ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ಮೋದಿ, ಯೋಗಿ, ಅಮಿತಾ ಶಾ, ನಡ್ಡಾ ಸೇರಿ ಘಟಾನುಘಟಿಗಳಿಂದ ಪ್ರಚಾರ

Team Udayavani, Apr 18, 2024, 7:00 AM IST

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ಬೆಂಗಳೂರು: ಮೊದಲ ಹಂತದಲ್ಲಿ ಮತದಾನ ನಡೆಯುವ ರಾಜ್ಯದ 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏ.20ರಿಂದ 24ರವರೆಗೆ ಭರ್ಜರಿ ಮತಬೇಟೆಗೆ ಬಿಜೆಪಿ ಸಿದ್ಧತೆ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ನಾಯಕರು ಪ್ರಚಾರ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ರಾಜ್ಯದಲ್ಲಿ ಒಬ್ಬರಾದ ಮೇಲೊಬ್ಬರಂತೆ ಪ್ರಚಾರ ನಡೆಸಲಿದ್ದಾರೆ. ಸಮಾವೇಶ ಹಾಗೂ ರೋಡ್‌ ಶೋ ಮೂಲಕ ಕೇಸರಿ ಕಹಳೆ ಮೊಳಗಿಸಲಿದ್ದಾರೆ.

ರಾಷ್ಟ್ರೀಯ ನಾಯಕರ ರಾಜ್ಯ ಪ್ರವಾಸದ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ.ಸುನೀಲ್‌ ಕುಮಾರ್‌, ಪ್ರಧಾನಿ ಮೋದಿಯವರು ಏ.20ರಂದು ರಾಜ್ಯದಲ್ಲಿ 2 ಬೃಹತ್‌ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಚಿಕ್ಕಬಳ್ಳಾಪುರದಲ್ಲಿ 1 ಲಕ್ಷ ಜನ ಸೇರುವ ಸಮಾವೇಶದಲ್ಲಿ ಭಾಗಿಯಾಗುತ್ತಾರೆ. ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್‌ ಸಭೆ ಉದ್ದೇಶಿಸಿ ಮಾತನಾಡುತ್ತಾರೆ. ಬೆಂಗಳೂರಿನ ನಾಲ್ಕು ಲೋಕಸಭಾ ಕ್ಷೇತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಸಭೆ ಆಯೋಜಿಸಲಾಗಿದೆ. “ವಿಜಯ ಸಂಕಲ್ಪ’ ಎಂಬ ಹೆಸರಿನಲ್ಲಿ ಈ ಸಮಾವೇಶ ನಡೆಯುತ್ತದೆ ಎಂದು ತಿಳಿಸಿದರು.

ಅಮಿತ್‌ ರೋಡ್‌ ಶೋ :
ಏ.23 ಹಾಗೂ 24ರಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ 2 ದಿನಗಳ ಕಾಲ ರಾಜ್ಯದಲ್ಲಿ ಪ್ರಚಾರ ನಡೆಸುವರು. ಏ.23ರಂದು ಬೆಳಗ್ಗೆ 10 ಗಂಟೆಗೆ ಯಶವಂತಪುರದಲ್ಲಿ ರೋಡ್‌ ಶೋ, 12.30ಕ್ಕೆ ಯಲಹಂಕದಲ್ಲಿ ಸಾರ್ವಜನಿಕ ಸಭೆ, 4 ಗಂಟೆಗೆ ಬೊಮ್ಮನಹಳ್ಳಿಯಲ್ಲಿ ರೋಡ್‌ ಶೋ, 7 ಗಂಟೆಗೆ ಮಹದೇವಪುರದಲ್ಲಿ ರೋಡ್‌ ಶೋ ನಡೆಸಲಿದ್ದಾರೆ. 24ರಂದು ಬೆಳಗ್ಗೆ 10 ಗಂಟೆಗೆ ಚಿಕ್ಕಮಗಳೂರಿನಲ್ಲಿ ಸಭೆಯಲ್ಲಿ ಭಾಗವಹಿಸಿ, 1 ಗಂಟೆಗೆ ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಪಾಲ್ಗೊಳ್ಳುವರು. 5 ಗಂಟೆಗೆ ಹುಬ್ಬಳ್ಳಿಯಲ್ಲಿ ರೋಡ್‌ ಶೋ ನಡೆಸುವರು ಎಂದರು.

ಯೋಗಿ ಪ್ರಚಾರ:
ಇನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಏ.24ರ ಬೆಳಗ್ಗೆ 10 ಗಂಟೆಗೆ ಬೃಹತ್‌ ರೋಡ್‌ ಶೋ ನಡೆಸುವರು. ಮಧ್ಯಾಹ್ನ 12 ಗಂಟೆಗೆ ಮಡಿಕೇರಿಯಲ್ಲಿ, ಸಂಜೆ 4 ಗಂಟೆಗೆ ಉಡುಪಿಯ ಮಲ್ಪೆ ಕಡಲ ತಟದಲ್ಲಿ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. 21ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, 24ರಂದು ರಾಜನಾಥ್‌ ಸಿಂಗ್‌ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಸಂಕಲ್ಪ ಪತ್ರದ ಕನ್ನಡ ಅನುವಾದ, ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ ಕಾರ್ಯಕ್ರಮದ ವಿಡಿಯೋ ಬಿಡುಗಡೆ ಮಾಡಲಾಯಿತು.

ಏ.20 – ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಪ್ರಧಾನಿ ಮೋದಿ ಬೃಹತ್‌ ಸಮಾವೇಶ
ಏ. 21 – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಚಾರ ಸಭೆ.
ಏ. 23 – ಯಶವಂತಪುರ, ಬೊಮ್ಮನಹಳ್ಳಿ, ಮಹದೇವಪುರದಲ್ಲಿ ಅಮಿತ್‌ ಶಾ ರೋಡ್‌ ಶೋ, ಯಲಹಂಕದಲ್ಲಿ ಸಾರ್ವಜನಿಕ ಸಭೆ
ಏ. 24 – ಚಿಕ್ಕಮಗಳೂರು, ತುಮಕೂರಲ್ಲಿ ಅಮಿತ್‌ ಶಾ ಸಾರ್ವಜನಿಕ ಸಭೆ, ಹುಬ್ಬಳ್ಳಿಯಲ್ಲಿ ರೋಡ್‌ಶೋ. ರಾಜರಾಜೇಶ್ವರಿ ನಗರದಲ್ಲಿ ಯೋಗಿ ಆದಿತ್ಯನಾಥ್‌ ರೋಡ್‌ಶೋ. ಮಡಿಕೇರಿ, ಉಡುಪಿಯಲ್ಲಿ ಯೋಗಿ ಸಾರ್ವಜನಿಕ ಸಭೆ.

ಟಾಪ್ ನ್ಯೂಸ್

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arest

Kundapura: ಅಂಬರ್‌ ಗ್ರೀಸ್‌ ಮಾರಾಟ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.