ನ.19ರಂದು “100′ ಚಲನಚಿತ್ರ ತೆರೆಗೆ: ರಮೇಶ ಅರವಿಂದ್ 

Team Udayavani, Nov 11, 2021, 11:40 AM IST

1-100

ದಾವಣಗೆರೆ: ಸಾಮಾಜಿಕ ಜಾಲತಾಣದಿಂದ ವಂಚನೆಗೊಳಗಾಗುವ ಮಧ್ಯಮ ವರ್ಗದ ಕುಟುಂಬವೊಂದರ ಹೋರಾಟದ ಕಥಾ ಹಂದರ ಹೊಂದಿರುವ 100′ ಚಲನಚಿತ್ರ ನ.19ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ, ನಾಯಕ ನಟ ರಮೇಶ ಅರವಿಂದ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 100′ ಪೊಲೀಸ್‌ ಸಹಾಯವಾಣಿ ನಂಬರ್‌. ಚಿತ್ರದ ನಾಯಕ ಪೊಲೀಸ್‌ ಅಧಿಕಾರಿ. ಆತನ ಕುಟುಂಬ ಸಾಮಾಜಿಕ ಜಾಲತಾಣದ ವಂಚಕರ ವಂಚನೆಗೆ ಒಳಗಾಗುವುದು, ಅದರಿಂದ ಹೊರ ಬರುವ ಬಗೆ ಹೇಗೆ ಎಂಬುದರ ಮೇಲೆ ಚಿತ್ರ ಕಥೆ ಸಾಗುತ್ತದೆ. 100 ಪಕ್ಕಾ ಫ್ಯಾಮಿಲಿ ಥ್ರಿಲ್ಲರ್‌ ಚಿತ್ರ. ಎರಡು ಗಂಟೆಗಳ ಚಿತ್ರ ಕ್ಷಣದಿಂದ ಕ್ಷಣಕ್ಕೆ ಕುತೂಹಲ ಮೂಡಿಸುತ್ತದೆ. ಬಹಳ ಚೆನ್ನಾಗಿ ಸಿದ್ಧವಾಗಿದೆ. ಪ್ರತಿಯೊಬ್ಬರೂ ಚಿತ್ರಮಂದಿರಗಳಲ್ಲಿ ಚಿತ್ರ ನೋಡುವ ಮೂಲಕ ಯಶಸ್ಸಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಚಿತ್ರದ ನಾಯಕ ವಿಷ್ಣು ಮತ್ತು ಸೈಬರ್‌ ಕ್ರಿಮಿನಲ್‌ ಜತೆಗೆ ಸಾಗುವ ಕಥೆಯೇ 100. ಈ ಚಿತ್ರ ಶಿವಾಜಿ ಸುರತ್ಕಲ್‌ ಚಿತ್ರದ ಮುಂದುವರೆದ ಭಾಗದಂತಿದೆ. ತೆಲುಗಿನಲ್ಲಿ 100 ಸೈಬರ್‌ ಹೆಸರಿನಲ್ಲಿ ಚಿತ್ರ ಸಿದ್ಧವಾಗಿದೆ. ಕನ್ನಡದಲ್ಲಿ ಬಿಡುಗಡೆಯಾದ ನಂತರ ತೆಲುಗು ಚಿತ್ರ ಬಿಡುಗಡೆ ಮಾಡಲಾಗುವುದು. ವಿಶ್ವಾಸ್‌, ಗೌರವ್‌ ಎಂಬ ಹೊಸಬರನ್ನು ಪರಿಚಯಿಸಲಾಗಿದೆ. ಅತ್ಯುತ್ತಮ ತಂತ್ರಜ್ಞರ ತಂಡ, ಪ್ರತಿಭಾವಂತರ ಗುಂಪು ಚಿತ್ರಕ್ಕಾಗಿ ಕೆಲಸ ಮಾಡಿದೆ. ರಚಿತಾರಾಮ್‌ ಅವರೊಂದಿಗೆ ತೆಲುಗಿನ ಪೂರ್ಣ ನಾಯಕಿ ನಟಿಯಾಗಿ ಅಭಿನಯಿಸಿದ್ದಾರೆ. ಚಿತ್ರದ ಟೈಟಲ್‌ 100ಗೂ ಇಬ್ಬರು ನಾಯಕಿಯರಿಗೂ ಸಂಬಂಧವೇ ಇಲ್ಲ. ಆದರೂ ಚಿತ್ರ ನೋಡಿದಾಗ ಪ್ರತಿಯೊಂದು ಪಾತ್ರವೂ ಚಿತ್ರದ ಟೈಟಲ್‌ಗೆ ಹೊಂದಿಕೊಂಡೇ ಸಾಗುತ್ತದೆ. ನಿರ್ಮಾಪಕ ರಮೇಶ್‌ ರೆಡ್ಡಿ ಚಿತ್ರದ ಕಥೆಗೆ ಪೂರಕವಾಗಿ ಬಂಡವಾಳ ಒದಗಿಸಿದ್ದಾರೆ ಎಂದರು.

