Rain: ರಾಜ್ಯದಲ್ಲಿ ಶೇ.35ರಷ್ಟು ಮಳೆ ಕೊರತೆ
Team Udayavani, Nov 17, 2023, 1:48 AM IST
ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ ಶೇ. 35ರಷ್ಟು ಮಳೆ ಕೊರತೆ ಆಗಿದ್ದು, ಮಳೆ ಕೊರತೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಕೊಡಗು, ಹಾಸನ ಹೊರತುಪಡಿಸಿ ರಾಜ್ಯದ ಉಳಿದ ಎಲ್ಲ ಜಿಲ್ಲೆಗಳಲ್ಲೂ ಮಳೆ ಕೊರತೆ ಮುಂದುವರಿದಿದೆ. ದಕ್ಷಿಣ ಕನ್ನಡದಲ್ಲಿ ಶೇ. 9, ಮೈಸೂರಿನಲ್ಲಿ ಶೇ. 49, ಕೊಡಗು ಶೇ. 18, ಹಾಸನ ಶೇ. 13ರಷ್ಟು ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ.
ಬೆಂಗಳೂರಿನಲ್ಲಿ ಶೇ. 17, ಉಡುಪಿಯಲ್ಲಿ ಶೇ. 25, ಉತ್ತರ ಕನ್ನಡ ಶೇ. 19, ಬೆಂ. ಗ್ರಾಮಾಂತರ ಶೇ. 16, ಬಳ್ಳಾರಿಯಲ್ಲಿ ಶೇ. 86, ರಾಯಚೂರು, ಯಾದಗಿರಿ ಶೇ. 82, ಬಾಗಲಕೋಟೆ ಶೇ. 85, ವಿಜಯಪುರ ಶೇ. 77, ಬೀದರ್ ಶೇ. 79, ಕಲಬುರಗಿ, ಹಾವೇರಿ ತಲಾ ಶೇ. 64, ಧಾರವಾಡ ಶೇ. 60, ಬೆಳಗಾವಿ ಶೇ. 79, ಕೋಲಾರ ಜಿಲ್ಲೆಯಲ್ಲಿ ಶೇ. 57ರಷ್ಟು ಮಳೆ ಕೊರತೆ ಇರುವುದನ್ನು ಹವಾಮಾನ ಇಲಾಖೆ ದೃಢಪಡಿಸಿದೆ.
2024ರ ಆರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೀರಿಗೂ ಹಾಹಾಕಾರ ಉಂಟಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಶೇ. 86ಕ್ಕೂ ಹೆಚ್ಚಿನ ಮಳೆ ಕೊರತೆ ಎದುರಾಗಿರುವುದರಿಂದ ಇಲ್ಲಿ ನೀರಿನ ಅಭಾವ ಉಂಟಾಗುತ್ತಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.