Politics: 3 ಡಿಸಿಎಂ: ಕೈಯಲ್ಲೇ ಗರಂ  ಪಕ್ಷದೊಳಗೆ ಹೆಚ್ಚಿದ ಪರ-ವಿರೋಧ ಚರ್ಚೆ


Team Udayavani, Sep 18, 2023, 12:02 AM IST

CONGRESS FLAG IMP

ಬೆಂಗಳೂರು: ರಾಜ್ಯಕ್ಕೆ ಮೂವರು ಉಪಮುಖ್ಯಮಂತ್ರಿಗಳು ಬೇಕು ಎಂಬ ಸಚಿವ ಕೆ.ಎನ್‌. ರಾಜಣ್ಣ ಅವರ ಹೇಳಿಕೆಗೆ ಕಾಂಗ್ರೆಸ್‌ನಲ್ಲೇ ಪರ-ವಿರೋಧದ ಚರ್ಚೆಗಳು ಹುಟಿ ಕೊಂಡಿದ್ದು, ಈ ವಿಚಾರದಲ್ಲಿ ಹೈಕಮಾಂಡ್‌ ಆದೇಶ ಪಾಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಸರಕಾರ ರಚನೆಯ ಸಂದರ್ಭದಲ್ಲಿಯೇ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಯ ಬಗ್ಗೆ ಚರ್ಚೆಗಳು ನಡೆದಿದ್ದವು. ಡಾ| ಪರಮೇಶ್ವರ್‌ ಡಿಸಿಎಂ ಹುದ್ದೆಯ ಬೇಡಿಕೆ ಇಟ್ಟಿದ್ದರು.

“ನಾವು ಕೆಲಸ ಮಾಡಿದ್ದೇವೆ, ಕೂಲಿ ಕೇಳುತ್ತಿದ್ದೇವೆ’ ಎಂದಿದ್ದ ಡಿ.ಕೆ. ಶಿವಕುಮಾರ್‌ ಬಳಿಕ ಡಿಸಿಎಂ ಹುದ್ದೆಗೆ ತೃಪ್ತಿಪಟ್ಟುಕೊಂಡಿದ್ದರು. ಹೆಚ್ಚುವರಿ ಡಿಸಿಎಂ ಹುದ್ದೆಯ ಪ್ರಸ್ತಾವಗಳನ್ನೆಲ್ಲ ಬದಿಗೆ ಸರಿಸಿ ಒಂದೇ ಡಿಸಿಎಂ ಹುದ್ದೆ ಸಾಕು ಎಂಬುದನ್ನು ಶಿವಕುಮಾರ್‌ ಅವರೇ ಹೈಕಮಾಂಡ್‌ಗೆ ಮನವರಿಕೆ ಮಾಡಿದ್ದರು.

ಆದರೆ ಈಗ ಪರಮೇಶ್ವರ್‌ ಅಸ್ತ್ರವನ್ನೇ ತಿರುಗು ಬಾಣ ಮಾಡಿರುವ ಸಹಕಾರ ಸಚಿವ ಕೆ.ಎನ್‌. ರಾಜಣ್ಣ, ಇನ್ನೂ ಮೂರು ಡಿಸಿಎಂ ಹುದ್ದೆ ಸೃಷ್ಟಿ ಮಾಡಬೇಕು ಎಂದಿದ್ದಾರೆ. ಇದರ ಬೆನ್ನಲ್ಲೇ ಕೆಲವರು ಹೆಚ್ಚುವರಿ ಡಿಸಿಎಂ ಹುದ್ದೆ ಬೇಕು ಎನ್ನುತ್ತಿದ್ದರೆ, ಇನ್ನು ಹಲವರು ಬೇಕಿಲ್ಲ ಎಂದಿದ್ದಾರೆ.

ಡಿಸಿಎಂ ಶಿವಕುಮಾರ್‌ಗೇಕೆ ಬೇಸರ?

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಯಿಂದ ಶಿವಕುಮಾರ್‌ ಅವರಿಗೆ ಬೇಸರ ಆಗುವುದಿಲ್ಲವೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವ ರಾಜಣ್ಣ, “ಅವರಿಗೇಕೆ ಬೇಸರ ಆಗಬೇಕು? ಅವರು ಪಕ್ಷದ ಅಧ್ಯಕ್ಷರೂ ಆಗಿದ್ದಾರೆ, ಡಿಸಿಎಂ ಕೂಡ ಆಗಿದ್ದಾರೆ. ಅವರ ಸ್ಥಾನವನ್ನು ಯಾರೂ ಕೇಳಿಲ್ಲ, ಹೆಚ್ಚುವರಿಯಾಗಿ ಡಿಸಿಎಂ ಹುದ್ದೆ ಸೃಷ್ಟಿಸುವುದು ಸೂಕ್ತ ಎಂದಿದ್ದೇನೆ’ ಎಂದಿದ್ದಾರೆ.

ಹೈಕಮಾಂಡ್‌ ಆದೇಶ ಪಾಲಿಸುವೆ

ಹೆಚ್ಚುವರಿ ಡಿಸಿಎಂ ಹುದ್ದೆ ಕುರಿತ ಚರ್ಚೆಗೆ ಕಲಬುರಗಿಯಲ್ಲಿ ಧ್ವನಿಗೂಡಿಸಿರುವ ಸಿಎಂ ಸಿದ್ದರಾಮಯ್ಯ, “ಆಗ ಒಬ್ಬರೇ ಡಿಸಿಎಂ ಸಾಕು ಎನ್ನಲಾಗಿತ್ತು. ಈಗ ಕೆಲವರು ಮೂರು ಡಿಸಿಎಂ ಬೇಕು ಎನ್ನುತ್ತಿದ್ದಾರೆ. ನಾನು ಹೈಕಮಾಂಡ್‌ ಆದೇಶ ಪಾಲನೆ ಮಾಡುತ್ತೇನೆ’ ಎನ್ನುವ ಮೂಲಕ ಹೆಚ್ಚುವರಿ ಹುದ್ದೆ ಸೃಷ್ಟಿಗೆ ತಮ್ಮ ಒಪ್ಪಿಗೆ ಇದೆ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ.

