371 J ಜಾರಿಗೆ ಪ್ರತ್ಯೇಕ ಇಲಾಖೆ: ಸಿದ್ದರಾಮಯ್ಯ ಘೋಷಣೆ
Team Udayavani, Sep 18, 2023, 12:04 AM IST
ಕಲಬುರಗಿ: ಪ್ರತ್ಯೇಕ ಸಚಿವಾಲಯ ರಚಿಸುವ ಮೂಲಕ 371ನೇ ಜೆ ಕಲಂ ಪರಿಣಾಮಕಾರಿ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಲ್ಯಾಣ ಕರ್ನಾಟಕ ದಿನಾಚರಣೆ ನಿಮಿತ್ತ ಆಗಮಿಸಿದ್ದ ಸಿದ್ದರಾಮಯ್ಯ ಅವರು ಧ್ವಜಾರೋಹಣ ನಡೆಸಿ, ಸರ್ದಾರ್ ವಲ್ಲಭಭಾಯ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತ್ಯೇಕ ಸಚಿವಾಲಯ ಕುರಿತು ಸಭೆ ಮಾಡಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕಾಮಗಾರಿಗಳನ್ನು ತ್ವರಿತವಾಗಿ ಪೂರೈಸಲು ಪ್ರತ್ಯೇಕ ಎಂಜಿನಿಯರಿಂಗ್ ವಿಭಾಗ ರಚಿಸಲು ಈಗಾಗಲೇ ಕಳುಹಿಸಿರುವ ಪ್ರಸ್ತಾವನೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಕ್ಷೇತ್ರವನ್ನು ಬಲಗೊಳಿಸುವ ನಿಟ್ಟಿನಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು. ಈಗಾಗಲೇ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ತಯಾರಿಸಲು ಸೂಚಿಸಲಾಗಿದೆ. ಈ ಭಾಗದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುವುದು. ಬರಗಾಲ ಕುರಿತು ಕೇಂದ್ರಕ್ಕೆ ಪತ್ರ ಬರೆದು ನೆರವಿಗೆ ಕೋರಲಾಗಿದೆ. ಆದರೆ ಪ್ರಧಾನಿಯವರಿಂದ ಯಾವುದೇ ಉತ್ತರ ಬಂದಿಲ್ಲ. ಈ ನಿಟ್ಟಿನಲ್ಲಿ ಸರ್ವಪಕ್ಷಗಳ ಸಭೆ ನಡೆಸಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.