6,100 ಮಂದಿ ಮನೆಯಿಂದಲೇ ಮತದಾನಕ್ಕೆ ಅರ್ಜಿ; ಕ್ಷೇತ್ರದಲ್ಲಿ ಮತ ಪಡೆಯುವ ಪ್ರಕ್ರಿಯೆ ಆರಂಭ

Team Udayavani, Apr 14, 2024, 12:30 AM IST

6,100 ಮಂದಿ ಮನೆಯಿಂದಲೇ ಮತದಾನಕ್ಕೆ ಅರ್ಜಿ; ಕ್ಷೇತ್ರದಲ್ಲಿ ಮತ ಪಡೆಯುವ ಪ್ರಕ್ರಿಯೆ ಆರಂಭ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅಂಗವಿಕಲರ ಮನೆಗೆ ತೆರಳಿ ಮತದಾನ ಪಡೆಯುವ ಪ್ರಕ್ರಿಯೆ ಆರಂಭವಾಗಿದೆ.

ಜಿಲ್ಲಾ ಚುನವಾಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅವರು ಶನಿವಾರ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಪ್ರಕ್ರಿಯೆಗೆ ಚಾಲನೆ ನೀಡಿದರು.

ಉಡುಪಿ ಜಿಲ್ಲೆಯ ಕಾಪು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 4,474 ಹಾಗೂ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ತರೀಕೆರೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 1,626 ಮಂದಿ ಮನೆಯಿಂದಲೇ ಮತದಾನದ ಆಯ್ಕೆ ಪಡೆದುಕೊಂಡಿದ್ದಾರೆ.

ನಿರ್ದಿಷ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ನಿಯೋಜಿಸಿರುವ ತಂಡವು ಸಂಬಂಧಪಟ್ಟ ಮತದಾರರ ಮನೆಗೆ ಹೋಗಿ ಮತದಾನ ಪಡೆಯಲಿದೆ. ಮನೆಯಲ್ಲಿ ಮತದಾನದ ಅವಕಾಶ ಪಡೆದ ಮತದಾರರು ಆ ದಿನದಂದು ಮನೆಯಲ್ಲಿದ್ದು ಮತದಾನ ಮಾಡಬೇಕು. ಮನೆಯಿಂದಲೇ ಮತದಾನ ಮಾಡುವ ಆಯ್ಕೆ ಪಡೆದು ಹಕ್ಕು ಚಲಾಯಿಸದಿದ್ದವರು ಸಾರ್ವತ್ರಿಕ ಮತದಾನದ ದಿನದಂದು ಬೂತ್‌ಗೆ ಬಂದು ಮತದಾನ ಮಾಡಲು ಅವಕಾಶ ಇರುವುದಿಲ್ಲ ಎಂದು ಡಾ| ಕೆ. ವಿದ್ಯಾಕುಮಾರಿ ತಿಳಿಸಿದರು.

ಕ್ಷೇತ್ರದಾದ್ಯಂತ ಪ್ರಕ್ರಿಯೆ ಆರಂಭವಾಗಿದೆ. ಎ. 18ರೊಳಗೆ ಈ ಪ್ರಕ್ರಿಯೆ ಮುಗಿಸಬೇಕಿರುವುದರಿಂದ ಪ್ರತೀ ವಿಧಾನಸಭಾ ಕ್ಷೇತ್ರದಲ್ಲೂ ಪ್ರತ್ಯೇಕ ತಂಡ ರಚನೆ ಮಾಡಲಿದ್ದೇವೆ. ಒಂದೊಂದು ಕ್ಷೇತ್ರದಲ್ಲಿ ಮೂರು ದಿನ ಈ ಪ್ರಕ್ರಿಯೆ ನಡೆಯಲಿದೆ ಎಂದು ವಿವರಿಸಿದರು.

ಮಂಗಳೂರಿನಲ್ಲಿ ಎ. 15ರಿಂದ ಮತದಾನ
ದ.ಕ. ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎ. 15ರಿಂದ 85 ವರ್ಷಮೇಲ್ಪಟ್ಟವರು ಹಾಗೂ ಅಂಗವಿಕಲ ಮತದಾರರ ಮನೆಗಳಿಗೆ ತೆರಳಿ ಮತದಾನ ಪಡೆಯುವ ಪ್ರಕ್ರಿಯೆ ಆರಂಭಗೊಳ್ಳಲಿದೆ.

ಚುನಾವಣ ಆಯೋಗದ ನಿಯಮದಂತೆ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಮಾಡಬೇಕು. ಯಾರು ಕೂಡ ಮತದಾನದಿಂದ ವಂಚಿತರಾಗಬಾರದು ಎಂಬುದು ಉದ್ದೇಶದಿಂದ ಮನೆಗೆ ತೆರಳಿ ಮತದಾನ ಪಡೆಯುವ ಪ್ರಕ್ರಿಯೆ ಆರಂಭವಾಗಿದೆ. ಮತದಾರ ಯಾರಿಗೆ ಮತದಾನ ಮಾಡಿದ್ದಾರೆ ಎಂಬುದು ಗೌಪ್ಯವಾಗಿದ್ದು, ಉಳಿದಂತೆ ಎಲ್ಲ ಪ್ರಕ್ರಿಯೆಯನ್ನು ವಿಡಿಯೋ ಚಿತ್ರಣ ಮಾಡಲಾಗುತ್ತದೆ.
-ಡಾ| ಕೆ. ವಿದ್ಯಾಕುಮಾರಿ, ಚುನಾವಣಾಧಿಕಾರಿ

ಟಾಪ್ ನ್ಯೂಸ್

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

1-weqewewqe

Yakshagana;ಇನ್ನೂ ನೂರಾರು ಸುಶ್ರಾವ್ಯ ರಾಗಗಳ ಅಳವಡಿಕೆ ಸಾಧ್ಯ: ವಿದ್ವಾನ್‌ ಗಣಪತಿ ಭಟ್‌

Comet

Comet of the Century: ಅಕ್ಟೋಬರ್‌ನಲ್ಲಿ ಧೂಮಕೇತುಗಳ ಮೆರವಣಿಗೆ

isreal

Coastal People in Israel: ಸದ್ಯ ಸುರಕ್ಷಿತ, ಆದರೂ ಆದರೆ ಭವಿಷ್ಯವೇನು ಎಂಬ ಆತಂಕ

Udupi-DC-Meeting

Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ

Udupi-DC-Meeting

Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

Kota-poojary

Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

1-weqewewqe

Yakshagana;ಇನ್ನೂ ನೂರಾರು ಸುಶ್ರಾವ್ಯ ರಾಗಗಳ ಅಳವಡಿಕೆ ಸಾಧ್ಯ: ವಿದ್ವಾನ್‌ ಗಣಪತಿ ಭಟ್‌

Comet

Comet of the Century: ಅಕ್ಟೋಬರ್‌ನಲ್ಲಿ ಧೂಮಕೇತುಗಳ ಮೆರವಣಿಗೆ

isreal

Coastal People in Israel: ಸದ್ಯ ಸುರಕ್ಷಿತ, ಆದರೂ ಆದರೆ ಭವಿಷ್ಯವೇನು ಎಂಬ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.