Nipah: 42 ಸ್ಯಾಂಪಲ್ ನೆಗೆಟಿವ್: ಕೇರಳ ನಿರಾಳ
- ಸದ್ಯಕ್ಕೆ ಹೊಸ ನಿಫಾ ಪ್ರಕರಣ ದೃಢಪಟ್ಟಿಲ್ಲ: ಸಚಿವೆ ವೀಣಾ ಜಾರ್ಜ್
Team Udayavani, Sep 17, 2023, 8:15 PM IST
ಕಲ್ಲಿಕೋಟೆ: ನಿಫಾ ಸೋಂಕಿನಿಂದ ಭೀತಿಗೊಳಗಾಗಿರುವ ಕೇರಳಕ್ಕೆ ಸ್ವಲ್ಪಮಟ್ಟಿಗೆ ನಿರಾಳತೆಯ ಸುದ್ದಿ ಎಂಬಂತೆ, ಕಳೆದ 24 ಗಂಟೆಗಳಲ್ಲಿ ಯಾವುದೇ ಹೊಸ ಪ್ರಕರಣ ದೃಢಪಟ್ಟಿಲ್ಲ. ಅಲ್ಲದೇ, ಪರೀಕ್ಷೆಗೆಂದು ಕಳುಹಿಸಲಾಗಿದ್ದ ಎಲ್ಲ 42 ಮಾದರಿಗಳ ಫಲಿತಾಂಶವೂ ನೆಗೆಟಿವ್ ಎಂದು ಬಂದಿದೆ.
ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದ, ಹೈರಿಸ್ಕ್ ಸಂಪರ್ಕಿತರು ಎಂದು ಗುರುತಿಸಲಾಗಿದ್ದ 42 ಮಂದಿಯ ಸ್ಯಾಂಪಲ್‌ಗಳನ್ನು ಪರೀಕ್ಷೆಗೆಂದು ಕಳುಹಿಸಲಾಗಿತ್ತು. ಇವುಗಳ ಫಲಿತಾಂಶಗಳು ನೆಗೆಟಿವ್ ಎಂದು ಬಂದಿದ್ದು, ಇನ್ನೂ ಕೆಲವು ಸ್ಯಾಂಪಲ್‌ಗಳ ವರದಿ ಬರಬೇಕಷ್ಟೆ ಎಂದು ಭಾನುವಾರ ಬೆಳಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಮಾರ್ಗಸೂಚಿಯ ಪ್ರಕಾರ, ಕೊನೆಯ ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದ ನಂತರ 42 ದಿನಗಳ ಕಾಲ ಮುನ್ನೆಚ್ಚರಿಕೆ ವಹಿಸಲೇಬೇಕು. ಹೀಗಾಗಿ, ಯಾರೂ ಮೈಮರೆಯಬಾರದು. ಪ್ರತಿಯೊಬ್ಬರೂ ಮಾರ್ಗಸೂಚಿ ಪಾಲಿಸುತ್ತಾ ಎಚ್ಚರಿಕೆಯಿಂದಿರಬೇಕು ಎಂದೂ ಅವರು ಸೂಚಿಸಿದ್ದಾರೆ. ಜತೆಗೆ, ಎಲ್ಲ ನಿಫಾ ಸೋಂಕಿತರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಚಿಂತಾಜನಕ ಸ್ಥಿತಿಗೆ ಹೋಗಿದ್ದ 9 ವರ್ಷದ ಬಾಲಕನ ಆರೋಗ್ಯವೂ ಸುಧಾರಿಸುತ್ತಿದೆ ಎಂದೂ ವೀಣಾ ಅವರು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 6 ನಿಫಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ.
ಇದೇ ವೇಳೆ, ಕೇರಳ ಸರ್ಕಾರವು ಇ-ಸಂಜೀವಿನಿ ಟೆಲಿ ಮೆಡಿಸಿನ್ ವ್ಯವಸ್ಥೆಯ ಅನ್ವಯ ನಿಫಾ ಪ್ರಕರಣಗಳಿಗೆಂದೇ ಕಲ್ಲಿಕೋಟೆಯಲ್ಲಿ ವಿಶೇಷ ಒಪಿಡಿ(ಹೊರರೋಗಿಗಳ) ಸೇವೆಯನ್ನು ಆರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.