ಡಿಸಿಎಂ ಶಿವಕುಮಾರ್‌ ಮಾತ್ರ ಇದಕ್ಕೆ ಪ್ರತಿಕ್ರಿಯೆ ನೀಡಿಲ್ಲ. ಈ ಮಧ್ಯೆ ಇದು ಡಿಸಿಎಂ ಶಿವಕುಮಾರ್‌ ಅವರನ್ನು ಗಲಿಬಿಲಿಗೊಳಿಸಲು ಸಿಎಂ ಸಿದ್ದರಾಮಯ್ಯ ಅವರೇ  ನಡೆಸಿರುವ ಚಿತಾವಣೆ ಎಂದು ವಿಪಕ್ಷ ಬಿಜೆಪಿ ಟೀಕಿಸಿದೆ.

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ

ಆವಶ್ಯಕತೆ ಇದೆಯೋ, ಇಲ್ಲವೋ ಎಂಬುದನ್ನು ಪಕ್ಷ ಅಂತಿಮವಾಗಿ ನಿರ್ಧರಿಸಬೇಕು. ಸಚಿವ ರಾಜಣ್ಣ  ಅವರು ಹೇಳಿದ ಮೇಲೆ ಚರ್ಚೆ ಆರಂಭವಾಗಬಹುದು. ಸಾಮರ್ಥ್ಯ ನೋಡಿ ಪಕ್ಷ ಡಿಸಿಎಂ ಮಾಡುತ್ತದೆ. ನಾನಂತೂ ಆಕಾಂಕ್ಷಿ ಅಲ್ಲ.

- ಸತೀಶ್‌ ಜಾರಕಿಹೊಳಿ, ಲೋಕೋಪಯೋಗಿ ಸಚಿವ

ಎಲ್ಲ ಸಮುದಾಯದವರು ಕೇಳುವುದಲ್ಲಿ ತಪ್ಪಿಲ್ಲ. ಮೂರೇಕೆ ಇನ್ನೂ ಐವತ್ತು ಮಾಡಲಿ. ಅಂತಿಮ ತೀರ್ಮಾನವನ್ನು ಹೈಕಮಾಂಡ್‌ ತೆಗೆದುಕೊಳ್ಳುತ್ತದೆ. ಕಲ್ಯಾಣ ಕರ್ನಾಟಕಕ್ಕೆ ಡಿಸಿಎಂ ಸ್ಥಾನ ಕೊಡಬೇಕು. ನಮ್ಮ ಭಾಗದ ಇಬ್ಬರು ಕಾಂಗ್ರೆಸ್‌ನಿಂದ ಸಿಎಂ ಆಗಿದ್ದರು, ಈಗ ಡಿಸಿಎಂ ಕೊಡಲಿ.

-ಶರಣಬಸಪ್ಪ ದರ್ಶನಾಪುರ, ಸಣ್ಣ ಕೈಗಾರಿಕೆಗಳ ಸಚಿವ

ಸಿಎಂ, ಡಿಸಿಎಂಗೆ ಒತ್ತಡದ ಕಾರ್ಯಭಾರ

ಗಳಿದ್ದಾಗ ಹೆಚ್ಚುವರಿ ಡಿಸಿಎಂಗಳು ಹೊಣೆಗಾರಿಕೆ ಹೊತ್ತುಕೊಳ್ಳಬಹುದು. ಇದು ಲೋಕಸಭೆ ಚುನಾವಣೆಗೆ ಅನುಕೂಲ ಮಾಡಿಕೊಡಲಿದೆ. ನಾನು ಡಿಸಿಎಂ ಆಕಾಂಕ್ಷಿಯಲ್ಲ. ನನ್ನನ್ನು ಸಚಿವ, ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದಾರೆ.

-ಬಿ. ನಾಗೇಂದ್ರ, ಸಚಿವ

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ರಾಜ್ಯಕ್ಕೆ ಒಳ್ಳೆಯದಾಗುವ ರೀತಿಯಲ್ಲಿ ನಿರ್ಣಯ ಕೈಗೊಳ್ಳುತ್ತಾರೆ. ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನನ್ನ ಬೆಂಬಲ ಇರುತ್ತದೆ.

- ಈಶ್ವರ್‌ ಖಂಡ್ರೆ, ಅರಣ್ಯ ಸಚಿವ

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡಿದರೆ ತಪ್ಪೇನಿಲ್ಲ. ಬೇರೆ ರಾಜ್ಯಗಳಲ್ಲೂ ಇದೆ. ಕರ್ನಾಟಕದಲ್ಲೂ ಈ ಹಿಂದೆ ಹೆಚ್ಚು ಡಿಸಿಎಂ ಹುದ್ದೆಗಳಿದ್ದವು. ಈಗ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡುವುದರಿಂದ ಲಾಭವೂ ಇಲ್ಲ; ನಷ್ಟವೂ ಇಲ್ಲ.

– ಎನ್‌.ಎಸ್‌. ಬೋಸರಾಜು, ಸಣ್ಣ ನೀರಾವರಿ ಸಚಿವ

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.