ಭೂ ಸ್ವಾಧೀನ ಪರಿಹಾರಕ್ಕೆ 2500 ಕೋ. ರೂ.: ಸಿಎಂ
Team Udayavani, Sep 28, 2021, 11:15 PM IST
ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಅನುಷ್ಠಾನಕ್ಕೆ ಭೂಸ್ವಾಧೀನ ಪ್ರಕ್ರಿಯೆ ಕೊನೆಯ ಹಂತದಲ್ಲಿರುವ ಪ್ರಕರಣಗಳಿಗೆ ಕೂಡಲೇ ಪರಿಹಾರ ಪಾವತಿಸಲು, ಪುನರ್ ವಸತಿ ಕೇಂದ್ರಗಳ ಸ್ಥಾಪನೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ 2500 ಕೋಟಿ ರೂ. ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಆಲಮಟ್ಟಿ ಹಿನ್ನೀರಿನಿಂದ ಮುಳುಗಡೆಯಾಗುವ 20 ಗ್ರಾಮಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಕೃಷ್ಣ ಭಾಗ್ಯ ಜಲ ನಿಗಮ ಕಚೇರಿಯನ್ನು ಆಲಮಟ್ಟಿಗೆ ವರ್ಗಾಯಿಸಲು ಸೂಚನೆ ನೀಡಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಲು ಹೆಚ್ಚುವರಿ ಸಿಬಂದಿ ಮತ್ತು ಹೆಚ್ಚಿನ ಸಂಖ್ಯೆಯ ಸರ್ವೇಯರುಗಳನ್ನು ಬಳಸಿ ಸರ್ವೇ ಮಾಡಲು ಸೂಚಿಸಲಾಯಿತು ಎಂದು ತಿಳಿಸಿದರು.
ಇದನ್ನೂ ಓದಿ:ಆಯುಧಪೂಜೆ ವೇಳೆಗೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ:ಡಿ.ಕೆ.ಶಿವಕುಮಾರ್
ಕೃಷ್ಣಾ ಮೇಲ್ದಂಡೆ ಹಂತ 1 ಮತ್ತು 2ರಡಿ 6.22 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿದ್ದರೂ, ಕಾಲುವೆಯ ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲ. ರೈತರ ಜಮೀನುಗಳಿಗೆ ನೀರು ಹರಿಯಬೇಕು. ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.