Karnataka: ವಿಕಲಚೇತನರ ಶ್ರೇಯೋಭಿವೃದ್ಧಿಗೆ 284 ಕೋ. ರೂ. ಅನುದಾನ
7 ಜಿಲ್ಲೆಗಳಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ನಿರ್ಮಿಸಲು ಕ್ರಮ: ಸಿಎಂ
Team Udayavani, Dec 4, 2023, 12:23 AM IST
ಬೆಂಗಳೂರು: ರಾಜ್ಯದಲ್ಲಿ 2011ರ ಜನ ಗಣತಿ ಪ್ರಕಾರ 13.24 ಲಕ್ಷ ಮಂದಿ ವಿಕಲಚೇತನರಿದ್ದು ಅವರ ಶ್ರೇಯೋಭಿವೃದ್ಧಿಗೆ ರಾಜ್ಯ ಸರಕಾರ 284 ಕೋಟಿ ರೂ.ಅನುದಾನ ತೆಗೆದಿರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಹಿಳೆಯರ ಮತ್ತು ಮಕ್ಕಳ ಅಭಿ ವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ – 2023ರಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ವರ್ಷ ಏಳು ಜಿಲ್ಲೆಗಳಲ್ಲಿ ಹತ್ತು ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ವಿಕಲಚೇತನರ ಶೈಕ್ಷಣಿಕ, ವೈದ್ಯಕೀಯ, ಪುನರ್ವಸತಿ, ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿಗಾಗಿ 258.27 ಕೋಟಿ ರೂ. ಇಡಲಾಗಿದೆ. ಮರಣ ಹೊಂದಿದ ವಿಕಲಚೇತನರಿಗೆ ಪರಿಹಾರವನ್ನು 50 ಸಾವಿರದಿಂದ 1 ಲಕ್ಷಕ್ಕೆ ಏರಿಸಲಾಗಿದೆ. ವಿಕಲಚೇತನರಿಗೆ ಶೇ. 5ರ ಮೀಸಲಾತಿಯನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಇತ್ತೀಚೆಗೆ ನಡೆಸಲಾದ ಜನಸ್ಪಂದನ ಕಾರ್ಯಕ್ರಮಕ್ಕೆ ಬಹಳಷ್ಟು ಸಂಖ್ಯೆಯಲ್ಲಿ ವಿಕಲಚೇತನರು ಆಗಮಿಸಿ ದ್ದರು. ಉದ್ಯೋಗ, ಶಿಕ್ಷಣ ಹಾಗೂ ವಾಹನ ಖರೀದಿಗೆ ನೆರವು ಸೇರಿದಂತೆ ಹಲವು ಬೇಡಿಕೆಗಳಿಗೆ ಸಂಬಧಪಟ್ಟ ಇಲಾಖೆಯು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ವಿಕಲಚೇತನರಿಗೆ ಪ್ರಸಕ್ತ ಸಾಲಿನಲ್ಲಿ 4 ಸಾವಿರ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ನವಚೇತನ ಕಿರು ಹೊತ್ತಿಗೆ ಯೋಜನೆಗಳ ಕರಪತ್ರ, ಕಿರುಚಿತ್ರ, 2024ರ ಸಾಲಿನ ಬ್ರೈಲ್ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಕಲಚೇತನ ಸಂಸ್ಥೆಗಳಿಗೆ ಹಾಗೂ ವಿಶೇಷ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ| ಜಿ.ಸಿ. ಪ್ರಕಾಶ್, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಿರ್ದೇಶಕ ಎ.ಎನ್. ಸಿದ್ದೇಶ್ವರ, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ, ಕರ್ನಾಟಕ ಬೌದ್ಧಿಕ ವಿಕಲಚೇತನ ಮಕ್ಕಳ ಪಾಲಕರ ಸಂಸ್ಥೆಯ ಮಾಜಿ ಅಧ್ಯಕ್ಷ ಗಡ್ಕರಿ ಜೆ.ಪಿ. ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.