ಪಿಯು ವಾರ್ಷಿಕ ಪರೀಕ್ಷೆಗೆ 40 ಪುಟಗಳ ಉತ್ತರ ಪತ್ರಿಕೆ
Team Udayavani, Feb 25, 2020, 3:07 AM IST
ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಅನುಕೂಲ ಮತ್ತು ಮೌಲ್ಯಮಾಪಕರ ಸಹಾಯಕ್ಕಾಗಿ ಪಿಯು ಶಿಕ್ಷಣ ಇಲಾಖೆಯು ಪ್ರಸಕ್ತ ಸಾಲಿನಿಂದ 40 ಪುಟಗಳ ಉತ್ತರ ಪತ್ರಿಕೆ ನೀಡಲು ತೀರ್ಮಾನಿಸಿದೆ. ಈ ಹಿಂದಿನ ವರ್ಷಗಳಲ್ಲಿ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ 24 ಪುಟಗಳ ಉತ್ತರ ಪತ್ರಿಕೆಯನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಗುತಿತ್ತು. 24 ಪುಟಗಳ ಉತ್ತರ ಪತ್ರಿಕೆ ಮುಗಿದ ಬಳಿಕ ವಿದ್ಯಾರ್ಥಿಗಳು ಪಡೆಯುವ ಹೆಚ್ಚುವರಿ ಹಾಳೆಯಲ್ಲಿ ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ನಮೂದಿಸಿ ಬಳಿಕ ಮುಖ್ಯ ಉತ್ತರ ಪತ್ರಿಕೆ ಜತೆ ಟ್ಯಾಗ್ ಮಾಡಬೇಕಿತ್ತು.
ಕೊಠಡಿ ಮೇಲ್ವಿಚಾರಕರು ಟ್ಯಾಗ್, ಹಾಳೆ ವಿತರಣೆಯಲ್ಲಿ ಶ್ರಮಿಸಬೇಕಿತ್ತು. ಅಲ್ಲದೆ ಇದು ವಿದ್ಯಾರ್ಥಿಗಳು ಮತ್ತು ಮೌಲ್ಯಮಾಪಕರಿಗೂ ತೊಡಕಾಗಿತ್ತು. ಹೀಗಾಗಿ ವಿದ್ಯಾರ್ಥಿಗಳು, ಮೌಲ್ಯಮಾಪಕರು ಹಾಗೂ ಕೊಠಡಿ ಮೇಲ್ವಿಚಾರಕರ ಹಿತದೃಷ್ಟಿಯಿಂದ ಇಲಾಖೆಯು ಈ ವರ್ಷದಿಂದಲೇ ಮುಖ್ಯ ಉತ್ತರ ಪತ್ರಿಕೆಯ ಪುಟಗಳ ಸಂಖ್ಯೆಯನ್ನೇ ಏರಿಕೆ ಮಾಡಿದೆ ಎಂದು ಪಿಯು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಉದಯವಾಣಿಗೆ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಏನು ಅನುಕೂಲ: ಉತ್ತರ ಪತ್ರಿಕೆಯು 40 ಪುಟಗಳಿಂದ ಕೂಡಿರುವುದರಿಂದ ಪದೇಪದೆ ಹೆಚ್ಚುವರಿ ಹಾಳೆ ಪಡೆಯುವ ಅಗತ್ಯವಿಲ್ಲ. 2-3 ಬಾರಿ ಉತ್ತರ ಪತ್ರಿಕೆಯಲ್ಲಿ ನೋಂದಣಿ ಸಂಖ್ಯೆ ಬರೆಯುವುದು ತಪ್ಪುತ್ತದೆ. ಉತ್ತರ ಪತ್ರಿಕೆ ಟ್ಯಾಗ್ ಮಾಡುವ ಸಮಸ್ಯೆಯಿಲ್ಲ. ಹೆಚ್ಚುವರಿ ಹಾಳೆ ಮುಖ್ಯ ಉತ್ತರ ಪತ್ರಿಕೆಯಿಂದ ಬೇರ್ಪಟ್ಟು ಅಂಕ ಕಡಿಮೆ ಬರಬಹುದೆಂಬ ಆತಂಕವಿಲ್ಲ. ಕೆಲವು ವಿದ್ಯಾರ್ಥಿಗಳ ಹೆಚ್ಚುವರಿ ಹಾಳೆ ಬೇರೆ ವಿದ್ಯಾರ್ಥಿಗಳ ಮುಖ್ಯ ಉತ್ತರ ಪತ್ರಿಕೆಯೊಂದಿಗೆ ಸೇರಬಹುದಾದ ಸಾಧ್ಯತೆ ತಪ್ಪಲಿದೆ. ಇದೆಲ್ಲದರ ಜತೆ ಒಂದೇ ಉತ್ತರ ಪತ್ರಿಕೆಯಲ್ಲಿ ಸರಾಗವಾಗಿ ಉತ್ತರ ಬರೆಯಬಹುದಾಗಿದೆ.
