4ಜಿ ಡೌನ್ ಲೋಡ್ ಸ್ಪೀಡ್ ಜಿಯೋ ಮುಂದೆ
Team Udayavani, Oct 18, 2021, 9:26 PM IST
ನವದೆಹಲಿ: ರಿಲಯನ್ಸ್ ಜಿಯೋ ಪ್ರತಿ ಸೆಕೆಂಡಿಗೆ ಸರಾಸರಿ 20.9 ಮೆಗಾಬೈಟ್ (ಎಂಬಿಪಿಎಸ್) ಡೌನ್ಲೋಡ್ ವೇಗ ಕಾಯ್ದುಕೊಳ್ಳುವ ಮೂಲಕ 4ಜಿ ವಿಭಾಗದಲ್ಲಿ ಅಕ್ಟೋಬರ್ ತಿಂಗಳಲ್ಲಿ ಕೂಡ ಮೊದಲ ಸ್ಥಾನದಲ್ಲಿ ಮುಂದುವರೆದಿದೆ.
ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಬಿಡುಗಡೆ ಮಾಡಿರುವ ವರದಿ ಪ್ರಕಾರ, ಸೆಪ್ಟೆಂಬರ್ ತಿಂಗಳಲ್ಲಿ ರಿಲಯನ್ಸ್ ಜಿಯೋದ 4ಜಿ ನೆಟ್ವರ್ಕ್ ವೇಗವು ಶೇ 15ರಷ್ಟು ಹೆಚ್ಚಾಗಿದೆ. ಅದರ ಪ್ರತಿಸ್ಪರ್ಧಿ ಕಂಪೆನಿಗಳಾದ ಭಾರ್ತಿ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ (ವಿಐ) ವೇಗವು ತಿಂಗಳಿಂದ ತಿಂಗಳಿಗೆ ಕ್ರಮವಾಗಿ ಸುಮಾರು ಶೇ 85 ಮತ್ತು ಶೇ 60ರಷ್ಟು, ಅಂದರೆ 11.9 ಎಂಬಿಪಿಎಸ್ ಹಾಗೂ 14.4 ಎಂಬಿಪಿಎಸ್ ಗೆ ಏರಿಕೆಯಾಗಿದೆ.
ಇನ್ನು 7.2 ಎಂಬಿಪಿಎಸ್ ಡೇಟಾ ವೇಗ ಹೊಂದಿರುವ ವೊಡಾಫೋನ್ ಐಡಿಯಾ ಅಪ್ ಲೋಡ್ ವಿಭಾಗದಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ.
ಡೌನ್ ಲೋಡ್ ವೇಗವು ಗ್ರಾಹಕರು ಅಂತರ್ಜಾಲದಿಂದ ಮಾಹಿತಿಗಳನ್ನು ಪಡೆದುಕೊಳ್ಳಲು ನೆರವಾಗುತ್ತದೆ. ಅಪ್ ಲೋಡ್ ವೇಗವು ತಮ್ಮ ಸಂಪರ್ಕದಲ್ಲಿರುವವರಿಗೆ ಚಿತ್ರಗಳು ಮತ್ತು ವಿಡಿಯೋಗಳನ್ನು ತ್ವರಿತವಾಗಿ ರವಾನಿಸಲು ನೆರವಾಗುತ್ತದೆ.
ಟ್ರಾಯ್ ಪ್ರಕಾರ ಸೆಪ್ಟೆಂಬರ್ ತಿಂಗಳಲ್ಲಿ ಎಲ್ಲ ಮೂರೂ ಖಾಸಗಿ ಆಪರೇಟರ್ ಗಳ 4ಜಿ ಅಪ್ಲೋಡ್ ವೇಗದಲ್ಲಿ ಸುಧಾರಣೆಯಾಗಿದೆ.
ವೊಡಾಫೋನ್ ಐಡಿಯಾ ಸೆಪ್ಟೆಂಬರ್ ತಿಂಗಳಲ್ಲಿ 7.2 ಎಂಬಿಪಿಎಸ್ ಸರಾಸರಿ ಅಪ್ಲೋಡ್ ವೇಗ ಹೊಂದಿತ್ತು. ನಂತರದ ಸ್ಥಾನದಲ್ಲಿ 6.2 ಎಂಬಿಪಿಎಸ್ ವೇಗ ಇರುವ ರಿಲಯನ್ಸ್ ಜಿಯೋ ಇದ್ದರೆ, ಭಾರ್ತಿ ಏರ್ಟೆಲ್ 4.5 ಎಂಬಿಪಿಎಸ್ ವೇಗದೊಂದಿಗೆ ಕೊನೆಯ ಸ್ಥಾನದಲ್ಲಿದೆ.
ಸರ್ಕಾರಿ ಸ್ವಾಮ್ಯದ ದೂರಸಂರ್ಪಕ ಸಂಸ್ಥೆ ಬಿಎಸ್ಎನ್ಎಲ್, ಆಯ್ದ ಪ್ರದೇಶಗಳಲ್ಲಿ 4ಜಿ ಸಂಪರ್ಕವನ್ನು ಕಲ್ಪಿಸಿದೆ. ಆದರೆ, ಅದರ ನೆಟ್ವರ್ಕ್ ವೇಗವನ್ನು ಟ್ರಾಯ್ ಚಾರ್ಟ್ ನಲ್ಲಿ ನಮೂದಿಸಿಲ್ಲ.
ಮೈಸ್ಪೀಡ್ ಆಪ್ ಸಹಾಯದೊಂದಿಗೆ ದೇಶಾದ್ಯಂತ ರಿಯಲ್ ಟೈಮ್ ಆಧಾರದಲ್ಲಿ ದತ್ತಾಂಶಗಳನ್ನು ಸಂಗ್ರಹಿಸುವ ಟ್ರಾಯ್, ಅದರ ಮೂಲಕ ಸರಾಸರಿ ವೇಗವನ್ನು ಲೆಕ್ಕ ಹಾಕುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್ ಪೇ ಇನ್ನು ಎಲ್ಲರಿಗೂ ಲಭ್ಯ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.