Kannada; ಕರವೇ ನಾರಾಯಣ ಗೌಡ ಸಹಿತ 29 ಮಂದಿಗೆ ಜಾಮೀನು
Team Udayavani, Jan 6, 2024, 11:48 PM IST
ಬೆಂಗಳೂರು: ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ನಡೆಸಿದ ಪ್ರತಿಭಟನೆಯಲ್ಲಿ ಜೈಲು ಸೇರಿದ್ದ ಕರ್ನಾಟಕ ರಕ್ಷಣ ವೇದಿಕೆ ರಾಜ್ಯಾ ಧ್ಯಕ್ಷ ಟಿ.ಎ.ನಾರಾಯಣ ಗೌಡ ಸಹಿತ ಒಟ್ಟು 29 ಕರವೇ ಕಾರ್ಯಕರ್ತರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಶನಿವಾರ ಜಾಮೀನು ಮಂಜೂರು ಮಾಡಿದೆ. ಆದರೆ ಅವರು ಸೋಮವಾರದವರೆಗೆ ಜೈಲಿನಿಂದ ಬಿಡುಗಡೆಯಾಗುವುದಿಲ್ಲ.
ನಾರಾಯಣ ಗೌಡ ಪರ ವಕೀಲರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಸರಕಾರಿ ಅಭಿಯೋಜಕರ ಅಭಿಪ್ರಾಯ ಕೇಳಿತ್ತು. ಅವರು ಜ.2ರಂದು ತಮ್ಮ ಅಭಿಪ್ರಾಯವನ್ನು ದಾಖಲಿಸಿದ್ದರು.
ನಾರಾಯಣ ಗೌಡರ ಹಳೆ ಕೇಸ್ ಕೆದಕುತ್ತಿರುವ ಪೊಲೀಸ್ ಇಲಾಖೆ ?
ನಾರಾಯಣ ಗೌಡರಿಗೆ ಜಾಮೀನು ಮಂಜೂರಾದರೂ ಮತ್ತೆ ಸಂಕಷ್ಟ ಎದುರಾಗುವ ಗುಸುಗುಸು ಕೇಳಿ ಬರುತ್ತಿವೆ. ಕುಮಾರಸ್ವಾಮಿ ಲೇ ಔಟ್ ಹಾಗೂ ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದೆ ಎನ್ನಲಾದ ಹಳೆ ಪ್ರಕರಣಗಳಲ್ಲಿ ವಾರಂಟ್ ಮೇಲೆ ಮತ್ತೆ ನಾರಾಯಣ ಗೌಡರನ್ನು ಪೊಲೀ ಸರು ವಶಕ್ಕೆ ಪಡೆಯಲು ಸದ್ದಿಲ್ಲದೇ ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಆದರೆ ಹಿರಿಯ ಪೊಲೀಸ್ ಅಧಿಕಾರಿಗಳು ಈ ವಿಚಾರವನ್ನು ದೃಢಪಡಿಸಿಲ್ಲ. ಮತ್ತೂಂದೆಡೆ ನಾರಾಯಣ ಗೌಡ ವಿರುದ್ಧ ವಿವಿಧ ಠಾಣೆಗಳಲ್ಲಿ ದಾಖಲಾ ಗಿದ್ದ ಹಳೆ ಪ್ರಕರಣಗಳನ್ನು ಕೆದಕಲು ಆರಂಭಿಸಲಾಗಿದೆ ಎಂಬ ಮಾತುಗಳೂ ಇಲಾಖೆಯೊಳಗೆ ಕೇಳಿ ಬಂದಿದೆ.
ವಾಣಿಜ್ಯ ಮಳಿಗೆಗಳಲ್ಲಿ ಶೇ.60 ರಷ್ಟು ಗಾತ್ರದ ಕನ್ನಡ ಅಕ್ಷರಗಳ ನಾಮಫಲಕ ಇರಬೇಕು ಎಂಬುದಾಗಿ ಕರವೇ ಕಾರ್ಯಕರ್ತರು ಹಲವು ಅಂಗಡಿ-ಮುಂಗಟ್ಟುಗಳ ನಾಮಫಲಕ ಕಿತ್ತೆಸೆದಿದ್ದರು. ಆ ವೇಳೆ ಮಾಲ್‌ಆಫ್ ಏಷಿಯಾವನ್ನೇ ಕರವೇ ಟಾರ್ಗೆಟ್ ಮಾಡಿರುವುದು ಚರ್ಚೆಗೆ ಗ್ರಾಸವಾಗಿ ಹಲವು ರೀತಿಯ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.