ಪೊಲೀಸ್ ಠಾಣೆ, ಫೈನಾನ್ಸ್ ಕಂಪನಿ ಆವರಣದಲ್ಲಿ ಅವಘಡ: 31 ವಾಹನಗಳು ಭಸ್ಮ
Team Udayavani, Mar 12, 2022, 11:31 AM IST
ಬೆಂಗಳೂರು: ಕೆಂಗೇರಿ ಹಾಗೂ ಕಾಡುಗೊಂಡನಹಳ್ಳಿ ಪೊಲೀಸ್ ಠಾಣೆಗಳ ಆವರಣ ಹಾಗೂ ಮತ್ತೂಂದು ಫೈನಾನ್ಸ್ ಕಂಪನಿ ಆವರ ಣದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 31 ವಾಹನಗಳು ಸುಟ್ಟು ಕರಕಲಾಗಿವೆ.
ಕೆಂಗೇರಿ ಪೊಲೀಸ್ ಠಾಣೆ ಬಳಿಯಿರುವ ಕಾಂಪೌಂಡ್‌ಗೆ ಹೊಂದಿಕೊಂಡಂತಿರುವ ರೈಲ್ವೆ ಹಳಿ ಪಕ್ಕದಲ್ಲಿರುವ ಒಣ ಹುಲ್ಲಿಗೆ ಯಾರೋ ಕಿಡಿಗೇಡಿಗಳು ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೆಂಕಿ ಹಚ್ಚಿದ್ದಾರೆ. ಪರಿಣಾಮ ಠಾಣಾ ಆವರಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು, ಆಟೋ, ಕಾರು ಮತ್ತು ಜೀಪಿಗೆ ಬೆಂಕಿ ತಗುಲಿ ದ್ದು, 18 ವಾಹನಗಳು ಬೆಂಕಿಗಾಹುತಿಯಾಗಿವೆ.
ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿ 2 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಈ ಹಾನಿಗೀಡಾದ ವಾಹ ನಗಳ ಪೈಕಿ ಕೆಲವು ದರೋಡೆ, ಸುಲಿಗೆ ಹಾಗೂ ಇತರೆ ಅಪರಾಧ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿತ್ತು ಎಂದು ಪೊಲೀಸರು ಹೇಳಿದರು.
ಮತ್ತೊಂದು ಪ್ರಕರಣದಲ್ಲಿ ಕೆ.ಜಿ. ಹಳ್ಳಿ ಠಾಣೆ ಆವರಣದಲ್ಲಿ ಜಪ್ತಿ ಮಾಡಿರುವ 6 ವಾಹನಗಳು ಬೆಂಕಿಗಾಹುತಿಯಾಗಿವೆ. ಮಧ್ಯಾಹ್ನ ಏಕಾಏಕಿ ಒಂದು ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಉಳಿದ ವಾಹನಗಳಿಗೆ ಹರಡಿ ಒಟ್ಟು 6 ಕಾರುಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಧಾವಿಸಿ ಬೆಂಕಿ ನಂದಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಬಾಣಸ ವಾಡಿಯ ಎಚ್‌ಬಿಆರ್ ಲೇಔಟ್‌ನ ಅಯೋಧ್ಯ ಮೈದಾನದಲ್ಲಿ ಖಾಸಗಿ ಫೈನಾನ್ಸ್ ಕಂಪನಿಗೆ ಸೇರಿದ 7 ಕಾರುಗಳಿಗೆ ಬೆಂಕಿ ತಗುಲಿದೆ. ಬೆಳಗ್ಗೆ 9 ಗಂಟೆಗೆ ಬೆಂಕಿ ತಗುಲಿ ಕಾರುಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಿಸಿಲಿನ ತಾಪದಿಂದ ಮೊದಲು ಒಂದು ಕಾರಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.