Covid: ರಾಜ್ಯದಲ್ಲಿ 104 ಹೊಸ ಕೋವಿಡ್ ಪ್ರಕರಣ
Team Udayavani, Dec 23, 2023, 11:41 PM IST
ಬೆಂಗಳೂರು: ರಾಜ್ಯದಲ್ಲಿ ಶನಿವಾರ ಹೊಸದಾಗಿ 104 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 8 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸೋಂಕಿತ ಸಕ್ರಿಯ ಪ್ರಕರಣಗಳ ಸಂಖ್ಯೆ 300ರ ಗಡಿ ಸಮೀಪಿಸಿದ್ದು, ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ.
ಶನಿವಾರ ಪರೀಕ್ಷೆಗೆ ಒಳಪಡಿಸಲಾದ 1,752 ಮಾದರಿಗಳಲ್ಲಿ ಶೇ.5.93ರಷ್ಟು ಮಾದರಿಗಳಲ್ಲಿ ಸೋಂಕು ದೃಢವಾಗಿದೆ. 258 ಮಂದಿ ಹೋಮ್ ಐಸೊಲೇಶನ್ ಹಾಗೂ 13 ಮಂದಿ ಆಸ್ಪತ್ರೆಯಲ್ಲಿದ್ದಾರೆ. 6 ಮಂದಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ 85 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣ ಸಂಖ್ಯೆ 234ಕ್ಕೆ ಏರಿಕೆಯಾಗಿದೆ. ಉಳಿದಂತೆ ಚಾಮರಾಜನಗರ, ತುಮಕೂರು ಜಿಲ್ಲೆಯಲ್ಲಿ ತಲಾ 2, ದ.ಕ., ಮಂಡ್ಯದಲ್ಲಿ ತಲಾ 1, ಶಿವಮೊಗ್ಗ 6, ಮೈಸೂರು 7 ಪ್ರಕರಣಗಳು ವರದಿಯಾಗಿದೆ. ಉಳಿದ 24 ಜಿಲ್ಲೆಯಲ್ಲಿ ಶೂನ್ಯ ಪಾಸಿಟಿವಿಟಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.