ತಾಂಡಾ ಅಭಿವೃದ್ಧಿಗೆ 100 ಕೋಟಿ ರೂ: ಸಿಎಂ
Team Udayavani, Feb 15, 2020, 3:07 AM IST
ದಾವಣಗೆರೆ: ರಾಜ್ಯ ಸರ್ಕಾರದ ಮುಂದಿನ ಬಜೆಟ್‌ನಲ್ಲಿ ತಾಂಡಾಗಳ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡ ಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಶುಕ್ರವಾರ ನ್ಯಾಮತಿ ತಾಲೂಕಿನ ಸೂರಗೊಂಡನ ಕೊಪ್ಪದಲ್ಲಿ ಶ್ರೀ ಸಂತ ಸೇವಾಲಾಲ್ ಮಹಾರಾಜರ 281ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿ, ಮಾ.5ರಂದು ಮಂಡಿಸಲಿರುವ ಬಜೆಟ್‌ನಲ್ಲಿ ತಾಂಡಾಗಳ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಲಾಗುವುದು.
ಮುಂದಿನ 3 ವರ್ಷದಲ್ಲಿ ಬಂಜಾರ ಸಮಾಜ ಬಾಂಧ ವರು ನೆಮ್ಮದಿ, ಗೌರವ, ಸ್ವಾಭಿಮಾನದಿಂದ ಬದುಕು ನಡೆಸುವ ರೀತಿ ಎಲ್ಲಾ ಸೌಲಭ್ಯ ಒದಗಿಸಲಾಗುವುದು ಎಂದರು. ಮುಂದಿನ ಎರಡು ವರ್ಷದಲ್ಲಿ ರಾಜ್ಯದ ಎಲ್ಲಾ ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮ ಮಾಡಲು ತೀರ್ಮಾನಿಸಿದ್ದು, ಅದಕ್ಕಾಗಿ ಎಷ್ಟೇ ಹಣ ಖರ್ಚಾದರೂ ಚಿಂತಿಸುವುದಿಲ್ಲ. ಲಂಬಾಣಿ ಸಮಾಜದ ಭಾಷೆ, ಸಂಸ್ಕೃತಿ ವಿಶೇಷವಾಗಿದೆ.
ಭಾಷೆ, ಸಂಸ್ಕೃತಿ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಲಂಬಾಣಿ ಭಾಷಾ ಅಕಾಡೆಮಿ ಪ್ರಾರಂಭಿಸ ಲಾಗುವುದು ಎಂದು ತಿಳಿಸಿದರು. ರಾಜ್ಯದ ಎಲ್ಲಾ ತಾಂಡಾಗಳಲ್ಲಿ ಉದ್ಯೋಗ ಸೃಜನೆಗೆ ಕ್ರಮ ವಹಿಸಲಾಗುವುದು. ವಿಶೇಷ ಪ್ಯಾಕೇಜ್ ನೀಡ ಲಾಗುವುದು. ಲಂಬಾಣಿ ಕಲಾ ಮತ್ತು ಕೌಶಲ್ಯದ ಸಿದ್ಧ ಉಡುಪು ಘಟಕವನ್ನು ಕೊಪ್ಪಳದ ಬಹದ್ದೂರ್ ಬಂಡ, ಹುಮನಾಬಾದ್ ಸಮೀಪದ ಲಾಲ್‌ಗರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಪ್ರಾರಂಭಿಸಲು ಕ್ರಮ ವಹಿಸಲಾಗುವುದು.
