Karnataka: 5 ಸಾವಿರ ಕೈ ಕಾರ್ಯಕರ್ತರಿಗೆ ಅಧಿಕಾರ ಭಾಗ್ಯ ಗ್ಯಾರಂಟಿ

ಗ್ಯಾರಂಟಿ ಜಾರಿಗೆ ವಿವಿಧ ಸಮಿತಿ, ರಾಜ್ಯಾಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ

Team Udayavani, Jan 11, 2024, 1:56 AM IST

CONGRESS FLAG IMP

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರವು ಪಕ್ಷಕ್ಕಾಗಿ ದುಡಿದ 5,000 ಕಾರ್ಯಕರ್ತರಿಗೆ ಅಧಿಕಾರ ಭಾಗ್ಯ ನೀಡಲು ನಿರ್ಧರಿಸಿದೆ. ಐದು ಗ್ಯಾರಂಟಿಗಳನ್ನು ನೀಡಿ ಅಧಿಕಾರ ಕ್ಕೇರಿದ ಕಾಂಗ್ರೆಸ್‌, ಈ ಯೋಜನೆಗಳ ಜಾರಿಗಾಗಿ ಉಸ್ತುವಾರಿಗಳನ್ನು ನೇಮಿಸಲಿದೆ. ವಾರದೊಳಗೆ ರಾಜ್ಯ, ಜಿಲ್ಲೆ ಮತ್ತು ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಪ್ರತ್ಯೇಕ ಸಮಿತಿಗಳನ್ನು ರಚಿಸಲು ಸರಕಾರ ನಿರ್ಧರಿಸಿದೆ.
ಹಾಲಿ ಸಂಸದರು, ಶಾಸಕರನ್ನು ಬಿಟ್ಟು ಮಾಜಿ ಸಂಸದರು, ಶಾಸಕರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಕೊಡಲು ತೀರ್ಮಾನಿಸಿದೆ.

ಅಲ್ಲದೆ, ಆಶ್ರಯ ಸಮಿತಿ, ಆರಾಧನ ಸಮಿತಿ, ಇಂಧನ ಇಲಾಖೆಯ ಉಪವಿಭಾಗ ಸಮಿತಿ, ಕೆರೆ ಉಸ್ತುವಾರಿ ಸಮಿತಿ, ಗ್ರಾಮ ಅರಣ್ಯ ಹಕ್ಕು ಸಮಿತಿ ಸಹಿತ ಸರಕಾರ ನಾಮನಿರ್ದೇಶನ ಮಾಡಬಹುದಾದ ಎಲ್ಲ ಸಮಿತಿಗಳಲ್ಲಿ ಸುಮಾರು 5 ಸಾವಿರ ಮಂದಿಗೆ ಅವಕಾಶ ನೀಡಲೂ ಮುಂದಾಗಿದೆ. ಕಾರ್ಯಕರ್ತರಿಗೆ ಇದು ಬಂಪರ್‌ ಕೊಡುಗೆಯಾಗಿದೆ.

“ಪಕ್ಷದ ಎಲ್ಲ ಕಾರ್ಯಕರ್ತರಿಗೂ ಅವಕಾಶ ಸಿಗಬೇಕು ಎನ್ನುವ ದೃಷ್ಟಿಯಿಂದ ಈಗ ನೇಮಕ ಮಾಡುವವರ ಅಧಿಕಾರಾವಧಿಯನ್ನು ಎರಡು ವರ್ಷ ಎಂದು ನಿಗದಿಪಡಿಸಿದ್ದೇವೆ. ಬಳಿಕದ ಎರಡು ವರ್ಷವನ್ನು ಇತರರಿಗೆ ಬಿಟ್ಟು ಕೊಡಬೇಕು ಎಂದು ಸ್ಪಷ್ಟವಾಗಿ ಸೂಚಿಸಿದ್ದೇವೆ’ ಎಂದೂ ಹೇಳಿದರು.

ಮೂಲಗಳ ಪ್ರಕಾರ, ಮೊದಲ ಹಂತದಲ್ಲಿ 40-42 ಜನರಿಗೆ ಅವಕಾಶ ಸಿಗಲಿದೆ. ಮೂರು, ನಾಲ್ಕು ಬಾರಿ ಶಾಸಕರಾದವರಿಗೆ ಮೊದಲ ಆದ್ಯತೆ, ಎರಡು ಬಾರಿ ಶಾಸಕರಾದವರಿಗೆ ಎರಡನೇ ಆದ್ಯತೆ ನೀಡಲಾಗಿದೆ. 10-12 ಜನ ಕಾರ್ಯಕರ್ತರಿಗೂ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.

