ರಾಜ್ಯದಲ್ಲಿಂದು 14,473 ಕೋವಿಡ್ ಪ್ರಕರಣ ಪತ್ತೆ, 5 ಸಾವು: ಪಾಸಿಟಿವಿಟಿ ದರ ಶೇ.10.30
Team Udayavani, Jan 11, 2022, 11:30 PM IST
ಬೆಂಗಳೂರು: ರಾಜ್ಯದಲ್ಲಿ ಮೂರನೇ ಅಲೆ ತೀವ್ರಗೊಂಡಿದ್ದು, ಮಂಗಳವಾರ 14,473 ಮಂದಿ ಸೋಂಕಿಗೆ ತುತ್ತಾಗಿದ್ದು, ರಾಜ್ಯದ ಕೋವಿಡ್ ಪಾಸಿಟಿವಿಟಿ ದರ ಶೇ.10.30ಗೆ ಏರಿಕೆಯಾಗಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ 10,800, ದ.ಕ. 583, ಮೈಸೂರು 562, ತುಮಕೂರು 332, ಮಂಡ್ಯ 263, ಉಡುಪಿ 250, ಧಾರವಾಡ 178 ಪ್ರಕರಣಗಳು ದಾಖಲಾಗಿವೆ. ಅನಾರೋಗ್ಯದಿಂದ ಬಳಲುತ್ತಿದ್ದ ಬೆಂಗಳೂರು ನಗರದ ಮೂವರು, ಕೋಲಾರ ಹಾಗೂ ಉತ್ತರ ಕನ್ನಡದಲ್ಲಿ ತಲಾ ಒಬ್ಬರಂತೆ ಒಟ್ಟು 5 ಮಂದಿ ಮೃತಪಟ್ಟಿದ್ದಾರೆ. 1,356 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 73,260ಕ್ಕೆ ಏರಿಕೆಯಾಗಿದೆ.
ಚನ್ನಗಿರಿ: 46 ವಿದ್ಯಾರ್ಥಿಗಳಿಗೆ ಸೋಂಕು
ಚನ್ನಗಿರಿ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮಾವಿನಹೊಳೆ ಗ್ರಾಮದ ಇಂದಿರಾ ಗಾಂ ಧಿ ವಸತಿ ಶಾಲೆ ಪ್ರಾಂಶುಪಾಲರ ಸಹಿತ 46 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ವಸತಿ ಶಾಲೆಯಲ್ಲಿ 246ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಕೆಲವು ದಿನಗಳ ಹಿಂದೆ ಮಕ್ಕಳಲ್ಲಿ ಶೀತ, ನೆಗಡಿ, ಜ್ವರ, ಕೆಮ್ಮಿನ ಲಕ್ಷಣಗಳು ಕಂಡು ಬಂದಿವೆ. ತತ್ಕ್ಷಣ ಹಾಸ್ಟೆಲ್ ಸಿಬಂದಿ ಮಕ್ಕಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ರ್ಯಾಪಿಡ್ ಟೆಸ್ಟ್ ಮಾಡಿಸಿದಾಗ ಪ್ರಾಂಶುಪಾಲರ ಸಹಿತ ಅಡುಗೆ ಸಿಬಂದಿ, ಶಿಕ್ಷಕರು ವಿದ್ಯಾರ್ಥಿಗಳು ಸೇರಿ 46 ಜನರಲ್ಲಿ ಕೊರೊನಾ ಪತ್ತೆಯಾಗಿದೆ.
ಶಿರಾ: 17 ಮಕ್ಕಳಿಗೆ ಸೋಂಕು
ಶಿರಾ: ನಗರದ ಹೊರ ವಲಯದಲ್ಲಿನ ಅಂಬೇಡ್ಕರ್ ವಸತಿ ಶಾಲೆಯ (ಪ್ರೀ ಮೆಟ್ರಿಕ್) 17 ಮಕ್ಕಳಿಗೆ ಕೊರೊನಾ ದೃಢವಾಗಿದ್ದು, ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯೊಬ್ಬರಿಗೆ ಮೂರು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಿದಾಗ ಫಲಿತಾಂಶ ಪಾಸಿಟಿವ್ ಬಂದಿದೆ. ವಸತಿ ಶಾಲೆಯಲ್ಲಿ ಒಟ್ಟು 215 ಮಂದಿ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ.
ಸಚಿವರಿಗೆ ಸೋಂಕು
ಬೆಂಗಳೂರು: ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಸರಕಾರದ ಹಲವು ಸಚಿವ
ರಿಗೆ ಕೊವಿಡ್ ಸೋಂಕು ತಗಲಿದೆ. ಬೊಮ್ಮಾಯಿ ಮಂಗಳವಾರ ಮಣಿಪಾಲ ಆಸ್ಪತ್ರೆಗೆ ತೆರಳಿ ಸಾಮಾನ್ಯ ಚಿಕಿತ್ಸೆ ಪಡೆದು ಮತ್ತೆ ಮನೆಗೆ ಮರಳಿದ್ದಾರೆ. ಕಂದಾಯ ಸಚಿವ ಆರ್. ಅಶೋಕ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಕೋವಿಡ್ ದೃಢ ಪಟ್ಟಿರುವುದರಿಂದ ತಮ್ಮ ಮನೆಗಳಲ್ಲಿಯೇ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಖ್ಯಮಂತ್ರಿ ಪುತ್ರ ಭರತ್ ಬೊಮ್ಮಾಯಿ ಹಾಗೂ ಅವರ ಪತ್ನಿಗೂ ಕೋವಿಡ್ ದೃಢ ಪಟ್ಟಿದ್ದು, ಅವರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.