China: ಚೀನಾದಲ್ಲಿ 34,000 ಆನ್‌ಲೈನ್ ಖಾತೆಗಳು ರದ್ದು
ವದಂತಿ ಹಬ್ಬಿಸಿದ್ದಕ್ಕೆ ಚೀನಾದಲ್ಲಿ 6,300 ಮಂದಿಗೆ ಶಿಕ್ಷೆ
Team Udayavani, Dec 23, 2023, 9:14 PM IST
ನವದೆಹಲಿ: ಸಮಾಜದಲ್ಲಿ ಸುಸ್ಥಿರ ವಾತಾವರಣ ಉಂಟು ಮಾಡಲು, ವದಂತಿಗಳ ಮೇಲೆ ಕಡಿವಾಣ ಹಾಕಲು ಚೀನಾಡಳಿತ ಬಲವಾದ ಕ್ರಮ ತೆಗೆದುಕೊಂಡಿದೆ. ಒಟ್ಟು 34,000 ಆನ್‌ಲೈನ್ ಖಾತೆಗಳನ್ನು ರದ್ದು ಮಾಡಿದೆ. ಈ ಸಂಬಂಧ 4,800 ಪ್ರಕರಣಗಳನ್ನು ದಾಖಲಿಸಲಾಗಿದೆ, ಒಟ್ಟು 6,300 ವ್ಯಕ್ತಿಗಳಿಗೆ ಶಿಕ್ಷೆ ನೀಡಲಾಗಿದೆ. ಚೀನಾದ ಸಾರ್ವಜನಿಕ ಭದ್ರತಾ ಸಚಿವ ಲಿ ತಾಂಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂದಿನ ವರ್ಷ ಪೂರ್ಣ ಆನ್‌ಲೈನ್ ವದಂತಿಗಳಿಗೆ ಕಡಿವಾಣ ಹಾಕಲು ಕಾರ್ಯಾಚರಣೆ ನಡೆಸಲಾಗುತ್ತದೆ.
ಹಲವಾರು ದಾರಿಗಳ ಮೂಲಕ ಈ ಕಾರ್ಯಾಚರಣೆ ಪರಿಣಾಮಕಾರಿಯಾಗುವಂತೆ ನೋಡಿಕೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ಚೀನಾದಲ್ಲಿ ಕೊರೊನಾ ಹೆಚ್ಚಾದ ನಂತರ ವದಂತಿಗಳ ಪ್ರಮಾಣವೂ ಜಾಸ್ತಿಯಾಗಿದೆ. ಎಂದಿನಂತೆ ವ್ಯಕ್ತಿಗಳಿಗೆ ಅವಮಾನ ಮಾಡುವುದು, ಅವರ ಖಾಸಗಿ ವಿಚಾರ ಬಹಿರಂಗಗೊಳಿಸುವುದೂ ನಡೆಯುತ್ತಿದೆ. ಇವೆಲ್ಲವನ್ನೂ ಚೀನಾ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.