ಮೊಬೈಲ್‌, ಇನ್‌ಸ್ಟಾಗ್ರಾಂ ಮನೆಯನ್ನೇ ಹೊಕ್ಕಿವೆ. ಒಂದೇ ಮನೆಯಲ್ಲಿ ಪ್ರತಿಯೊಬ್ಬರೂ ಕೈಯಲ್ಲಿರುವ ಮೊಬೈಲ್‌ ನೋಡುವುದರಲ್ಲೇ ಮುಳುಗಿ ಹೋಗಿರುವುದು ಸಾಮಾನ್ಯ ಎನ್ನುವಂತಾಗಿದೆ. ಸಾಮಾಜಿಕ ಜಾಲತಾಣಗಳು ಮಧ್ಯಮ ವರ್ಗದ ಕುಟುಂಬದ ಮೇಲೆ ಏನೆಲ್ಲ ಪರಿಣಾಮ ಉಂಟು ಮಾಡಬಲ್ಲದು. ಗೊತ್ತೋ, ಗೊತ್ತಿಲ್ಲದೆಯೋ ಆ ಕುಟುಂಬ ಸಾಮಾಜಿಕ ಜಾಲತಾಣದಿಂದ ಹೇಗೆ ವಂಚನೆಗೆ ಒಳಗಾಗಬಹುದು ಎಂಬುದನ್ನು 100 ಚಿತ್ರದ ಮೂಲಕ ತೋರಿಸುವ ಪ್ರಯತ್ನ ಮಾಡಲಾಗಿದೆ ಎಂದರು.

ನನ್ನ ಗೆಳೆಯನ ಜೀವನದಲ್ಲಿ ನಡೆದ ಘಟನೆಯನ್ನು ಕಥೆ ಮಾಡಲಾಗಿದೆ. ಇನ್ನುಳಿದ ಕಥೆಯನ್ನು ನಾನೇ ಸಿದ್ಧಪಡಿಸಿದ್ದೇನೆ. ಚಿತ್ರ ನೋಡಿದರೆ ನಮ್ಮ ಜೀವನದಲ್ಲೂ ಇದೇ ರೀತಿ ಇದೆಯೆಲ್ಲ ಎಂಬ ಭಾವನೆ ಬರುತ್ತದೆ. ಯಾವುದೇ ಚಿತ್ರ ನಮ್ಮ ಬದುಕಿಗೆ ಹತ್ತಿರವಾದ ಕಥೆ ಹೊಂದಿದ್ದಲ್ಲಿ ಚಿತ್ರ ಗೆದ್ದೇ ಗೆಲ್ಲುತ್ತದೆ. ತಮ್ಮ ರಾಮ ಶ್ಯಾಮ ಭಾಮ, ಅಮೆರಿಕ ಅಮೆರಿಕ ಇದೇ ಸೂತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದವು. ಜೀವನದ ಅನುಭವವೂ ಚಿತ್ರಕಥೆಯಲ್ಲಿ ಮೇಳೈಸುವಂತಾಗಬೇಕು ಎಂದರು.

ನಿರ್ಮಾಪಕ ಎಂ. ರಮೇಶ್‌ ರೆಡ್ಡಿ ಮಾತನಾಡಿ, 100′ ತಮ್ಮ ಮೂರನೇ ಚಿತ್ರ. ರಮೇಶ ಅರವಿಂದ ಒಳ್ಳೆಯ ಕಥೆಯನ್ನು ಬಹಳ ಸುಂದರವಾಗಿ ಮಾಡಿದ್ದಾರೆ. ಪ್ರತಿಯೊಬ್ಬರೂ ಚಿತ್ರ ನೋಡುವ ಮೂಲಕ ಆಶೀರ್ವದಿಸಬೇಕು ಎಂದು ಕೋರಿದರು.

ಟಾಪ್ ನ್ಯೂಸ್

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು

TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.