ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಇಕ್ಕೆಲಗಳಲ್ಲಿ 15 ಬಸ್ ಪ್ರಯಾಣಿಕರ ತಂಗುದಾಣ
Team Udayavani, Feb 11, 2021, 5:05 AM IST
ಸಾಂದರ್ಭಿಕ ಚಿತ್ರ
ಪುತ್ತೂರು: ರಾಜ್ಯ ಹೆದ್ದಾರಿ ಉಪ್ಪಿನಂಗಡಿ-ಪುತ್ತೂರು ರಸ್ತೆಯ ಎರಡು ಬದಿಗಳಲ್ಲಿ ಸುಸಜ್ಜಿತ 15 ಬಸ್ ಪ್ರಯಾಣಿಕ ತಂಗುದಾಣಗಳು ನಿರ್ಮಾಣವಾಗಲಿವೆ.
ಶಾಸಕ ಸಂಜೀವ ಮಠಂದೂರು ಪ್ರಸ್ತಾವನೆ ಸಲ್ಲಿಸಿದ್ದು, ಆರು ತಂಗುದಾಣಗಳ ಕಾಮಗಾರಿಗೆ ಅನುದಾನ ಮಂಜೂರಾಗಿದೆ. ನಿರೀಕ್ಷೆಯಂತೆ ಸಾಗಿದರೆ 2 ವರ್ಷಗಳೊಳಗೆ ಚತುಷ್ಪಥ ರಸ್ತೆಯ ಇಕ್ಕೆಲಗಳಲ್ಲಿ ಎಲ್ಲ ತಂಗುದಾಣಗಳು ಎದ್ದು ನಿಲ್ಲಲಿವೆ.
ಚತುಷ್ಪಥ ರಸ್ತೆ
ಕೆಮ್ಮಾಯಿ-ಸೇಡಿಯಾಪು ತನಕ 12 ಕೋ.ರೂ. ವೆಚ್ಚದ ಚತುಷ್ಪಥ ರಸ್ತೆ ನಿರ್ಮಾಣದ ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿದೆ. ನಗರದ ಬೊಳುವಾರು ಬಳಿಯಿಂದ ಪುತ್ತೂರು-ಉಪ್ಪಿನಂಗಡಿ ರಸ್ತೆ ಒಟ್ಟು 10.2 ಕಿ.ಮೀ.ದೂರವಿದೆ. ಹಾರಾಡಿಯಿಂದ ಕೃಷ್ಣನಗರದ ತನಕ ಕಳೆದ ಅವಧಿಯಲ್ಲಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಕಂಡಿತು. ಈ ಅವಧಿಯಲ್ಲಿ ಕೆಮ್ಮಾಯಿ-ಸೇಡಿಯಾಪು ತನಕ 4 ಕಿ.ಮೀ. ರಸ್ತೆಯ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದೆ.
ಚತುಷ್ಪಥ ರಸ್ತೆ ನಿರ್ಮಾಣಕ್ಕೆ ರಸ್ತೆಯ ಮಧ್ಯ ಭಾಗದಿಂದ ಎರಡೂ ಕಡೆ 7 ಮೀಟರ್ ಡಾಮರು ರಸ್ತೆ, 2 ಮೀಟರ್ ರಸ್ತೆ ಬದಿ ಹಾಗೂ ಚರಂಡಿ ಸೇರಿದಂತೆ ಒಟ್ಟು 22 ಮೀಟರ್ ಅಗಲದ ರಸ್ತೆ ನಿರ್ಮಿಸಲಾಗುತ್ತಿದೆ. ಈ ಭಾಗದಲ್ಲಿ ಹಾದುಹೋಗಿರುವ ವಿದ್ಯುತ್ ಲೈನ್ ಬದಲಾವಣೆಗೆ ಸುಮಾರು 70 ವಿದ್ಯುತ್ ಕಂಬ, 100ಕ್ಕೂ ಅಧಿಕ ಮರಗಳನ್ನು ತೆರವು ಮಾಡಲಾಗಿದೆ. ಈ ಹಿಂದೆ ನಿರ್ಮಿಸಲಾದ ತಂಗುದಾಣ ತೆರವು ಮಾಡಲಾಗಿದೆ.
15 ಸುಸಜ್ಜಿತ ತಂಗುದಾಣ
ಪುತ್ತೂರು ಮತ್ತು ಉಪ್ಪಿನಂಗಡಿಯನ್ನು ಸಂಪರ್ಕಿಸುವ 10.2 ಕಿ.ಮೀ. ಜಿಲ್ಲಾ ಮುಖ್ಯ ರಸ್ತೆಯನ್ನು ರಾಜ್ಯ ಹೆದ್ದಾರಿ-118 ಕ್ಕೆ ಸೇರ್ಪಡೆಗೊಳಿಸಲಾಗಿದೆ. ಗುರುವಾಯ ನಕೆರೆ-ಉಪ್ಪಿನಂಗಡಿ ಸಂಪರ್ಕಿಸುವ 26 ಕಿ.ಮೀ. ರಸ್ತೆ ಈಗಾಗಲೇ ರಾಜ್ಯ ಹೆದ್ದಾರಿ ಆಗಿದ್ದು, ಇದೇ ಹೆದ್ದಾರಿಯನ್ನು ಪುತ್ತೂರು ತನಕ ವಿಸ್ತರಿಸಲಾಗಿದೆ. ಈ ಮೂಲಕ 36 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿ ಆಗಿ ಪರಿವರ್ತನೆಗೊಂಡಿದೆ. ಹೊಸ ರಾಜ್ಯ ಹೆದ್ದಾರಿಯು ಜಿಲ್ಲೆಯ ಪ್ರಮುಖ ರಸ್ತೆಯಾಗಿದ್ದು, 3 ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪರ್ಕಿಸುತ್ತದೆ.
ಪ್ರಸ್ತಾವನೆ ಸಲ್ಲಿಕೆ
ಬೋಳುವಾರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಸುಸಜ್ಜಿತ ಪ್ರಯಾಣಿಕರ ತಂಗುದಾಣ ನಿರ್ಮಿಸಲು ಈಗಾಗಲೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಟ್ಟು 15 ಪ್ರಯಾಣಿಕರ ತಂಗುದಾಣಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಪ್ರಯಾಣಿಕರಿಗೆ ಸಂಚಾರದ ಸಂದರ್ಭ ಅನುಕೂಲವಾಗುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
-ಸಂಜೀವ ಮಠಂದೂರು, ಶಾಸಕರು, ಪುತ್ತೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.