Librarians: ಗ್ರಂಥಪಾಲಕರ ಮಾಸಿಕ ವೇತನದಲ್ಲಿ 3,196 ರೂ. ಹೆಚ್ಚಳ
12 ಸಾವಿರ ರೂ.ಗಳಿಂದ 15,196 ರೂ.ಗೆ ಏರಿಕೆ
Team Udayavani, Aug 17, 2023, 8:39 PM IST
ಬೆಂಗಳೂರು: ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸೆ.1 ರಿಂದ ಜಾರಿಗೆ ಬರುವಂತೆ ಗ್ರಂಥಾಲಯ ಮೇಲ್ವಿಚಾರಕರ ಕನಿಷ್ಠ ಮಾಸಿಕ ವೇತನವನ್ನು ಹೆಚ್ಚಿಸಿ ಆದೇಶಿಸಿರುವ ರಾಜ್ಯ ಸರ್ಕಾರ, ಮೇಲ್ವಿಚಾರಕರ ಕೆಲಸದ ಅವಧಿಯನ್ನು 6 ಗಂಟೆಯಿಂದ 8 ಗಂಟೆಗೆ ವಿಸ್ತರಿಸಿದೆ.
ಈ ಹಿಂದೆ ಮಾಸಿಕ 7 ಸಾವಿರ ರೂ. ಇದ್ದ ಕನಿಷ್ಠ ವೇತನವನ್ನು 12 ಸಾವಿರ ರೂ.ಗೆ ಹೆಚ್ಚಿಸಲಾಗಿತ್ತು. ಪ್ರತಿ ದಿನ 6 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸಬೇಕು ಎಂದು ಆದೇಶಿಸಲಾಗಿತ್ತು. ಕಳೆದ ಜುಲೈನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿದ್ದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಗ್ರಂಥಪಾಲಕರ ಸಂಘದ ಪ್ರತಿನಿಧಿಗಳು, ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪಿಸಿದ್ದರು. ಈ ವೇಳೆ ವೇತನ ಹೆಚ್ಚಿಸಲು ಭರವಸೆ ನೀಡಿದ್ದರು.
ಅದರಂತೆ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಿ, ಮೇಲ್ವಿಚಾರಕರ ಕರ್ತವ್ಯದ ಅವಧಿ ಹೆಚ್ಚಿಸಲಾಗಿದೆ. ಮಾಸಿಕ ಗೌರವ ವೇತನವನ್ನೂ 15,196.72 ರೂ.ಗೆ ಹೆಚ್ಚಳ ಮಾಡಿ ಆದೇಶಿಸಲಾಗಿದೆ. ಗ್ರಂಥಾಲಯ ಉಪಕರವನ್ನು ಅರ್‌ಡಿಪಿಆರ್ ಉಳಿಸಿಕೊಂಡು ಹೆಚ್ಚುವರಿ ವೇತನ ಪಾವತಿಸಲಿದೆ.
ದಿನಗಳು ಸಮಯ
ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಮತ್ತು ಮಧ್ಯಾಹ್ನ 2 ರಿಂದ ಸಂಜೆ 7
ಶನಿವಾರ, ಭಾನುವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ1 ಹಾಗೂ ಮಧ್ಯಾಹ್ನ 2 ರಿಂದ ಸಂಜೆ 6
ಬಸವಣ್ಣನವರ ಅರಿವೇ ಗುರು ತಣ್ತೀದ ಆಶಯದಂತೆ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳನ್ನಾಗಿ ಮಾರ್ಪಡಿಸಿ ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಗ್ರಾಮೀಣ ವಿಶ್ವವಿದ್ಯಾಲಯಗಳಂತೆ ರೂಪಿಸಲು ಈ ಮಹತ್ವಾಕಾಂಕ್ಷಿ ಹೆಜ್ಜೆ ಇರಿಸಲಾಗಿದೆ. ಸ್ಥಿರ ಸಮಾಜ ನಿರ್ಮಾಣವಾಗಲು ಪ್ರಬುದ್ಧ ಸಮಾಜದ ಅಗತ್ಯವಿದೆ.
ಪ್ರಿಯಾಂಕ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.