![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Feb 18, 2023, 5:30 AM IST
ರಾಜ್ಯ ಸರಕಾರ ಕ್ರೀಡಾಕ್ಷೇತ್ರಕ್ಕೆ ಆದ್ಯತೆ ನೀಡಿದೆ. ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕ್ರೀಡಾಂಗಣಗಳ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಈ ಕ್ರೀಡಾಂಗಣಗಳಲ್ಲಿ ಮಹಿಳೆಯರು ಮತ್ತು ವಿಶೇಷಚೇತನರಿಗೆ ಸೂಕ್ತ ಸೌಕರ್ಯಗಳು ಹಾಗೂ ಯುವಜನರಿಗೆ ಹೊರಾಂಗಣ ಜಿಮ್ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಉದ್ದೇಶಕ್ಕಾಗಿ ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.
ಒಲಿಂಪಿಕ್ಸ್ ಮತ್ತು ಇತರ ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಪದಕ ಪಡೆಯುವ ಉದ್ದೇಶಕ್ಕೆ ಅತ್ಯುನ್ನತ ತರಬೇತಿ ಹಾಗೂ ಸಲಕರಣೆಗಳನ್ನು ಪಡೆಯಲು ಅನುವಾಗುವಂತೆ 50 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಒಲಿಂಪಿಕ್ಸ್ ಕನಸಿನ ಯೋಜನ ನಿಧಿ ಸ್ಥಾಪಿಸಲಾಗುವುದು. ಈ ಯೋಜನೆಯಡಿ 12ರಿಂದ 19 ವರ್ಷ ವಯೋಮಾನದ, ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿದ ಯುವ ಪ್ರತಿಭಾವಂತ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವ ಮಾಡಲಾಗುವುದು.
ರಾಜ್ಯದ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಐದು ಯುವ ಜನರಿಗೆ ಪ್ರಸಕ್ತ ಸಾಲಿನಿಂದ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ನೀಡಲಾಗುವುದು. ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ರೂಪಿಸುವ ಅಧಿಕೃತವಾಗಿ ನೋಂದಣಿಯಾಗಿರುವ ಖಾಸಗಿ ಕ್ರೀಡಾ ಸಂಸ್ಥೆಗಳಿಗೆ 25 ಲಕ್ಷ ರೂ.ಗಳವರೆಗೆ ಪ್ರೋತ್ಸಾಹಧನ ನೀಡಲಾಗುವುದು. ಬಾಸ್ಕೆಟ್ ಬಾಲ್ ಮತ್ತು ವಾಲಿಬಾಲ್ ಕ್ರೀಡೆಗಳನ್ನು ಹೆಚ್ಚಿನ ಸಂಖ್ಯೆಯ ಮಕ್ಕಳಿಗೆ ಪರಿಚಯಿಸಲು ಹೊಸ ಅಂಕಣಗಳನ್ನು ಮತ್ತು ತರಬೇತಿ ಕೇಂದ್ರಗಳನ್ನು ನಿರ್ಮಿಸಲಾಗುವುದು.
ಖೋಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ ಗಳನ್ನು ಉತ್ತೇಜಿಸಲು ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಲಾಗುವುದು. ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸುಸಜ್ಜಿತವಾದ ಕ್ರೀಡಾಂಗಣವನ್ನು ನರೇಗಾ ಯೋಜನೆಯಡಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು.
ಶಿರಸಿಯಲ್ಲಿ ಪರಿಸರ ವಿಜ್ಞಾನ ವಿವಿ
ಪ್ರಪ್ರಥಮ ಬಾರಿಗೆ 100 ಕೋಟಿ ರೂ. ಅನುದಾನದಲ್ಲಿ ಹಸುರು ಆಯವ್ಯಯ ಘೋಷಿಸಲಾಗಿದೆ. ಸಮಗ್ರ ಪರಿಸರ ಅಭಿವೃದ್ಧಿಗೆ ಸಂಬಂಧಿಸಿದ ರೂಪುರೇಷೆಗಳನ್ನು ಸಿದ್ಧಪಡಿಸಲು ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯವನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸ್ಥಾಪಿಸಲಾಗುವುದು ಎಂದು ಘೊಷಿಸಲಾಗಿದೆ. ಬೋಳುಗುಡ್ಡ ಪ್ರದೇಶಗಳ ಪುನಶ್ಚೇತನ, ಕ್ಷೀಣಿಸಿದ ಅರಣ್ಯಪ್ರದೇಶದ ಮರುಸ್ಥಾಪನೆ, ಕರಾವಳಿ ಪ್ರದೇಶದಲ್ಲಿ ಕಾಂಡ್ಲಾ ಅರಣ್ಯೀಕರಣ ಮತ್ತು ಶೆಲ್ಟರ್ ಬೆಲ್ಟ… ನಿರ್ವಹಣೆ ಅಡಿಯಲ್ಲಿ 3,211 ಹೆಕ್ಟೇರ್ ಪ್ರದೇಶದಲ್ಲಿ ಹಾಗೂ ಕೃಷ್ಣಾ ನದಿಯ ಜಲಾನಯನ ಪ್ರದೇಶದಲ್ಲಿ 168 ಕಿ.ಮೀ. ಉದ್ದದ ಅರಣ್ಯೀಕರಣ ಹಾಗೂ 25 ಲಕ್ಷ ಸಸಿ ನೆಡುವ ಯೋಜನೆ ಜಾರಿಗೊಳಸಲಾಗುವುದು.
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
You seem to have an Ad Blocker on.
To continue reading, please turn it off or whitelist Udayavani.