ಪ್ರವಾಹ ಸಂತ್ರಸ್ತರ ನೆರವಿಗೆ 195 ಕೋಟಿ ರೂ. ಬಿಡುಗಡೆ
Team Udayavani, Aug 19, 2019, 9:06 PM IST
ಬೆಂಗಳೂರು : ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು, ಪರಿಹಾರ ಕಾರ್ಯಗಳಿಗೆ ಹಾಗೂ ನೆರೆ ಸಂತ್ರಸ್ತರಿಗೆ ಬಟ್ಟೆ ಬರೆ ಮತ್ತಿತರ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಒಟ್ಟು 195 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
ರಾಜ್ಯದಲ್ಲಿ ಪ್ರವಾಹ ಪೀಡಿತ ತಾಲ್ಲೂಕುಗಳಲ್ಲಿ ಬಾಧಿತ ಸಂತ್ರಸ್ತರಿಗೆ ಬಟ್ಟೆ ಬರೆ ಹಾಗೂ ದಿನ ಬಳಕೆಯ ವಸ್ತುಗಳಿಗಾಗಿ ಪ್ರತಿ ಕುಟುಂಬಕ್ಕೆ 10 ಸಾವಿರ ರೂ. ಗಳಂತೆ ವಿತರಿಸಲು, ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ ರಾಜ್ಯ ಸರ್ಕಾರದ ಹೆಚ್ಚುವರಿ ಪಾಲಿನ ಅನುದಾನದಿಂದ 80 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ.
ಅಲ್ಲದೆ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಯನ್ನು ನಿರ್ವಹಿಸಲು ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು 115 ಕೋಟಿ ರೂ. ಅನುದಾನವನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕೋಟಿ ನೆರವು ಹಸ್ತಾಂತರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ನೆರೆಪೀಡಿತ ಪ್ರದೇಶಗಳಿಗೆ 25 ಕೋಟಿ ಮೊತ್ತವನ್ನು ಘೋಷಿಸಿದ್ದು ಇದರಂತೆ ಇಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ವಿಧಾನಸೌಧದಲ್ಲಿ ಪರಿಹಾರ ಮೊತ್ತವನ್ನು ಹಸ್ತಾಂತರಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.