ಮೌಲ್ಯಮಾಪಕರಿಗೆ ಆಗುವ ಅನುಕೂಲ: ಮೌಲ್ಯಮಾಪಕರು ಎಷ್ಟೇ ಜಾಗರೂಕರಾಗಿದ್ದರೂ ಉತ್ತರ ಪತ್ರಿಕೆಯಲ್ಲಿ ಕೆಲವೊಂದು ಸಣ್ಣಪುಟ್ಟ ಲೋಪಗಳು ಆಗುವುದುಂಟು. ವಿದ್ಯಾರ್ಥಿಗಳು ಪಡೆದಿರುವ ಹೆಚ್ಚುವರಿ ಹಾಳೆಯಿಂದಲೇ ಕಣ್‌ತಪ್ಪಾಗುವ ಸಾಧ್ಯತೆ ಹೆಚ್ಚಿರುತ್ತದೆ. ಅಂಕಗಳ ಎಣಿಕೆ ವೇಳೆ ಹೆಚ್ಚುವರಿ ಹಾಳೆಗಳು ಬಿಟ್ಟುಹೋಗುವ ಸಾಧ್ಯತೆ ಇರುತ್ತದೆ. ಅಲ್ಲದೆ, ಫಲಿತಾಂಶದ ನಂತರ ಉತ್ತರ ಪತ್ರಿಕೆ ಸ್ಕ್ಯಾನಿಂಗ್, ಮರುಮೌಲ್ಯಮಾಪನ ಮತ್ತು ಅಂಕಗಳ ಮರುಎಣಿಕೆ ಸಂದರ್ಭದಲ್ಲಿ ಹೆಚ್ಚುವರಿ ಹಾಳೆಗಳನ್ನು ಮುಖ್ಯ ಉತ್ತರ ಪತ್ರಿಕೆಯಿಂದ ಬೇರ್ಪಡಿಸುವ ಸಂದರ್ಭ ಇರುತ್ತದೆ. 40 ಪುಟಗಳ ಉತ್ತರ ಪತ್ರಿಕೆ ನೀಡುವುದರಿಂದ ಮೌಲ್ಯಮಾಪಕರಿಗೂ ಹೆಚ್ಚಿನ ಅನುಕೂಲ ಆಗಲಿದೆ.
ಪ್ರಾಂಶುಪಾಲರಿಗೆ ಸೂಚನೆ: ದ್ವಿತೀಯ ಪಿಯು 2020ರ ವಾರ್ಷಿಕ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯಲ್ಲಿ ಹೆಚ್ಚುವರಿ ಹಾಳೆ ನೀಡುವುದನ್ನು ತಪ್ಪಿಸಲು, ವಿದ್ಯಾರ್ಥಿಗಳಿಗೆ ಉಂಟಾಗುವ ತೊಂದರೆ, ಗೊಂದಲ ನಿವಾರಿಸಲು ಇಲಾಖೆ ಕೂಲಂಕಷವಾಗಿ ಪರಿಶೀಲಿಸಿ, 24 ಪುಟಗಳ ಉತ್ತರ ಪತ್ರಿಕೆಗಳ ಬದಲಾಗಿ 40 ಪುಟಗಳ ಉತ್ತರ ಪತ್ರಿಕೆಯನ್ನು ನಿರ್ಧರಿಸಲಾಗಿದೆ. ಈ ಬಗ್ಗೆ ಎಲ್ಲ ಕಾಲೇಜುಗಳ ಪ್ರಾಂಶುಪಾಲರು ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಎ4 ಮಾದರಿಯ 30ಗೆರೆ ಹೊಂದಿರುವ ಒಂದು ಪುಟವನ್ನು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ರೂಪದಲ್ಲಿ ತೋರಿಸಬೇಕು ಎಂದು ಪಿಯು ಶಿಕ್ಷಣ ಇಲಾಖೆಯ ನಿರ್ದೇಶಕರು ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.