28 ಸ್ಥಾನ ಭರ್ತಿ: 6 ಖಾತೆ ಬಿಎಸ್‌ವೈ ಬಳಿ
Team Udayavani, Feb 11, 2020, 3:09 AM IST
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಆರು ತಿಂಗಳೊಳಗೆ ಸಚಿವ ಸಂಪುಟದ 28 ಸ್ಥಾನಗಳು ಭರ್ತಿಯಾಗಿವೆ. ಇನ್ನು ಆರು ಸ್ಥಾನ ಮಾತ್ರ ಖಾಲಿ ಉಳಿದಿವೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿ ಹಣಕಾಸು, ಇಂಧನ, ಬೆಂಗಳೂರು ಅಭಿವೃದ್ಧಿ ಸೇರಿ ಆರಕ್ಕೂ ಹೆಚ್ಚು ಖಾತೆಗಳಿವೆ.
ಜೂನ್‌ವರೆಗೆ ಬಹುತೇಕ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸಾಧ್ಯತೆ ಕಡಿಮೆಯಿದ್ದು, ವಿಧಾನಪರಿಷತ್‌ನ 12 ಸ್ಥಾನಗಳು ಜೂನ್ ಅಂತ್ಯಕ್ಕೆ ತೆರವಾಗಲಿದ್ದು ಆ ನಂತರ ಸಂಪುಟ ಪುನಾರಚನೆ ಆಗಬಹುದು ಎಂದು ಹೇಳಲಾಗಿದೆ.
ಈ ಮಧ್ಯೆ, ಖಾತೆ ಹಂಚಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಎಸ್.ಟಿ.ಸೋಮಶೇಖರ್, ಮೊದಲ ಬಾರಿಗೆ ಸಹಕಾರ ವಲಯದ ಸಚಿವನಾಗುವ ಅವಕಾಶ ಸಿಕ್ಕಿರುವುದು ಸಂತೋಷ ತಂದಿದೆ. ಇದಕ್ಕಾಗಿ ಕ್ಷೇತ್ರದ ಜನತೆ ಹಾಗೂ ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಯಾವ ಖಾತೆ ಬೇಕು ಎಂದು ನಾನು ಮುಖ್ಯಮಂತ್ರಿಯವರ ಬಳಿ ಕೇಳಿರಲಿಲ್ಲ. ಅವರೇನಾದರೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಬೇಕೆ ಎಂದು ಕೇಳಿದ್ದರೆ, ನಾನು ಹೇಳುತ್ತಿದ್ದೆ. ಯಾವ ಖಾತೆ ಕೊಟ್ಟರೂ ನಿಭಾಯಿಸುವುದಾಗಿ ಹೇಳಿದ್ದೆ. ಅದರಂತೆ ಮುಖ್ಯಮಂತ್ರಿಗಳು ಸಹಕಾರ ಖಾತೆ ನೀಡಿದ್ದಾರೆ. ಸಹಕಾರ ವಲಯದಲ್ಲಿ ಅನುಭವವಿದ್ದು, ನಿಭಾಯಿಸುತ್ತೇನೆ ಎಂದು ತಿಳಿಸಿದರು.
ಬೈರತಿ ಬಸವರಾಜು, ನನಗೆ ನಗರಾಭಿವೃದ್ಧಿಯಂತಹ ದೊಡ್ಡ ಖಾತೆ ನೀಡಿದ್ದು, ಪ್ರಾಮಾಣಿಕವಾಗಿ, ಸಮರ್ಥವಾಗಿ ಮುನ್ನಡೆಸಿಕೊಂಡು ಹೋಗುತ್ತೇನೆ. ನಾನು ಇಂತಹ ಖಾತೆಯೇ ಬೇಕು ಎಂದು ಒತ್ತಡ ಹಾಕಿರಲಿಲ್ಲ. ಕೆಲವು ಕಾರಣಗಳಿಂದ ಖಾತೆ ಹಂಚಿಕೆ ವಿಳಂಬವಾಯಿತು. ಒಂದು ಮನೆ ಎಂದ ಮೇಲೆ ಸಣ್ಣ ಪುಟ್ಟದ್ದೆಲ್ಲಾ ಇರುತ್ತವೆ ಎಂದು ಹೇಳಿದರು.
ಕುಮಟಳ್ಳಿಗೆ ಸಚಿವ ಸ್ಥಾನ ಏಕಿಲ್ಲ?
ವಿಜಯಪುರ: ಬಿಜೆಪಿ ಅ ಧಿಕಾರಕ್ಕೆ ತರಲು ಶಾಸಕ ಸ್ಥಾನ ತ್ಯಾಗ ಮಾಡಿ, ಮತ್ತೆ ಗೆದ್ದಿರುವ ಎಲ್ಲ ಅರ್ಹ ಶಾಸಕರಲ್ಲಿ ಮಹೇಶ ಕುಮಟಳ್ಳಿ ಹೊರತಾಗಿ ಎಲ್ಲರನ್ನೂ ಮಂತ್ರಿ ಮಾಡಲಾಗಿದೆ. ಕುಮಟಳ್ಳಿ ಅವರನ್ನು ಕಡೆಗಣಿಸಿದ್ದು ಏಕೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪ್ರಶ್ನಿಸಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಇದರಿಂದ ತಪ್ಪು ಸಂದೇಶ ರವಾನೆ ಆಗಲಿದೆ ಎಂದಿದ್ದಾರೆ.
ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ಸಂಪುಟ ವಿಸ್ತರಣೆ ಬಳಿಕ ಪ್ರಾದೇಶಿಕ ಅಸಮಾನತೆ ಕಾರಣವಾಗಿದೆ. ಈಗಾಗಲೇ ಬೆಂಗಳೂರು, ಬೆಳಗಾವಿ ಜಿಲ್ಲೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಮತ್ತೆ ಕೆಲವರಿಗೆ ನೂರಕ್ಕೆ ನೂರರಷ್ಟು ಮಂತ್ರಿ ಮಾಡುವ ಭರವಸೆ ನೀಡಲಾಗುತ್ತಿದೆ. ಮತ್ತೂಂದೆಡೆ ತ್ಯಾಗ ಮಾಡಿದ ಶಾಸಕ ಕುಮಟಳ್ಳಿ ಅವರನ್ನು ಕಡೆಗಣಿಸಲಾಗಿದೆ. ಮುಂಬೈ ಕರ್ನಾಟಕದ ವಿಜಯಪುರ ಜಿಲ್ಲೆ, ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಯ ಶಾಸಕರನ್ನು ಕಡೆಗಣಿಸಲಾಗಿದೆ ಎಂದರು.
ಇದರಿಂದಾಗಿ ಪ್ರಾದೇಶಿಕ ಅಸಮಾನತೆ ಹೆಚ್ಚಿದೆ. ಕೆಲವು ಶಾಸಕರು ಈ ಕುರಿತು ನನ್ನೊಂದಿಗೆ ಮಾತನಾಡಿದ್ದಾರೆ. ಇಂಥ ಸ್ಥಿತಿಯಲ್ಲಿ ಬೆಳಗಾವಿ ಜಿಲ್ಲೆಯ ಮತ್ತೂಬ್ಬ ಶಾಸಕರನ್ನು ನೂರಕ್ಕೆ ನೂರರಷ್ಟು ಮಂತ್ರಿ ಮಾಡುವ ಭರವಸೆ ನೀಡುವುದು ಎಷ್ಟು ಸರಿಯಲ್ಲ. ಹೀಗಾಗಿ ಶಾಸಕಾಂಗ ಸಭೆ ಕರೆದು ಶಾಸಕರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಲಿ. ಬಜೆಟ್ ಪೂರ್ವದಲ್ಲೇ ಶಾಸಕಾಂಗ ಸಭೆ ಕರೆಯಬೇಕು ಎಂದು ಪತ್ರಬರೆದಿದ್ದೇನೆ ಎಂದರು.
ನೂತನ ಸಚಿವರಿಗೆ ಹಂಚಿಕೆಯಾದ ಖಾತೆ
ರಮೇಶ್ ಜಾರಕಿಹೊಳಿ- ಜಲ ಸಂಪನ್ಮೂಲ
ಎಸ್.ಟಿ. ಸೋಮಶೇಖರ್- ಸಹಕಾರ
ಬೈರತಿ ಬಸವರಾಜು- ನಗರಾಭಿವೃದ್ಧಿ (ಬೆಂಗಳೂರು ಅಭಿವೃದ್ಧಿ ಹೊರತುಪಡಿಸಿ)
ಕೆ.ಗೋಪಾಲಯ್ಯ- ಸಣ್ಣ ಕೈಗಾರಿಕೆ ಮತ್ತು ಸಕ್ಕರೆ
ಶಿವರಾಮ ಹೆಬ್ಬಾರ್- ಕಾರ್ಮಿಕ
ಡಾ.ಕೆ. ಸುಧಾಕರ್- ವೈದ್ಯಕೀಯ ಶಿಕ್ಷಣ
ಆನಂದ್ ಸಿಂಗ್- ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರ
ಬಿ.ಸಿ.ಪಾಟೀಲ್- ಅರಣ್ಯ
ಕೆ.ಸಿ.ನಾರಾಯಣಗೌಡ- ಪೌರಾಡಳಿತ, (ಹೆಚ್ಚುವರಿಯಾಗಿ ತೋಟಗಾರಿಕೆ, ರೇಷ್ಮೆ)
ಶ್ರೀಮಂತ ಪಾಟೀಲ್- ಜವಳಿ
ಹೆಚ್ಚುವರಿ ಖಾತೆಗಳು
ಗೋವಿಂದ ಕಾರಜೋಳ- ಸಮಾಜ ಕಲ್ಯಾಣ
ಡಾ.ಸಿ.ಎನ್.ಅಶ್ವತ್ಥ ನಾರಾಯಣ- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ
ಜಗದೀಶ ಶೆಟ್ಟರ್- ಸಾರ್ವಜನಿಕ ಉದ್ದಿಮೆ
ಬಿ.ಶ್ರೀರಾಮುಲು- ಹಿಂದುಳಿದ ವರ್ಗಗಳ ಕಲ್ಯಾಣ
ಸಿ.ಟಿ.ರವಿ- ಯುವಜನ ಸಬಲೀಕರಣ ಮತ್ತು ಕ್ರೀಡೆ
ಪ್ರಭು ಚೌಹಾಣ್- ಅಲ್ಪಸಂಖ್ಯಾತರ ಕಲ್ಯಾಣ, ಹಜ್, ವಕ್ಫ್
ಬಿಎಸ್‌ವೈ ಬಳಿಯಿರುವ ಖಾತೆಗಳು: ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಹಣಕಾಸು, ಬೆಂಗಳೂರು ಅಭಿವೃದ್ಧಿ, ಇಂಧನ, ಗುಪ್ತಚರ, ಯೋಜನೆ, ಮಾಹಿತಿ ಹಾಗೂ ಸಾರ್ವಜನಿಕ ಸಂಪರ್ಕ ಖಾತೆ ಸೇರಿದಂತೆ ಹಂಚಿಕೆಯಾಗದ ಖಾತೆಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ
Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.