ಅತಿಥಿ ಉಪನ್ಯಾಸಕರ ವೇತನ 5 ಸಾವಿರ ಏರಿಕೆ; ಜ. 1ರಿಂದ ಅನ್ವಯವಾಗುವಂತೆ ಜಾರಿ
Team Udayavani, Dec 29, 2023, 11:43 PM IST
ಬೆಂಗಳೂರು: ಸೇವೆ ಖಾಯಂ ಗೊಳಿಸುವಂತೆ ರಾಜ್ಯವ್ಯಾಪಿ ಮುಷ್ಕರ ನಡೆಸುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಜತೆಗೆ ರಾಜ್ಯ ಸರಕಾರ ಸಂಧಾನಕ್ಕೆ ಮುಂದಾಗಿದೆ. ಜ. 1ರಿಂದ ಅನ್ವಯವಾಗುವಂತೆ ಹಾಲಿ ಇರುವ ಗೌರವಧನವನ್ನು 5 ಸಾವಿರ ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ.
ಅತಿಥಿ ಉಪನ್ಯಾಸಕರ ಸಂಘಟನೆಗಳ ಮುಖಂಡರ ಜತೆಗೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್ ವಿದ್ಯಾರ್ಹತೆ, ಅನುಭವದ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಗೌರವಧನ 26 ಸಾವಿರ ದಿಂದ 31 ಸಾವಿರ ರೂ.ವರೆಗೆ ಇದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 10,600 ಅತಿಥಿ ಉಪನ್ಯಾಸಕರಿಗೂ ವೇತನ ಹೆಚ್ಚಳದ ಪ್ರಯೋ ಜನ ಸಮಾನವಾಗಿ ದೊರಕಲಿದೆ. ರಾಜ್ಯದ ಬೊಕ್ಕಸಕ್ಕೆ ಇದರಿಂದ ವಾರ್ಷಿಕ 55 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ ಎಂದರು.
ನಿವೃತ್ತರಿಗೆ ಭದ್ರತ ಇಡುಗಂಟು
ಅತಿಥಿ ಉಪನ್ಯಾಸಕರಾಗಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿ, 60 ವರ್ಷಕ್ಕೆ ನಿವೃತ್ತರಾಗುವವರಿಗೆ ಭದ್ರತ ಇಡಗಂಟು ನೀಡಲು ನಿರ್ಧರಿಸಲಾಗಿದೆ. ವಾರ್ಷಿಕ 50 ಸಾವಿರ ರೂ.ಗಳಂತೆ ಲೆಕ್ಕಹಾಕಿ 5 ಲಕ್ಷ ರೂ. ಧನಸಹಾಯ ನೀಡಲಾಗುವುದು. ಇದಕ್ಕಾಗಿ 72 ಕೋಟಿ ರೂ. ಕಾಯ್ದಿರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಪ್ರ.ದರ್ಜೆ ಕಾಲೇಜುಗಳ ಪ್ರಾಂಶುಪಾಲರು, ಖಾಯಂ ಸಿಬಂದಿ ಅತಿಥಿ ಉಪನ್ಯಾಸಕರನ್ನು ಗೌರವದಿಂದ ನಡೆಸಿಕೊಳ್ಳಬೇಕು. ಗೌರವಕ್ಕೆ ಚ್ಯುತಿ ಬರದಂತೆ ವರ್ತಿಸಬೇಕು. ಕೌನ್ಸೆಲಿಂಗ್ ಮೂಲಕ ಆಯ್ಕೆಯಾದವರಿಗೆ ಕೆಲಸದ ಅವಧಿ ಕಡಿಮೆಯ ಕಾರಣ ವಜಾ ಮಾಡುವಂತಿಲ್ಲ. 10 ತಿಂಗಳು ಗೌರವಧನ ಕಡ್ಡಾಯ. ಪ್ರತೀ ತಿಂಗಳು ಒಂದು ವೇತನ ಸಹಿತ ರಜೆ ನೀಡಲು ಸಮ್ಮತಿಸಲಾಗಿದೆ. ಒಮ್ಮೆ ದಾಖಲೆ ಸಲ್ಲಿಸಿದವರು ಪ್ರತೀ ವರ್ಷ ಸಲ್ಲಿಸುವ ಅಗತ್ಯವಿಲ್ಲ. ಅದಕ್ಕೆ ಹೊಸ ತಂತ್ರಜ್ಞಾನ ಬಳಸಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.
ಏನಿತ್ತು? ಏನಾಗಲಿದೆ?
ಪ್ರಸ್ತುತ ಅನುಭವ ಆಧರಿಸಿ ಅತಿಥಿ ಉಪನ್ಯಾಸಕರಿಗೆ 26ರಿಂದ 31 ಸಾವಿರ ರೂ.ವರೆಗೆ ವೇತನ.
ಈಗ 5 ಸಾವಿರ ರೂ. ಏರಿಕೆ. 10,600 ಅತಿಥಿ ಉಪನ್ಯಾಸಕರಿಗೆ ಲಾಭ. ಸರಕಾರಕ್ಕೆ ವಾರ್ಷಿಕ 55 ಕೋಟಿ ರೂ. ಹೆಚ್ಚುವರಿ ಹೊರೆ.
60 ವರ್ಷಕ್ಕೆ ನಿವೃತ್ತರಾಗುವವರಿಗೆ ಭದ್ರತ ಇಡುಗಂಟು. ತಲಾ 5 ಲಕ್ಷ ರೂ. ನೆರವು, ಸರಕಾರಕ್ಕೆ ಹೆಚ್ಚುವರಿ 72 ಕೋಟಿ ರೂ. ನೀಡುವ ಒತ್ತಡ.
ಅತಿಥಿ ಉಪನ್ಯಾಸಕರಿಗೆ 5 ಲಕ್ಷ ರೂ. ಉಚಿತ ವಿಮೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
MUST WATCH
ಹೊಸ ಸೇರ್ಪಡೆ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.