2 ವರ್ಷ ನಿಯಮ ಸಚಿವರಿಗೂ ಅನ್ವಯ?
ನಿಗಮ-ಮಂಡಳಿಗಳ ಅಧ್ಯಕ್ಷರಿಗೆ ಅನುಸರಿಸಲಾಗುತ್ತಿರುವ ಎರಡು ವರ್ಷಗಳ ಅಧಿಕಾರಾವಧಿ ಷರತ್ತು ಸಚಿವರಿಗೆ ಅನ್ವಯ ಆಗುವುದಿಲ್ಲವೇ ಎಂಬ ಪ್ರಶ್ನೆ ಸಭೆಯಲ್ಲಿದ್ದ ಶಾಸಕರೊಬ್ಬರಿಂದ ರಣದೀಪ್‌ಸಿಂಗ್‌ ಸುರ್ಜೇವಾಲ ಹಾಗೂ ಸಿಎಂ ಸಿದ್ದರಾಮಯ್ಯಗೆ ತೂರಿಬಂದಾಗ ಕೆಲವು ನಾಯಕರು ತಬ್ಬಿಬ್ಟಾದರು. ಇದಕ್ಕೆ ಸುರ್ಜೇವಾಲ ಅವರಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಸಿಎಂ ಸಹಿತ ಇತರ ಪ್ರಮುಖ ನಾಯಕರು ನಕ್ಕು ಸುಮ್ಮನಾದರು.

ಐದು ವರ್ಷಗಳಲ್ಲಿ ಈಡೇರಿಸುವ ಭರವಸೆಗಳನ್ನು ಪ್ರಣಾಳಿಕೆ ಮೂಲಕ ಜನರಿಗೆ ಕೊಟ್ಟಿದ್ದೆವು. ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ 5 ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ಬಿಜೆಪಿಯವರು ಅವರ ಪ್ರಣಾಳಿಕೆಯ ಶೇ.10ಕ್ಕಿಂತ ಹೆಚ್ಚು ಭರವಸೆ ಈಡೇರಿಸಿರುವುದನ್ನು ಪ್ರಮಾಣೀಕರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ನಮ್ಮ 5 ಗ್ಯಾರಂಟಿಗಳ ಇನ್ನಷ್ಟು ಪರಿಣಾಮಕಾರಿ ಜಾರಿಗೆ ಸಮಿತಿ ರಚಿಸಿದ್ದೇವೆಯೇ ಹೊರತು, ಇವು ಗಂಜಿ ಕೇಂದ್ರಗಳಲ್ಲ.
-ಸಿದ್ದರಾಮಯ್ಯ, ಮುಖ್ಯಮಂತ್ರಿ

ಗ್ಯಾರಂಟಿ ಜಾರಿಗೆ ಹೊಸ ಸ್ವರೂಪ ಕೊಡುತ್ತಿದ್ದೇವೆ. ಯಾರ ಮಧ್ಯಸ್ತಿಕೆಯೂ ಇಲ್ಲದೆ, ಲೋಪದೋಷಗಳಿಲ್ಲದೆ ಪಾರದರ್ಶಕವಾಗಿ ನೇರ ಫ‌ಲಾನುಭವಿಗಳಿಗೆ ತಲುಪಿಸುತ್ತಿದ್ದೇವೆ. ಶೇ.80ರಷ್ಟು ಕುಟುಂಬಕ್ಕೆ ಒಂದಿಲ್ಲೊಂದು ಯೋಜನೆ ತಲುಪುತ್ತಿದೆ. ನಮ್ಮ ಆಚಾರ-ವಿಚಾರಗಳಿಗೆ ಪ್ರಚಾರ ನೀಡಲು ಸಮಿತಿಗಳನ್ನು ರಚಿಸಿದ್ದೇವೆ. -ಡಿ.ಕೆ.ಶಿವಕುಮಾರ್‌, ಉಪಮುಖ್ಯಮಂತ್ರಿ

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.