್ತದೆ. ಇದರಿಂದ, ರೈತರ ಇಳುವರಿ ಗಣನೀಯವಾಗಿ ಹೆಚ್ಚಾಗುತ್ತದೆ. ಕುಡಿ ಚಿವುಟುವುದರೊಂದಿಗೆ ಬೆಳೆಗೆ ಅತ್ಯವಶ್ಯಕವಿರುವ ಸೂಕ್ಷ್ಮ ಪೋಷಕಾಂಶ ಸಿಂಪಡಿಸುವುದರಿಂದ, ಪ್ರತಿ ಹೆಕ್ಟೇರ್‌ಗೆ ಶೇ.40 ರಿಂದ 50 ಹೆಚ್ಚಿನ ಉತ್ಪಾದನೆ ಕಾಣಬಹುದು ಎಂದು ಡಿಎಂಎಸಿ ಯೋಜನೆ ಮುಖ್ಯಸ್ಥ ಸುರೇಶ್‌ ತಿಳಿಸಿದ್ದಾರೆ.

ಇದನ್ನೂ ಓದಿ:ಅಧಿವೇಶನಕ್ಕೆ ಮೊದಲೇ ಸಂಪುಟ ವಿಸ್ತರಣೆ ಬಯಕೆ: ಸಿಎಂ ಯಡಿಯೂರಪ್ಪ

ಡಿಎಂಎಸಿ ಯೋಜನೆ ಸಹಯೋಗದೊಂದಿಗೆ ಹಾಗೂ ಪ್ರಗತಿಪರ ರೈತರ ಮುಂದಾಳತ್ವದೊಂದಿಗೆ ಅಮರಾವತಿಯಲ್ಲಿ ಪ್ರಾರಂಭವಾಗಿರುವ ಅಮೃತ ರೈತ ಉತ್ಪಾದಕ ಕಂಪನಿ ಮೂಲಕ ರೈತರಿಗೆ ಅನುಕೂಲವಾಗಲು ಕುಡಿ ಚಿವುಟುವ ಯಂತ್ರ ಅತ್ಯಲ್ಪ ಬಾಡಿಗೆಗೆ ದೊರಕಿಸಿಕೊಡಲಾಗುತ್ತಿದೆ. ರೈತರು ಇದರ ಸದುಪಯೋಗಪಡೆದುಕೊಳ್ಳಬೇಕೆಂ ದು ಡಿಎಂಎಸಿ ಯೋಜನೆ ವ್ಯವಸ್ಥಾಪಕ ಶಿವಪ್ರಕಾಶ್‌ ತಿಳಿಸಿದ್ದಾರೆ.

ಕುಡಿ ಚಿವುಟುವುದರ ಪ್ರಾಮುಖ್ಯತೆ ಹಾಗೂ ಕುಡಿ ಚಿವುಟುವ ಯಂತ್ರದ ಬಳಕೆ ಬಗ್ಗೆಯೂ ರೈತರಲ್ಲಿ ಅರಿವು ಮೂಡಿಸಲು ಡಿಎಂಎಸಿ ತಂಡವು ದೂರವಾಣಿ ಮೂಲಕ ಧ್ವನಿ ಸಂದೇಶ, ಪ್ರಾತ್ಯಕ್ಷಿಕೆ ಮುಂತಾದ ಜಾಗ್ರತಾ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ ಎಂದು ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

3-ptr

Puttur: ಪೆನ್‌ ಪಾಯಿಂಟ್‌ ಕ್ರಿಕೆಟ್‌: ಸತತ 2ನೇ ಬಾರಿ ಬ್ಲೂ ಹಂಟರ್ಸ್‌ ಚಾಂಪಿಯನ್ಸ್‌

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.