ವಿದೇಶಿ ಮಾರುಕಟ್ಟೆ ಸೌಲಭ್ಯ ಒದಗಿಸಲಾಗುವುದು. ಹುಮನಾಬಾದ್ ಲಾಲ್‌ಗರಿಯಲ್ಲಿ 30, ಬಾಗಲ ಕೋಟೆಯಲ್ಲಿ ಗುದ್ದನಕೇರಿಯಲ್ಲಿ 6 ಎಕರೆ ಜಾಗವನ್ನು ತಾಂಡಾ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ಈಗಾಗಲೇ ನೀಡಿದೆ ಎಂದರು. ಬಂಜಾರ ಸಮುದಾಯದ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಅಭಿವೃದ್ಧಿಗೆ ಅಧ್ಯಾತ್ಮ ಗುರು ಸಂತ ಸೇವಾ ಲಾಲರು ಕಾರಣ.
ಅವರ ಜನ್ಮಸ್ಥಳ ಸೂರಗೊಂಡನಕೊಪ್ಪ ರಾಜ್ಯದಲ್ಲಿರುವುದು ಹೆಮ್ಮೆಯ ಸಂಗತಿ. ಪ್ರವಾಸೋ ದ್ಯಮ ಇಲಾಖೆ ಸಹಯೋಗದಲ್ಲಿ ಸೂರಗೊಂಡನ ಕೊಪ್ಪವನ್ನು ರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಸಂಪರ್ಕ ರಸ್ತೆ, ಉದ್ಯಾನವನ, ಕಾರಂಜಿ, ನೀರು ಪೂರೈಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದರು
ಕಾರ್ಯಕ್ರಮ ಬಳಿಯೇ ಬೆಂಕಿ ಅವಘಡ
ದಾವಣಗೆರೆ: ಸಿಎಂ ಯಡಿಯೂರಪ್ಪ ಶುಕ್ರವಾರ ಸಂಜೆ ಪಾಲ್ಗೊಂಡಿದ್ದ ಕಾರ್ಯಕ್ರಮದ ಸಮೀಪ ಬೆಂಕಿ ಅವಘಡ ಸಂಭವಿಸಿದೆ. ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಸಂತ ಸೇವಾಲಾಲ್ ಮಹಾರಾಜರ ಜಯಂತ್ಯುತ್ಸವದಲ್ಲಿ ಸಿಎಂ ಯಡಿಯೂರಪ್ಪ ಭಾಗವಹಿಸಿದ್ದ ಕಾರ್ಯಕ್ರಮ ನಡೆಯುವ ಸ್ಥಳದ ಸಮೀಪದಲ್ಲೇ ಬಯಲಿನಲ್ಲಿ ಬೆಂಕಿ ಹತ್ತಿಕೊಂಡಿತು.
ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಭಕ್ತರು ವಾಹನಗಳನ್ನು ನಿಲ್ಲಿಸಿದ್ದ ಪ್ರದೇಶದ ಪಕ್ಕದಲ್ಲೇ ಹತ್ತಿಕೊಂಡ ಬೆಂಕಿಯನ್ನು ತಕ್ಷಣ ಅಗ್ನಿಶಾಮಕ, ಪೋಲಿಸ್ ಹಾಗೂ ಸ್ಥಳೀಯರು ನಂದಿಸುವಲ್ಲಿ ಯಶಸ್ವಿಯಾದರು. ಕಿಡಿಗೇಡಿಗಳು ಬೀಡಿ, ಸಿಗರೇಟ್ ಸೇದಿ ಎಸೆದಿದ್ದರಿಂದ ಬೆಂಕಿ ಹತ್ತಿಕೊಂಡು ಮೆಕ್ಕೆಜೋಳ ಕಟಾವು ಮಾಡಿದ್ದ ಉಳಿದ ದಂಟುಗಳಿಗೆ ವ್ಯಾಪಿಸಿತು. ಗಾಳಿಯಿಂದಾಗಿ ಬೆಂಕಿ ಕ್ಷಣಾರ್ಧದಲ್ಲೇ ಒಂದು ಕಡೆಯಿಂದ ಮತ್ತೂಂದು ಕಡೆಗೆ ಹರಡಿತು. ಸಕಾಲಿಕ ಕ್ರಮದಿಂದಾಗಿ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.