Kolar: ವಸತಿ ಶಾಲೆಯಲ್ಲಿ ಊಟ ಸೇವಿಸಿ 21 ಮಕ್ಕಳು ಅಸ್ವಸ್ಥ
Team Udayavani, Aug 9, 2024, 8:34 PM IST
ಕೋಲಾರ: ವಸತಿ ಶಾಲೆಯಲ್ಲಿ ಊಟ ಸೇವಿಸಿದ 21 ಮಂದಿ ಬಾಲಕರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಅಮ್ಮನಲ್ಲೂರು ಗ್ರಾಮದ ಸಮಾಜ ಕಲ್ಯಾಣ ಬಾಲಕರ ವಸತಿ ನಿಲಯದಲ್ಲಿ ನಡೆದಿದ್ದು, ಹಾಸ್ಟೆಲ್‌ನ ವಾರ್ಡನ್ ನರಸಿಂಹಯ್ಯ ಅವರನ್ನು ಅಮಾನತು ಮಾಡಲಾಗಿದೆ.
ಅಮ್ಮನಲ್ಲೂರು ಸಮಾಜ ಕಲ್ಯಾಣ ಹಾಸ್ಟೆಲ್‌ನಲ್ಲಿದ್ದ 21 ಮಂದಿ ಮಕ್ಕಳು ಬೆಳಗ್ಗೆ ತಿಂಡಿಗಾಗಿ ಮಾಡಿದ್ದ ದೋಸೆ ಮತ್ತು ಚಟ್ನಿಯನ್ನು ತಿಂದು ಶಾಲೆಗೆ ತೆರಳಿದ್ದರು. ಶಾಲೆಗೆ ಹೋಗುತ್ತಿದ್ದಂತೆಯೇ ಮಕ್ಕಳಲ್ಲಿ ವಾಂತಿ ಕಾಣಿಸಿಕೊಂಡಿದೆ. ಗಾಬರಿಯಾದ ಶಾಲಾ ಶಿಕ್ಷಕರು 21 ಮಕ್ಕಳನ್ನು ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು ಅವರಲ್ಲಿ ತೀವ್ರ ಅಸ್ವಸ್ಥರಾದ ಐವರನ್ನು ಚಿಂತಾಮಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ತಿಂಡಿ ಸೇವಿಸಿದ್ದ ಅಡುಗೆ ಸಹಾಯಕಿಗೂ ವಾಂತಿಯಾಗಿದೆ. ಹಾಸ್ಟೆಲ್ ವಾರ್ಡನ್ ರಜೆ ವೇಳೆ ಅಡುಗೆ ಸಿಬ್ಬಂದಿ ಜವಾಬ್ದಾರಿ ಹೊತ್ತಿದ್ದರು ಎನ್ನಲಾಗಿದೆ.
ಆಸ್ಪತ್ರೆಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಧಾವಿಸಿ ಮಕ್ಕಳ ಆರೋಗ್ಯ ವಿಚಾರಿಸಿದರು. ಬಳಿಕ ವಾರ್ಡನ್ ಅವರನ್ನು ಅಮಾನತು ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Viral: ಸೆ**ಕ್ಸ್ ಗಾಗಿ 65ರ ಮುದುಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
Deepawali: ಬಾಂಬಿನ ಸದ್ದು ಮತ್ತು ಅಪ್ಪನ ಗುದ್ದು!
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Katapady: ಹಟ್ಟಿಗೊಬ್ಬರ ಖರೀದಿ ಹೆಸರಲ್ಲಿ ಮೋಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.