Guest Lecturers: ಗೌರವಧನಕ್ಕೆ 3.86 ಕೋ.ರೂ. ಬಿಡುಗಡೆ
Team Udayavani, Feb 4, 2024, 12:43 AM IST
ಉಡುಪಿ: ಸರಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕ ರಿಗೆ ಗೌರವಧನ ಹಂಚಿಕೆಯಲ್ಲಿ ಕೊರತೆಯಾದ ಹಿನ್ನೆಲೆಯಲ್ಲಿ ಕಾಲೇಜುಗಳ ಪ್ರಾಂಶುಪಾಲರ ಪ್ರಸ್ತಾವನೆ ಆಧರಿಸಿ ರಾಜ್ಯ ಸರಕಾರ 3.86 ಕೋ.ರೂ. ಬಿಡುಗಡೆ ಮಾಡಿದೆ.
ಬೆಂಗಳೂರು ವಿಭಾಗದ 30 ಕಾಲೇಜು, ಮಂಗಳೂರು ವಿಭಾಗದ 11, ಧಾರವಾಡ ವಿಭಾಗದ 25, ಕಲಬುರಗಿ ವಿಭಾಗದ 33, ಮೈಸೂರು ವಿಭಾಗದ 11 ಹಾಗೂ ಶಿವಮೊಗ್ಗ ವಿಭಾಗದ 13 ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವ ಧನ ನೀಡುವಲ್ಲಿ ಕೊರತೆಯಾದ ಹಿನ್ನೆಲೆಯಲ್ಲಿ ಸರಕಾರವು ಅಗತ್ಯ ಅನುದಾನ ಬಿಡುಗಡೆ ಮಾಡಿದೆ.
ಮಂಗಳೂರು ವಿಭಾಗದ 11 ಕಾಲೇಜುಗಳಲ್ಲಿ ಕೊಡಗಿನ 2, ದ.ಕ.ದ 7 ಹಾಗೂ ಉಡುಪಿಯ 2 ಕಾಲೇಜುಗಳಿಗೆ 19.30 ಲಕ್ಷ ರೂ.
ಬಿಡುಗಡೆ ಮಾಡಲಾಗಿದೆ. ಅನುದಾನವನ್ನು ನಿಯಮಾನುಸಾರ ಅತಿಥಿ ಉಪನ್ಯಾಸಕರಿಗೆ ಪಾವತಿಸಬೇಕು. ಗೌರವಧನ ಪಾವತಿ ವಿಳಂಬ ಆಗದಂತೆ ಎಚ್ಚರ ವಹಿಸಲು ನಿರ್ದೇಶನ ನೀಡಿದೆ.
2023-24ನೇ ಸಾಲಿನ ಅತಿಥಿ ಉಪನ್ಯಾಸಕರ ಗೌರವಧನಕ್ಕಾಗಿ ಸರಕಾರ 196 ಕೋ.ರೂ. ಮೀಸಲಿಟ್ಟಿದೆ. ಈವರೆಗೂ 65 ಕೋ.ರೂ.ಗಳನ್ನು ಕಂತುಗಳಲ್ಲಿ ಬಿಡುಗಡೆ ಮಾಡಲಾಗಿದೆ. ಕೆಲವು ಕಾಲೇಜಿನ ಅತಿಥಿ ಉಪನ್ಯಾಸರಿಗೆ ಗೌರವಧನ ಸಿಗದೇ ಇರುವ ಬಗ್ಗೆ ಬಂದಿ ರುವ ದೂರು, ಕಾಲೇಜುಗಳ ಪ್ರಸ್ತಾವನೆ ಆಧಾರದಲ್ಲಿ ಹೊಸದಾಗಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.