ಪಿಯು ವಿದ್ಯಾರ್ಥಿಗಳಿಗೆ ನ್ಯಾಯ ನೀಡುವ ಸವಾಲು
ಸಿಬಿಎಸ್‌ಇ, ಐಸಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದು ಹಿನ್ನೆಲೆ
Team Udayavani, Jun 3, 2021, 7:20 AM IST
ಬೆಂಗಳೂರು: ಸಿಬಿಎಸ್‌ಇ ಮತ್ತು ಐಸಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದಾದ ಬೆನ್ನಲ್ಲೇ ರಾಜ್ಯ ಪಠ್ಯಕ್ರಮದ ಪಿಯುಸಿ ವಿದ್ಯಾರ್ಥಿಗಳಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳುವ ಸವಾಲು ಪಿಯು ಮಂಡಳಿಗೆ ಎದುರಾಗಿದೆ.
2020-21ರಲ್ಲಿ ತರಗತಿ ಮತ್ತು ಪ್ರಾಯೋಗಿಕ ಅಭ್ಯಾಸಗಳು ಪೂರ್ಣ ಪ್ರಮಾಣದಲ್ಲಿ ಆಗಿಲ್ಲ. ಪೂರ್ವಸಿದ್ಧತೆ ಪರೀಕ್ಷೆ, ಘಟಕ ಪರೀಕ್ಷೆಗಳು ವ್ಯವಸ್ಥಿತವಾಗಿ ನಡೆದಿಲ್ಲ. ಪರೀಕ್ಷೆ ರದ್ದು ಮಾಡಿ, ನಿರ್ದಿಷ್ಟ ಮಾನದಂಡ ಅನುಸರಿಸಿ ಎಲ್ಲರನ್ನೂ ತೇರ್ಗಡೆ ಮಾಡಿದರೂ ಅಂಕಗಳ ಹಂಚಿಕೆ ಇಲಾಖೆಗೆ ಸವಾಲಾಗಲಿದೆ.
ಸಿಬಿಎಸ್‌ಇ ಮತ್ತು ಐಸಿಎಸ್‌ಇಗಳು ಆನ್‌ಲೈನ್ ತರಗತಿ ನಡೆಸಿವೆ. ತರಗತಿ ಪರೀಕ್ಷೆಗಳನ್ನೂ ನಡೆಸಿವೆ. ಅದಕ್ಕೆ ಪೂರಕವಾಗಿ ಮೌಲ್ಯಮಾಪನ ನಡೆಸಿ, ಫಲಿತಾಂಶ ಪ್ರಕಟಿಸಲಿವೆ. ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯ ಆಗದಂತೆ ಮಾರ್ಗೋಪಾಯ ಹುಡುಕುವುದೇ ಪಿಯು ಇಲಾಖೆಗೆ ಸವಾಲು.
ಪರೀಕ್ಷೆಗೆ ಒಲವು
ಪರೀಕ್ಷೆ ನಡೆಸುವ ಬಗ್ಗೆ ಒಲವು ಹೊಂದಿರುವ ಪ.ಪೂ. ಇಲಾಖೆ, ಜುಲೈ ಅಂತ್ಯ ಅಥವಾ ಆಗಸ್ಟ್ ವರೆಗೂ ಕಾಯಬಹುದು. ಪರೀಕ್ಷೆ ಇಲ್ಲದೆ ಎಲ್ಲರನ್ನೂ ಉತ್ತೀರ್ಣಗೊಳಿಸುವುದೇ ಆದಲ್ಲಿ, ಯಾರಿಗೂ ಅನ್ಯಾಯ ಆಗದಂತೆ ಹೇಗೆ ಮಾಡಬಹುದು ಮತ್ತು ಸಿಇಟಿ, ನೀಟ್, ಜೆಇಇ ವಿದ್ಯಾರ್ಥಿಗಳಿಗೆ ತೊಂದರೆ ಆಗದಂಥ ಮಾರ್ಗ ಹುಡುಕುತ್ತಿದ್ದೇವೆ ಎಂದು ಇಲಾಖೆಯ ಪರೀಕ್ಷಾ ವಿಭಾಗದ ಉಪನಿರ್ದೇಶಕ ಕೃಷ್ಣ ಪ್ರಸಾದ್ ಮಾಹಿತಿ ನೀಡಿದ್ದಾರೆ.
ನಿರಂತರ ಸಭೆ
ಹಲವು ರಾಜ್ಯಗಳು 12ನೇ ತರಗತಿ ಪರೀಕ್ಷೆ ಮುಂದೂಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಿರಂತರ ಸಭೆ ನಡೆಸಿದ್ದಾರೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಪದವಿಪೂರ್ವ ಇಲಾಖೆಯ ನಿರ್ದೇಶಕರ ಸಹಿತ ಇಲಾಖೆಯ ಪರೀಕ್ಷೆ ಮತ್ತು ಆಡಳಿತ ವಿಭಾಗದ ಅಧಿಕಾರಿಗಳು ಬುಧವಾರ ಆನ್‌ಲೈನ್ ಮೂಲಕ ಸಭೆ ನಡೆಸಿ ಪರೀಕ್ಷೆಯ ರದ್ದತಿ ಅಥವಾ ನಡೆಸುವ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ.
ಶೀಘ್ರ ಸೂಕ್ತ ತೀರ್ಮಾನ ತೆಗೆದು ಕೊಳ್ಳ ಲಾಗುತ್ತದೆ. ಪರೀಕ್ಷೆಗಳ ಬಗ್ಗೆ ಶಿಕ್ಷಕರು, ಶಿಕ್ಷಣ ತಜ್ಞರು ಮತ್ತು ಹೆತ್ತವರ ಜತೆ ಸಮಾಲೋಚನೆ ನಡೆಸುತ್ತಿದ್ದೇವೆ.
– ಎಸ್. ಸುರೇಶ್ ಕುಮಾರ್, ಶಿಕ್ಷಣ ಸಚಿವ
– ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.