2022ರೊಳಗೆ 11 ಲಕ್ಷ ಮನೆ ನಿರ್ಮಾಣ ಪೂರ್ಣ: ಸಚಿವ ವಿ.ಸೋಮಣ್ಣ
Team Udayavani, Dec 15, 2021, 9:45 PM IST
ಸುವರ್ಣವಿಧಾನಸೌಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ 5 ಲಕ್ಷ ಹೊಸ ಮನೆಗಳು ಹಾಗೂ ಬಾಕಿ ಉಳಿದ 6 ಲಕ್ಷ ಮನೆಗಳು ಸೇರಿ ಒಟ್ಟು 11 ಲಕ್ಷ ಮನೆಗಳನ್ನು 2022ರ ಜ.25ರ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
ಬುಧವಾರ ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆ ಕೆ.ಹರೀಶ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿ, ದಕ್ಷಿಣ ಜಿಲ್ಲೆಯಲ್ಲಿ ಈ ವರೆಗೂ 6705 ಮನೆ ಪೂರ್ಣಗೊಂಡಿದ್ದು, ಫಲಾನುಭವಿಗಳಿಗೆ 80 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. 1458 ಮನೆಗಳು ಬಾಕಿ ಇದೆ. ಇದನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು ಎಂದರು.
ರಾಜ್ಯದಲ್ಲಿಯೇ ಹೊಸದಾಗಿ 5 ಲಕ್ಷ ಮನೆಗಳನ್ನು ನಿರ್ಮಿಸಲು ಸಿಎಂ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದು 2022ರ ಜ.25 ರ ಒಳಗಾಗಿ ಇವುಗಳ ನಿರ್ಮಾಣಕ್ಕೆ ಒತ್ತು ನೀಡಲಾಗುವುದು. ಕಂತುಗಳ ಸಂಖ್ಯೆ 3ಕ್ಕೆ ಇಳಿಸಿದ್ದು ಮೊದಲ ಕಂತಿನಲ್ಲಿ 40 ಸಾವಿರ ರೂ.ಗಳನ್ನು ನೀಡಲಾಗುವುದು.
ಇದನ್ನೂ ಓದಿ:ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಡಿ.16, 17ರಂದು ಪ್ರತಿಭಟನೆ
ಈ ಹಿಂದಿನ ಬಾಕಿ ಉಳಿದಿರುವ 6 ಲಕ್ಷ ಮನೆಗಳು ಸೇರಿ ಎಲ್ಲಾ ನೂತನ ಮನೆಗಳನ್ನು 2022ರ ಒಳಗಾಗಿ ಪೂರ್ಣಗೊಳಿಸಲಾಗುವುದು. ಈ ಸಂಬಂಧ ಎಲ್ಲಾ ಜಿಲ್ಲೆಗಳ ಸಿಇಒಗಳಿಗೆ ಸೂಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.