ನಾಳೆ 7ನೇ ವರ್ಷದ “ಮಂಗಳೂರು ಕಂಬಳ”- 150 ಜೋಡಿ ಕೋಣಗಳು ಪಾಲ್ಗೊಳ್ಳುವ ನಿರೀಕ್ಷೆ

Team Udayavani, Dec 28, 2023, 5:58 AM IST

kambala

ಮಂಗಳೂರು: ಏಳನೇ ವರ್ಷದ “ಮಂಗಳೂರು ಕಂಬಳ’ ಡಿ. 30ರಂದು ಬಂಗ್ರಕೂಳೂರಿನ ಗೋಲ್ಡ್‌ಫಿಂಚ್‌ ಸಿಟಿಯ ರಾಮಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದೆ.

ಹಿಂದೆ ಕಂಬಳದ ವಿರುದ್ಧ ಪಿತೂರಿ ಉಂಟಾದಾಗ ಕಂಬಳ ಉಳಿಯಬೇಕು ಎಂದು ಹೋರಾಡಿದ್ದೆವು, ಆ ಹೋರಾಟವೇ ಮಂಗಳೂರು ಕಂಬಳಕ್ಕೆ ಸ್ಫೂರ್ತಿ. ಎಲ್ಲರಿಗೂ ಕಂಬಳ ನೋಡುವ ಅವಕಾಶ ಹಾಗೂ ತುಳುನಾಡಿನ ಇತಿಹಾಸ, ಪರಂಪರೆ, ಸಂಪ್ರದಾಯಗಳನ್ನು ಅರಿಯ ಬಹುದು ಎಂಬುದೇ ನಮ್ಮ ಉದ್ದೇಶ ಎಂದು ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಕ್ಯಾಪ್ಟನ್‌ ಬೃಜೇಶ್‌ ಚೌಟ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಡಿ. 30ರಂದು ಬೆಳಗ್ಗೆ 8.30ಕ್ಕೆ ಕಂಬಳದ ಉದ್ಘಾಟ ನೆಯನ್ನು ಚಿತ್ರದುರ್ಗ ಮಾದಾರ ಚೆನ್ನಯ್ಯ ಗುರು ಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ನೆರವೇರಿಸುವರು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ| ತುಕಾರಾಮ ಪೂಜಾರಿ ಅಧ್ಯಕ್ಷತೆ ವಹಿಸುವರು. ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಕೆ. ಚಿತ್ತರಂಜನ್‌ ದೀಪ ಪ್ರಜ್ವಲನೆ ನೆರವೇರಿಸಲಿದ್ದು, ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಶ್ರೀ ಜಿತಕಾಮಾನಂದ ಜೀ ಹಾಗೂ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಉಪಸ್ಥಿತರಿರುವರು.

ಸಂಜೆಯ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಕಂಬಳ ಸಮಿತಿ ಗೌರವಾಧ್ಯಕ್ಷ ಎಂಆರ್‌ಜಿ ಗ್ರೂಪ್‌ ಚೇರ್ಮನ್‌ ಕೆ. ಪ್ರಕಾಶ್‌ ಶೆಟ್ಟಿ ವಹಿಸಲಿದ್ದು, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿಸೂರ್ಯ, ಸಂಸದ ನಳಿನ್‌ ಕುಮಾರ್‌ ಕಟೀಲು, ಮುಖಂಡರಾದ ಸಿ.ಟಿ. ರವಿ ಮತ್ತಿತರರು ಪಾಲ್ಗೊಳ್ಳುವರು.

