Ujjwala: ಉಜ್ವಲ 2ನೇ ಹಂತಕ್ಕೆ 1,650 ಕೋಟಿ ರೂ.: ಪ್ರಧಾನಿ ನೇತೃತ್ವದ ಸಂಪುಟ ಸಭೆ ನಿರ್ಧಾರ
75 ಲಕ್ಷ ಮಂದಿಗೆ ಎಲ್ಪಿಜಿ ಉಚಿತ ಸಂಪರ್ಕ
Team Udayavani, Sep 14, 2023, 1:28 AM IST
ಹೊಸದಿಲ್ಲಿ: ಕೇಂದ್ರ ಸರಕಾರದ ಮಹತ್ವಾ ಕಾಂಕ್ಷಿ ಯೋಜನೆ ಉಜ್ವಲದ ವಿಸ್ತರಣೆಗೆ ನಿರ್ಧರಿಸಲಾಗಿದ್ದು, ಇನ್ನೂ 75 ಲಕ್ಷ ಮಂದಿಗೆ ಉಚಿತ ಎಲ್ಪಿಜಿ ಸಂಪರ್ಕ ನೀಡಲು ಮುಂದಾಗಿದೆ. ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಇದರ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ.
ಬುಧವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. 2ನೇ ಹಂತದ ಪ್ರಧಾನಮಂತ್ರಿ ಉಜ್ವಲ ಯೋಜನೆ(ಪಿಎಂಯುವೈ)ಗಾಗಿ 1,650 ಕೋ. ರೂ. ಅನುದಾನ ನೀಡಲು ತೀರ್ಮಾನಿಸಲಾಗಿದೆ. ಈ ಹಣವನ್ನು ಮುಂದಿನ 3 ವರ್ಷಗಳ ವರೆಗೆ ಬಳಸಬಹುದಾಗಿದೆ.
ಈಗಿರುವ ನಿಯಮಾವಳಿಗಳಂತೆಯೇ ಉಜ್ವಲ ಫಲಾನುಭವಿಗಳಿಗೆ ಉಚಿತವಾಗಿ ಒಂದು ಸಿಲಿಂಡರ್ ಮತ್ತು ಸ್ಟೌ ನೀಡಲಾಗುತ್ತದೆ ಎಂದು ಸಂಪುಟ ಸಭೆ ಬಳಿಕ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಅಲ್ಲದೆ, ಯೋಜನೆಯ ಫಲಾನುಭವಿಗಳಿಗೆ ವರ್ಷಕ್ಕೆ 200 ರೂ. ಸಬ್ಸಿಡಿ ಸಹಿತವಾಗಿ 12 ಸಿಲಿಂಡರ್ಗಳನ್ನು ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಈಗ 75 ಲಕ್ಷ ಫಲಾನುಭವಿಗಳು ಸೇರ್ಪಡೆಯಾದರೆ, ಒಟ್ಟಾರೆಯಾಗಿ 10.35 ಕೋಟಿ ಮಂದಿ ಇದರ ಪ್ರಯೋಜನ ಪಡೆದಂತಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.