ಆರು ವಿಭಾಗ
ಕನೆಹಲಗೆ, ಅಡ್ಡ ಹಲಗೆ, ಹಗ್ಗ ಹಿರಿಯ, ನೇಗಿಲು ಹಿರಿಯ, ಹಗ್ಗ ಕಿರಿಯ ಮತ್ತು ನೇಗಿಲು ಕಿರಿಯ ಹೀಗೆ 6 ವಿಭಾಗಗಳಲ್ಲಿ ಬಹುಮಾನಗಳಿದ್ದು, ಸುಮಾರು 150 ಜೋಡಿ ಕೋಣಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಚೌಟ ತಿಳಿಸಿದರು. ಕಂಬಳದ ಬಗ್ಗೆ ವಿದ್ಯಾರ್ಥಿಗಳು, ಯುವಜನರಲ್ಲಿ ಅರಿವು ಮೂಡಿಸಲು ವಿವಿಧ ಸ್ಪರ್ಧೆಗಳನ್ನೂ ಆಯೋ ಜಿಸಲಾಗಿದೆ. ಈ ಬಾರಿ ಕೋಣಗಳನ್ನು ಕರೆಗೆ ಇಳಿಸಲು ಟೈಮರ್‌ ಅಳವಡಿಸಿದ್ದು, 24 ಗಂಟೆಯೊಳಗಾಗಿ ಕಂಬಳ ಮುಗಿಸಲು ಸಿದ್ಧತೆ ಮಾಡಲಾಗಿದೆ ಎಂದು ಸಮಿತಿಯ ಗೌರವ ಸಲಹೆಗಾರ ವಿಜಯ್‌ ಕುಮಾರ್‌ ಕಂಗಿನಮನೆ ವಿವರಿಸಿದರು.
ಸಮಿತಿ ಪ್ರಧಾನ ಕಾರ್ಯದರ್ಶಿ ಸುಜಿತ್‌ ಪ್ರತಾಪ್‌, ಸಂಚಾಲಕ ಸಾಂತ್ಯಗುತ್ತು ಸಚಿನ್‌ ಶೆಟ್ಟಿ, ಕೋಶಾಧಿಕಾರಿ ತಲಪಾಡಿ ದೊಡ್ಡಮನೆ ಪ್ರೀತಮ್‌ ರೈ, ಉಪಾಧ್ಯಕ್ಷರಾದ ಸಂಜಯ್‌ ಪ್ರಭು, ಈಶ್ವರ್‌ ಪ್ರಸಾದ್‌ ಶೆಟ್ಟಿ, ಅಜಿತ್‌ ಬೋಪಯ್ಯ ಉಪಸ್ಥಿತರಿದ್ದರು.

ಕಂಬಳ ಕಾವೇರುವುದು ರಾತ್ರಿ
ಹೊರ ಜಿಲ್ಲೆಗಳ ಕಂಬಳಾಸಕ್ತರು ಕಂಬಳ ಪ್ರಕ್ರಿಯೆಯ ಸೂಕ್ತ ಮಾಹಿತಿ ಇಲ್ಲದ ಕಾರಣ ಸಾಮಾನ್ಯವಾಗಿ ಮಧ್ಯಾಹ್ನದ ವೇಳೆಗೆ ಆಗಮಿಸುತ್ತಾರೆ. ಆದರೆ ಆಗ ವಿಶೇಷ ಏನೂ ಇರದು. ರಾತ್ರಿ ವೇಳೆಗೆ ಕಂಬಳದ ನಿರ್ಣಾಯಕ ಓಟಗಳು ನಡೆಯುವುದರಿಂದ ಅದೇ ಸೂಕ್ತ ಸಮಯ ಎಂದು ಕ್ಯಾ| ಬೃಜೇಶ್‌ ಚೌಟ ತಿಳಿಸಿದ್ದಾರೆ.

ಟಾಪ್ ನ್ಯೂಸ್

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

eart

Kutch; 3.2 ತೀವ್ರತೆಯ ಭೂ ಕಂಪನ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

crime (2)

Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Bantwal: ಸಾಮಾನ್ಯ ಸೈಕಲನ್ನೇ ಎಲೆಕ್ಟ್ರಿಕ್‌ ಆಗಿ ಪರಿವರ್ತಿಸಿದ ಬಾಲಕ!

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

1-blur

Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಅಪರಾಧಿ ಹಿತೇಶ್‌ ಶೆಟ್ಟಿಗಾರ್‌ಗೆ ಮರಣ ದಂಡನೆ ಶಿಕ್ಷೆ

Mangaluru: ಅಪರಾಧಿ ಹಿತೇಶ್‌ ಶೆಟ್ಟಿಗಾರ್‌ಗೆ ಮರಣ ದಂಡನೆ ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ

1

Bantwal: ಸಾಮಾನ್ಯ ಸೈಕಲನ್ನೇ ಎಲೆಕ್ಟ್ರಿಕ್‌ ಆಗಿ ಪರಿವರ್ತಿಸಿದ ಬಾಲಕ!

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.